ಬೀದರ್‌ | ಯತ್ನಾಳ ರಾತ್ರಿ ಸೆರೆ ಕುಡಿದು, ಮಾಂಸ ತಿಂದು, ಬೆಳಿಗ್ಗೆ ವಿಭೂತಿ ಹಚ್ಚುತ್ತಾರೆ : ಸಚಿವ ಖಂಡ್ರೆ

Date:

ಯಾವುದೇ ರಾಗ, ದ್ವೇಷವಿಲ್ಲದೆ ಕರ್ತವ್ಯ ನಿರ್ವಹಿಸುವುದಾಗಿ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿ ಶಾಸಕನಾಗಿ, ಈಗ ಒಂದು ಕೋಮಿನ ಬಗ್ಗೆ ಹೀನಾಯವಾಗಿ ಮಾತನಾಡುವ, ದ್ವೇಷ ಬಿತ್ತುವ ಕೋಮುವಾದಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಶಾಸಕನಾಗಿರಲು ನಾಲಾಯಕ್‌ ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ತಿರುಗೇಟು ನೀಡಿದ್ದಾರೆ.

“ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರು, ಹಿಂದೂಗಳ ಮನೆಗೆ ನುಗ್ಗಿ ಹೊಡೆಯುತ್ತಾರೆ. ಅವರ ಹೆಣ್ಣು ಮಕ್ಕಳನ್ನು ಹೊತ್ತೊಯ್ಯುತ್ತಾರೆ ಎಂದು ಊಹಾತ್ಮಕ ಹೇಳಿಕೆ ನೀಡಿ, ಮತದಾರರಲ್ಲಿ ಭೀತಿ ಹುಟ್ಟಿಸುತ್ತಿರುವ ಮತ್ತು ದ್ವೇಷ ಬಿತ್ತುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಚುನಾವಣಾ ಆಯೋಗ ತಕ್ಷಣವೇ ಕ್ರಮ ಕೈಗೊಳ್ಳಬೇಕು” ಎಂದು ಸಚಿವ ಖಂಡ್ರೆ ಆಗ್ರಹಿಸಿದ್ದಾರೆ.

ಖಂಡ್ರೆ ಕುಟುಂಬ ಲಿಂಗಾಯತರಿಗೆ ಕೊಟ್ಟಿರುವ ಕೊಡುಗೆ ಏನು ಎಂದು ಯತ್ನಾಳ ಪ್ರಶ್ನಿಸಿದ್ದಾರೆ. ವೀರಶೈವ ಲಿಂಗಾಯತರನ್ನು ಒಗ್ಗೂಡಿಸಿ ಸಂಘಟನೆ ಮಾಡಿದ್ದೇ ಶತಾಯುಷಿ ಭೀಮಣ್ಣ ಖಂಡ್ರೆ ಅವರು. ಬೆಂಗಳೂರಿನಲ್ಲಿ ಭವ್ಯ ವೀರಶೈವ ಲಿಂಗಾಯತ ಭವನ ನಿರ್ಮಿಸಿದ್ದು ಭೀಮಣ್ಣ ಖಂಡ್ರೆ ಅವರು. ಇಂದು ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ವೀರಶೈವ ಭವನ ನಿರ್ಮಾಣವಾಗಿದ್ದರೆ ಅದಕ್ಕೆ ಭೀಮಣ್ಣ ಖಂಡ್ರೆಯವರು ಕಾರಣ ಎಂದು ಮಂಗಳವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಯತ್ನಾಳ ರಾತ್ರಿ ಸೆರೆ ಕುಡಿದು, ಮಾಂಸ ತಿಂದು, ಬೆಳಿಗ್ಗೆ ವಿಭೂತಿ ಹಚ್ಚಿಕೊಂಡು ಬರುತ್ತಾರೆ :

ಸಮಾಜದ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿ, ಉನ್ನತ ಶಿಕ್ಷಣ, ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡುತ್ತಿರುವುದು ಮಹಾಸಭಾ. ಇದರ ಬಗ್ಗೆ ಮಾಹಿತಿಯೂ ಇಲ್ಲದ, ಇತ್ತ ಬಸವವಾದಿಯೂ ಅಲ್ಲದ, ಅತ್ತ ಹಿಂದೂ ಅಲ್ಲದ ಯತ್ನಾಳ ರಾತ್ರಿ ಸೆರೆ ಕುಡಿದು, ಮಾಂಸ ತಿಂದು, ಬೆಳಿಗ್ಗೆ ವಿಭೂತಿ ಹಚ್ಚಿಕೊಂಡು ಬರುತ್ತಾರೆ. ಇವರಿಗೆ ವೀರಶೈವ ಲಿಂಗಾಯತ ಮಹಾಸಭಾ ಬಗ್ಗೆಯಾಗಲೀ, ನಮ್ಮ ತಂದೆ ಪೂಜ್ಯ ಭೀಮಣ್ಣ ಖಂಡ್ರೆ ಅವರ ಬಗ್ಗೆಯಾಗಲೀ ಮಾತನಾಡುವ ಯಾವುದೇ ಹಕ್ಕಿಲ್ಲ ಎಂದಿದ್ದಾರೆ.

