ನಕಲಿ ದಾಖಲೆ | ಆಸ್ತಿ ವಂಚನೆ ಪ್ರಕರಣ ತಡೆಯಲು ಆಧಾರ್‌ ಜೋಡನೆಗೆ ಚಾಲನೆ: ಕೃಷ್ಣ ಬೈರೇಗೌಡ

Date:

ಯಾರದ್ದೋ ಆಸ್ತಿಗೆ ನಕಲಿ ವ್ಯಕ್ತಿತ್ವದ ದಾಖಲೆ ಸೃಷ್ಟಿಸಿ ಅಮಾಯಕರನ್ನು ವಂಚಿಸುವ ಪ್ರಕರಣಗಳನ್ನು ತಡೆಯುವ ಉದ್ದೇಶದಿಂದ ಆರ್‌ಟಿಸಿ ಗೆ ಆಧಾರ್‌ ಜೋಡಿಸುವ ಅಭಿಯಾನಕ್ಕೆ ಇಂದಿನಿಂದ ಅಧಿಕೃತ ಚಾಲನೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

- Advertisement -

ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಅಮಾಯಕರ ಜಮೀನುಗಳನ್ನು ವ್ಯವಸ್ಥಿತವಾಗಿ ದೋಚುವ ಕೆಲಸವಾಗುತ್ತಿದೆ. ಕೆಲವು ಪ್ರಕರಣಗಳಲ್ಲಿ ಸತ್ತವರ ಜಮೀನುಗಳನ್ನೂ ಸಹ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿರುವ ಕುರಿತು ರಾಜ್ಯದ ಮೂಲೆ ಮೂಲೆಯಿಂದ ದೂರುಗಳು ಕೇಳಿ ಬರುತ್ತಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ವಂಚನೆಗೊಳಗಾದವರು ಹಲವು ವರ್ಷಗಳಿಂದ ಕೋರ್ಟ್‌ ಕಚೇರಿಗೆ ಅಲೆಯುವಂತಾಗಿದೆ. ಇಂತಹ ಪ್ರಕರಣಗಳನ್ನು ತಡೆಯುವ ಹಾಗೂ ಜನಸಾಮಾನ್ಯರ ಪಾಲಿಗೆ ಅವರ ಜಮೀನಿನ ಹಕ್ಕನ್ನು ರಕ್ಷಿಸಿ ಅಧಿಕೃತಗೊಳಿಸುವ ಉದ್ದೇಶದಿಂದ ಆಧಾರ್‌ ಜೋಡಣೆ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ” ಎಂದು ವಿವರಿಸಿದರು.

“ನಕಲಿ ದಾಖಲೆ ಸೃಷ್ಟಿಸಿ ಜಮೀನನ್ನು ದೋಚುವವರ ಕೃತ್ಯಕ್ಕೆ ಕಡಿವಾಣ ಹಾಕಬೇಕು ಎಂಬ ಒತ್ತಾಯ ಹಲವು ಜನರಿಂದ ಕೇಳಿಬಂದಿತ್ತು. ಇತ್ತೀಚೆಗೆ ಹಲವು ಶಾಸಕರು, ಸಚಿವರು ಹಾಗೂ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಗ್ಗೆ ಕಠಿಣ ಕ್ರಮ ಜರುಗಿಸುವಂತೆ ಸೂಚಿಸಿದ್ದರು. ಇದೇ ಕಾರಣಕ್ಕೆ ಆಧಾರ್‌ ಜೋಡಣೆ ಅಭಿಯಾನಕ್ಕೆ ಮೂರು ತಾಲೂಕುಗಳಲ್ಲಿ ಒಂದು ತಿಂಗಳ ಕಾಲ ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿತ್ತು. ಇದೀಗ ಪ್ರಾಯೋಗ ಯಶಸ್ವಿಯಾಗಿದ್ದು ಇಂದಿನಿಂದಲೇ ರಾಜ್ಯಾದ್ಯಂತ ಆಧಾರ್‌ ಜೋಡನೆ ಅಭಿಯಾನವನ್ನು ವಿಸ್ತರಿಸಲಾಗಿದೆ” ಎಂದು ಮಾಹಿತಿ ನೀಡಿದರು.

