ಬರ ಪರಿಹಾರ | ಹೇಳಿಕೆಗಳಲ್ಲೇ ಕಾಲಹರಣ ಮಾಡುತ್ತಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ: ಆರ್ ಅಶೋಕ್ ಟೀಕೆ

Date:

“ಬರಪರಿಹಾರ ಪಡೆಯಲು ಸರ್ಕಾರದ ಫ್ರೂಟ್ಸ್ ಡಾಟಾಬೇಸ್‌ನಲ್ಲಿ ರೈತರ ಮಾಹಿತಿ ದಾಖಲು ಮಾಡಬೇಕಿದ್ದು, ಇನ್ನೂ ಶೇ.25 ರಷ್ಟು ರೈತರ ಮಾಹಿತಿ ದಾಖಲಾಗಿಲ್ಲ. ಕಂದಾಯ ಸಚಿವ ಕೃಷ್ಣ ಬೈರೇಗೌಡರು ವಾರಕ್ಕೊಮ್ಮೆ ಸಭೆ ನಡೆಸಿ, ಇನ್ನೊಂದು ವಾರದೊಳಗೆ ಮೊದಲ ಕಂತಿನ ಬರ ಪರಿಹಾರ ಹಣ ಬಿಡುಗಡೆ ಮಾಡಲಾಗುವುದು ಎಂದು ಹೇಳುತ್ತಾ, ಕೇವಲ ಹೇಳಿಕೆಗಳಲ್ಲೇ ಕಾಲಹರಣ ಮಾಡುತ್ತಿದ್ದಾರೆ” ಎಂದು ವಿಪಕ್ಷ ನಾಯಕ ಆರ್‌.ಅಶೋಕ್ ಅಸಮಾಧಾನ ಹೊರಹಾಕಿದ್ದಾರೆ.

- Advertisement -

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ರಾಜ್ಯದಲ್ಲಿ ಬರಗಾಲ ಬಂದು ಏಳು ತಿಂಗಳಾದರೂ ಕಾಂಗ್ರೆಸ್ ಸರ್ಕಾರ ರೈತರಿಗೆ ಪರಿಹಾರ ನೀಡಿಲ್ಲ. ಈ ನಡುವೆ ಪಹಣಿಯಲ್ಲಿ ರೈತರ ಬೆಳೆ ಮಾಹಿತಿ ನೋಂದಣಿಗೆ ಸೂಪರ್‌ವೈಸರ್‌ಗಳು ಅನುಮೋದನೆ ನೀಡುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

“ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರು ತಿಂಗಳ ಕಾಲ ಮೀನಮೇಷ ಎಣಿಸುತ್ತಾ ಪರಿಹಾರ ಕೊಡಲೋ ಬೇಡವೋ ಎಂದು ಯೋಚಿಸುತ್ತಿದ್ದರು. ನಂತರ ಅರೆ ಮನಸ್ಸಿನಿಂದ ಕಳೆದ ನವೆಂಬರ್‌ನಲ್ಲಿ ಪ್ರತಿ ಎಕರೆಗೆ 2,000 ರೂ. ಬರ ಪರಿಹಾರ ಘೋಷಣೆ ಮಾಡಿದರು. ಅದಾಗಿ ಎರಡು ತಿಂಗಳಾದರೂ ಒಂದು ಬಿಡಿಗಾಸು ಕೂಡ ರೈತರಿಗೆ ತಲುಪಿಲ್ಲ” ಎಂದು ಹೇಳಿದ್ದಾರೆ.

“ಗ್ಯಾರೆಂಟಿ ಯೋಜನೆಗಳಿಂದ ಖಜಾನೆ ಖಾಲಿ ಆಗಿರುವುದರಿಂದ ಕಾಂಗ್ರೆಸ್‌ ಸರ್ಕಾರ ರೈತರ ವಿಷಯದಲ್ಲಿ ಚೆಲ್ಲಾಟ ಆಡುತ್ತಾ ಸತಾಯಿಸುತ್ತಿದೆ ಎಂಬ ಅನುಮಾನ ಬರುತ್ತಿದೆ. ಗಾಯದ ಮೇಲೆ ಬರೆ ಎಳೆದಂತೆ ಬೆಳೆ ಸಮೀಕ್ಷೆ ಅನುಮೋದನೆ ಆಗಿಲ್ಲ. ಅತ್ತ ಬರ ಪರಿಹಾರವೂ ಸಿಗದೆ ಇತ್ತ ಬೆಂಬಲ ಬೆಲೆಗೆ ತಮ್ಮ ಕೃಷಿ ಉತ್ಪನ್ನ ಮಾರಾಟ ಮಾಡಲೂ ಆಗದ ಪರಿಸ್ಥಿತಿಯಲ್ಲಿ ನೂರಾರು ರೈತರು ಸಿಲುಕಿದ್ದಾರೆ” ಎಂದು ವಿಪಕ್ಷ ನಾಯಕ ಆರ್‌.ಅಶೋಕ್ ದೂರಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಗ್ಗಿ ಬದುಕಿದವರು ಎದ್ದು ನಿಲ್ಲುವುದು ಯಾವಾಗ?

“ಸರ್ಕಾರದ ಸೌಲಭ್ಯ ಪಡೆಯಲು ಪಹಣಿಯಲ್ಲಿ ಬೆಳೆ ನಮೂದಾಗಿರಬೇಕು. ಲಕ್ಷಾಂತರ ರೈತರು ತಾವಾಗಿಯೇ ಮಾಹಿತಿಯನ್ನು ಅಪ್‌ಲೋಡ್‌ ಮಾಡಿದ್ದರೂ ಅದನ್ನು ಸೂಪರ್‌ವೈಸರ್‌ಗಳು ಅನುಮೋದನೆ ಮಾಡಿಲ್ಲ. ಹೀಗಾಗಿ ರೈತರ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಸರ್ಕಾರದ ಈ ಬೇಜವಾಬ್ದಾರಿ, ಗೊಂದಲದ ನೀತಿಗಳಿಂದ ಸಂಕಷ್ಟದಲ್ಲಿರುವ ರೈತರು ತ್ರಿಶಂಕು ಪರಿಸ್ಥಿತಿಯಲ್ಲಿ ಸಿಲುಕಿದ್ದಾರೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು. ಗೊಂದಲ ನಿವಾರಿಸಿ ರೈತರಿಗೆ ಪರಿಹಾರ ಬಿಡುಗಡೆ ಮಾಡಬೇಕು ಮತ್ತು ಬೆಂಬಲ ಬೆಲೆಯಂತೆ ಬೆಳೆ ಮಾರಾಟಕ್ಕೆ ಅವಕಾಶ ಮಾಡಿಕೊಡಬೇಕು” ಎಂದು ವಿಪಕ್ಷ ನಾಯಕ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...