3 ಬಿ ಮೀಸಲಾತಿಗಾಗಿ ಹೋರಾಟ ಮಾಡಿದವರು ಯಾರು? ವೀರಶೈವ ಲಿಂಗಾಯತ ಸಮುದಾಯಕ್ಕೆ ಮತ್ತು ಶರಣರಿಗೆ ಅವಮಾನ ಮಾಡುವಂತಹ ಕೃತಿಗಳನ್ನು ಮುಟ್ಟುಗೋಲು ಹಾಕಿಸಲು ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡಿದವರು ಯಾರು? ಕೇಂದ್ರ ಒಬಿಸಿ ಪಟ್ಟಿಯಲ್ಲಿ ಲಿಂಗಾಯತ ವೀರಶೈವರನ್ನು ಸೇರಿಸಬೇಕು ಎಂದು ಹೋರಾಟ ಮಾಡುತ್ತಿರುವವರು ಯಾರು? ಯಾವುದೇ ಮಾಹಿತಿ ಇಲ್ಲದೆ, ಭಗವಂತ ಖೂಬಾ ಹೇಳಿ ಕೊಟ್ಟ ಮಾತನ್ನು ಭಾಲ್ಕಿಗೆ ಬಂದು ಗಿಳಿಪಾಠದಂತೆ ಒಪ್ಪಿಸಿ ಹೋಗಿರುವ ಯತ್ನಾಳ ಮೊದಲು ವಿಧಾನಸಭೆಯ ಕಲಾಪದ ಕಡತ ತೆಗೆಸಿ ಓದಿ ನಂತರ ಮಾತನಾಡಲಿ ಎಂದು ಕುಟುಕಿದ್ದಾರೆ.

ಭೀಮಣ್ಣ ಖಂಡ್ರೆಯವರ ಉಂಗುಷ್ಟದ ಧೂಳಿಗೂ ಸಮನಲ್ಲ :

ರಜಾಕಾರರ ವಿರುದ್ಧ ಹೋರಾಟ ನಡೆಸಿದ, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡ, ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಸೆರೆ ವಾಸ ಅನುಭವಿಸಿದ ನಮ್ಮ ತಂದೆ ಸಚಿವರಾಗಿ, ಶಾಸಕರಾಗಿ, ವೀರಶೈವ ಲಿಂಗಾಯತ ಮುಖಂಡರಾಗಿ ಈ ನಾಡಿಗೆ ನೀಡಿರುವ ಕೊಡುಗೆ ಅನುಪಮವಾದ್ದು. ಇತಿಹಾಸವರಿಯದ ಯತ್ನಾಳ, ಭೀಮಣ್ಣ ಖಂಡ್ರೆ ಅವರ ಬಗ್ಗೆ ಮಾತನಾಡುವುದಿರಲಿ, ಅವರ ಉಂಗುಷ್ಟದ ಧೂಳಿಗೂ ಸಮನಲ್ಲ ಎಂದು ಕಿಡಿಕಾರಿದ್ದಾರೆ.

“ಇನ್ನು ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಬಗ್ಗೆ ಮಾತನಾಡಿದ್ದಾರೆ. ಲಿಂಗೈಕ್ಯ ಚನ್ನಬಸವ ಪಟ್ಟದ್ದೇವರೊಂದಿಗೆ ಸೇರಿ ಈ ಸಂಸ್ಥೆ ಕಟ್ಟಲು ನಮ್ಮ ತಂದೆ ಎಷ್ಟು ಬೆವರು ಸುರಿಸಿದ್ದಾರೆ. ಎಷ್ಟು ಹಣ ಹೂಡಿಕೆ ಮಾಡಿದ್ದಾರೆ ಎಂಬುದು ಇಡೀ ಬೀದರ್ ಜನತೆಗೆ ತಿಳಿದಿದೆ. ಈ ಬಗ್ಗೆ ಗೋಮುಖವ್ಯಾಘ್ರ ಯತ್ನಾಳಗಾಗಲೀ, ಸದಾ ಸುಳ್ಳು ಆರೋಪ ಮಾಡುತ್ತಲೇ ಕಾಲ ತಳ್ಳುವ ಭಗವಂತ ಖೂಬಾಗಾಗಲೀ ವಿವರಣೆ ನೀಡುವ ಅಗತ್ಯವಿಲ್ಲ” ಎಂದು ತಿಳಿಸಿದ್ದಾರೆ.

