ದಸರಾ 2023 | ಸಿಎಂ ಸಿದ್ದರಾಮಯ್ಯರಿಗೆ ಆಹ್ವಾನ ಪತ್ರಿಕೆ ನೀಡಿ ಸ್ವಾಗತಿಸಿದ ಮೈಸೂರು ಜಿಲ್ಲಾಡಳಿತ

Date:

Advertisements

ಅಕ್ಟೋಬರ್ 15ರಿಂದ 24ರವರೆಗೆ ನಡೆಯಲಿರುವ ವಿಶ್ವ ವಿಖ್ಯಾತ ದಸರಾದ ಆಹ್ವಾನ ಪತ್ರಿಕೆಯನ್ನು ಸಂಪ್ರದಾಯದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ನೇತೃತ್ವದ ಜಿಲ್ಲಾಡಳಿತದ ನಿಯೋಗವು ಆಹ್ವಾನ ಪತ್ರಿಕೆ ನೀಡಿ ಸ್ವಾಗತಿಸಿತು.

ಈ ವೇಳೆ ಮೇಯರ್ ಶಿವಕುಮಾರ್, ಶಾಸಕರಾದ ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ಆಕರ್ಷಕ ಆಹ್ವಾನ ಪತ್ರಿಕೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2023ರ ಅಧಿಕೃತ ಆಹ್ವಾನ ಪತ್ರಿಕೆಯನ್ನು ಆಕರ್ಷಕವಾಗಿ ಮುದ್ರಿಸಲಾಗಿದೆ. ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಂದೇಶಗಳಿವೆ. ಜೊತೆಗೆ ಚಾಮುಂಡೇಶ್ವರಿ ಚಾಮುಂಡಿಬೆಟ್ಟ ಅರಮನೆ ಗಜಪಡೆಯ ಭಾವಚಿತ್ರವನ್ನೊಳಗೊಂಡಿದ್ದು, ಎಲ್ಲರ ಗಮನ ಸೆಳೆದಿದೆ. ಈ ಬಾರಿಯ ಮೈಸೂರು ದಸರಾವನ್ನು ಸಂಗೀತ ನಿರ್ದೇಶಕ ಹಂಸಲೇಖ ಉದ್ಘಾಟನೆ ಮಾಡಲಿದ್ದಾರೆ.

Advertisements

ಎಲ್ಲೆಲ್ಲಿ ಏನೇನು ಕಾರ್ಯಕ್ರಮ?
ದಸರಾ ಮಹೋತ್ಸವದ ಕಾರ್ಯಕ್ರಮಗಳ ಪಟ್ಟಿ ಸಹಾ ಬಿಡುಗಡೆಯಾಗಿದ್ದು, ಮೈಸೂರಿನ ವಿವಿಧ ವೇದಿಕೆಗಳಲ್ಲಿ ವಿವಿಧ ಸಮಿತಿಗಳಿಂದ ಕಾರ್ಯಕ್ರಮ, ಅರಮನೆ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಕಲಾಮಂದಿರದಲ್ಲಿ ಚಲನಚಿತ್ರೋತ್ಸವ ಹಾಗೂ ಶಿಲ್ಪ, ಚಿತ್ರಕಲೆ ಪ್ರದರ್ಶ‌ನ, ಜಗನ್ಮೋಹನ ಅರಮನೆಯಲ್ಲಿ ಕವಿಗೋಷ್ಠಿ ನಡೆಯಲಿದೆ.

ಐದು ವರ್ಷಗಳ ಬಳಿಕ ಏರ್ ಶೋ
ಐದು ವರ್ಷಗಳ ಬಳಿಕ ದಸರಾ ಮಹೋತ್ಸವದಲ್ಲಿ ಏರ್ ಶೋ ಹಮ್ಮಿಕೊಳ್ಳಲಾಗಿದೆ. ಅ.22 ಮತ್ತು 23 ರಂದು ಏರ್ ಶೋ ಆಯೋಜನೆ ಮಾಡಲಾಗಿದೆ. ಅ.22ರಂದು ಏರ್ ಶೋ ರಿಹರ್ಸಲ್ ನಡೆಯಲಿದೆ. ಅ.23ರಂದು ಪೂರ್ಣಪ್ರಮಾಣದ ಏರ್ ಶೋ ಇರಲಿದೆ.

ರಿಹರ್ಸಲ್ ಮತ್ತು ಪೂರ್ಣ ಪ್ರಮಾಣದ ಏರ್ ಶೋ ಎರಡು ಕೂಡ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆಯಲಿವೆ. ಸಂಜೆ 4 ಗಂಟೆಯಿಂದ 45 ನಿಮಿಷ ಏರ್ ಶೋ ನಡೆಯಲಿದೆ. ಈ ಬಾರಿ ಬರದ ಪರಿಣಾಮ ದಸರಾ ಮಹೋತ್ಸವವನ್ನು ಅದ್ಧೂರಿಯೂ ಅಲ್ಲದೇ, ಸರಳವೂ ಅಲ್ಲದೇ ಸಾಂಪ್ರದಾಯಿಕವಾಗಿ ಆಚರಿಸಲು ಸರ್ಕಾರ ಸೂಚನೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X