“ಜನ ಸಾಮಾನ್ಯರು ಇದನ್ನು ಅನಾನುಕೂಲ ಎಂದು ಭಾವಿಸದೆ ಜಮೀನಿನ ಮಾಲಿಕತ್ವದ ಸುರಕ್ಷತೆಯ ದೃಷ್ಟಿಯಿಂದ ಹಾಗೂ ವಂಚನೆ ಪ್ರಕರಣಗಳನ್ನು ತಪ್ಪಿಸುವ ಉದ್ದೇಶದಿಂದ ನೋಂದಣಿ ಸಮಯದಲ್ಲಿ ಆಧಾರ್‌ ಜೋಡಣೆಗೆ ಸಕಾರಾತ್ಮಕವಾಗಿ ಸಹಕಾರ ನೀಡಬೇಕು” ಎಂದು ಮನವಿ ಮಾಡಿದರು.

ಸೆ.2 ರಿಂದ ರಾಜ್ಯಾದ್ಯಂತ ಎನಿವೇರ್‌ ನೋಂದಣಿ

ಸೆಪ್ಟಂಬರ್ 2 ರಿಂದ “ಎನಿವೇರ್‌ ನೋಂದಣಿ” ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ರಾಜ್ಯದಲಿ 252 ಉಪ ನೋಂದಣಾಧಿಕಾರಿ (ಸಬ್‌ ರಿಜಿಸ್ಟ್ರಾರ್) ಕಚೇರಿ ಇದೆ. ಆದರೆ, ಈ ಪೈಕಿ 50 ಕಚೇರಿಗಳಲ್ಲಿ ಮಾತ್ರ ಸಿಬ್ಬಂದಿಗಳಿಗೆ ಹೆಚ್ಚು ಕೆಲಸದ ಒತ್ತಡ ಇದೆ. ಹೀಗಾಗಿ ಆ ಕಚೇರಿಗಳಿಗೆ ಬರುವ ಜನರಿಗೆ ಅನಾನುಕೂಲವಾಗುತ್ತಿದೆ. ಸಮಯಕ್ಕೆ ಸರಿಯಾಗಿ ಕೆಲಸ ಆಗಲ್ಲ, ಕಾಯಬೇಕು, ಮಧ್ಯವರ್ತಿಗಳ ಕಾಟ ಇದೆ ಎಂಬ ದೂರುಗಳಿವೆ. ಇದೇ ಕಾರಣಕ್ಕೆ “ಎನಿವೇರ್‌ ನೋಂದಣಿ” ವ್ಯವಸ್ಥೆಗೆ ಚಾಲನೆ ನೀಡಲಾಯಿತು” ಎಂದರು.

ಮುಂದುವರೆದು, “ಆಸ್ತಿ ನೋಂದಣಿಗೆ ಮುಂದಾಗುವ ವ್ಯಕ್ತಿ ತನ್ನ ಜಿಲ್ಲೆ ವ್ಯಾಪ್ತಿಯ, ತನಗೆ ಅನುಕೂಲವಾಗುವ ಹಾಗೂ ಜನ ಸಂದಣಿ ಇಲ್ಲದ ಯಾವುದೇ ಉಪ ನೋಂದಣಿ ಕಚೇರಿಗೆ ತೆರಳಿ ಆನ್‌ಲೈನ್‌ ಮೂಲಕ ಸಮಯ ಕಾಯ್ದಿರಿಸಿ ತನ್ನ ಆಸ್ತಿ ನೋಂದಣಿ ಮಾಡಿಕೊಳ್ಳಲು “ಎನಿವೇರ್” ಅಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಈ ಯೋಜನೆಯನ್ನು ಫೆಬ್ರವರಿಯಿಂದಲೇ ತುಮಕೂರು ಹಾಗೂ ಬೆಳಗಾವಿಯಲ್ಲಿ ಪ್ರಯೋಗಿಕವಾಗಿ ಚಾಲನೆ ನೀಡಲಾಗಿತ್ತು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...