ಬಿಜೆಪಿಯ ಬಗ್ಗೆ, ತಮ್ಮ ಪಕ್ಷದ ನಾಯಕರ ಬಗ್ಗೆಯೂ ಆರೋಪ ಮಾಡುವ ಯತ್ನಾಳ ದಾಖಲೆ ಕೇಳಿದರೆ ಪಲಾಯನ ಮಾಡುತ್ತಾರೆ. ಹೀಗೆ ಆಧಾರ ಇಲ್ಲದೆ, ತಲೆ ಬುಡ ಇಲ್ಲದೆ ಸುಳ್ಳು ಆರೋಪ ಮಾಡುವ ಯತ್ನಾಳಗೆ ಏಕೆ ಉತ್ತರ ಕೊಡಬೇಕು? ಅನುಮತಿ ಇಲ್ಲದೆ ಎಥೆನಾಲ್ ಕಾರ್ಖಾನೆ ಸ್ಥಾಪಿಸಿ, ಕೈಗಾರಿಕಾ ತ್ಯಾಜ್ಯವನ್ನು ನದಿಗೆ ಬಿಟ್ಟು ಕುಡಿಯುವ ನೀರನ್ನೇ ವಿಷ ಮಾಡಿ, ಜನರಿಗೆ ವಿಷ ಉಣಿಸುತ್ತಿರುವ ಯತ್ನಾಳಗೆ ಕೇಂದ್ರ ಸರ್ಕಾರದ ಪರಿಸರ ಇಲಾಖೆಯೇ ಕೋಟ್ಯಂತರ ರೂಪಾಯಿ ದಂಡ ವಿಧಿಸಿದೆ. ಇವರು ತಮ್ಮ ಎಲೆಯಲ್ಲಿ ಇಲಿ ಸತ್ತು ಬಿದ್ದಿರುವಾಗ, ಬೇರೆಯವರ ಎಲೆಯಲ್ಲಿ ಬಿದ್ದಿರುವ ಇರುವೆಯ ಬಗ್ಗೆ ಮಾತನಾಡಲು ಬರುತ್ತಾರೆ. ಇವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವೇಗೌಡರ ಧೃತರಾಷ್ಟ್ರ ಸಿಂಡ್ರೋಮ್ ಮತ್ತು ಮೋದಿ ವಾಷಿಂಗ್ ಮಷೀನ್

ಈ ಬಾರಿ ಜನರು ಸಾರಾಸಗಟಾಗಿ ಬಿಜೆಪಿಯನ್ನು ತಿರಸ್ಕರಿಸುತ್ತಾರೆ. ಬದಲಾವಣೆ ತರುತ್ತಾರೆ. ಈ ಮೂಲಕ ಕೋಮುವಾದಿಗಳ ಬಾಯಿಗೆ ಬೀಗ ಹಾಕುತ್ತಾರೆ ಎಂದು ಸಚಿವ ಈಶ್ವರ ಖಂಡ್ರೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಡದ ಬೇರೆ ಬೇರೆ ನಟಿಯರಿಗೂ ಅಶ್ಲೀಲ ಸಂದೇಶ ಕಳುಹಿಸಿದ್ದ ರೇಣುಕಸ್ವಾಮಿ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಆಗಿರುವ ಪ್ರದೋಶ್ ದಾಖಲಿಸಿರುವ...

ದೋಷಾರೋಪ ಪಟ್ಟಿ ಎಂಬುದು ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ್

ರಾಮೇಶ್ವರಂ ಕೆಫೆ ‌ಸ್ಫೋಟ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೊಂಡಿದ್ದು, ದೋಷಾರೋಪ ಪಟ್ಟಿಯಲ್ಲಿ...

ಬೀದರ್ | ಸೆ.15ಕ್ಕೆ ರಾಜ್ಯಾದ್ಯಂತ ಪ್ರಜಾಪ್ರಭುತ್ವ ದಿನಾಚರಣೆ : ಸಚಿವ ಈಶ್ವರ ಖಂಡ್ರೆ

ನಮ್ಮ ಸರಕಾರದ ತೀರ್ಮಾನದಂತೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸೆ.15ರಂದು ಕರ್ನಾಟಕ ರಾಜ್ಯದಾದ್ಯಂತ...

ರಾಮೇಶ್ವರಂ ಕೆಫೆ ಸ್ಫೋಟ | ಪ್ರಕರಣದ ಚಾರ್ಜ್‌ಶೀಟ್‌ ಸಲ್ಲಿಕೆ, ಬಿಜೆಪಿ ಕಚೇರಿ ಸ್ಫೋಟಕ್ಕೆ ನಡೆದಿತ್ತು ಸಂಚು!

ಬೆಂಗಳೂರಿನ ವೈಟ್‌ ಫೀಲ್ಡ್‌ನಲ್ಲಿರುವ ದಿ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ...