ಸಿದ್ದರಾಮಯ್ಯರಿಂದ ಇ-ಪ್ರೊಕ್ಯೂರ್‌ಮೆಂಟ್‌ 2.0 ಪೋರ್ಟಲ್‌, ಡಿಐಎಸ್‌ ತಂತ್ರಾಂಶ ಲೋಕಾರ್ಪಣೆ

Date:

Advertisements
  • ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್‌ 2.0
  • ಜಿಲ್ಲೆಗಳ ಪ್ರಗತಿ ಪರಿಶೀಲನೆ ಕುರಿತ ಡಿ.ಐ.ಎಸ್. ತಂತ್ರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಆಶಯದೊಂದಿಗೆ ಸೋಮವಾರ ಬೆಳಿಗ್ಗೆ 9.30 ಗಂಟೆಯಿಂದ ಗೃಹ ಕಚೇರಿ ಕೃಷ್ಣದಲ್ಲಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್‌ 2.0 ಹಾಗೂ ಜಿಲ್ಲೆಗಳ ಪ್ರಗತಿ ಪರಿಶೀಲನೆ ಕುರಿತಂತೆ ಡಿ.ಐ.ಎಸ್. ತಂತ್ರಾಂಶವನ್ನು ಲೋಕಾರ್ಪಣೆ ಮಾಡಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಇ-ಆಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Advertisements

ಸಾರ್ವಜನಿಕ ಸಂಗ್ರಹಣೆ ಪೋರ್ಟಲ್‌ 2.0

ರಾಜ್ಯದ ಆಯವ್ಯಯದಲ್ಲಿ ಕೈಗೊಂಡ ಎಲ್ಲ ಇಲಾಖೆಗಳ 1 ಕೋಟಿ ರೂ.ಗಿಂತ ಹೆಚ್ಚಿನ ಕಾಮಗಾರಿಗಳ ಪ್ರಗತಿಯನ್ನು ಸಮಯಬದ್ದವಾಗಿ ಮೇಲ್ವಿಚಾರಣೆ ಮಾಡಲು ಕಾಂಟ್ರಾಕ್ಟ್ ಮ್ಯಾನೇಜಮೆಂಟ್ ಮಾಡ್ಯೂಲ್‌ನಲ್ಲಿ ಡ್ಯಾಷ್‌ಬೋರ್ಡ್‌ನ್ನು ಇ-ಆಡಳಿತ ಇಲಾಖೆಯ ವತಿಯಿಂದ ಸಿದ್ದಪಡಿಸಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಲಸಂಪನ್ಮೂಲ ಇಲಾಖೆ, ಲೋಕೋಪಯೋಗಿ ಇಲಾಖೆ ಮತ್ತು ಅದರ ವ್ಯಾಪ್ತಿಯಲ್ಲಿರುವ ಎಲ್ಲ ಮಂಡಳಿಗಳು ಮತ್ತು ನಿಗಮಗಳಡಿ ನೀಡಲಾದ ರೂ.50 ಲಕ್ಷ ಮತ್ತು ಅದಕ್ಕಿಂತ ಹೆಚ್ಚಿನ ಮೌಲ್ಯದ ಎಲ್ಲ ಟೆಂಡರ್‌ಗಳಿಗೆ ಮೂರು ತಿಂಗಳ ಅವಧಿಗೆ ಪ್ರಾಯೋಗಿಕ ಆಧಾರದ ( Pilot Basis) ಮೇಲೆ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್‌ನಲ್ಲಿ ಗುತ್ತಿಗೆ ನಿರ್ವಹಣಾ ಮಾಡ್ಯೂಲ್‌ನ್ನು ಹೆಚ್ಚಿನ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಅದರಂತೆ ಇ-ಪ್ರೊಕ್ಯೂರ್‌ಮೆಂಟ್‌ ವೇದಿಕೆಯಲ್ಲಿ ಒಟ್ಟು 40,000 ಟೆಂಡರ್ ಗಳು ಪ್ರಕಟಿಸಲಾಗಿದ್ದು ಈ ಪೈಕಿ ಆಯ್ಕೆಯಾದ 3 ಇಲಾಖೆಗಳ ರೂ 50 ಲಕ್ಷಕ್ಕಿಂತ ಹೆಚ್ಚು ಮೌಲ್ಯದ ಕೇವಲ 3165 ಟೆಂಡರ್ ಗಳನ್ನು ಈ ಯೋಜನೆಗಾಗಿ ಗುರುತಿಸಲಾಗಿದೆ. ಸದರಿ ಇಲಾಖೆಗಳಿಂದ ಕಾಂಟ್ರಾಕ್ಟ್ ಮ್ಯಾನೇಜ್ಮೆಂಟ್ ಸಿಸ್ಟಮ್‌ನಲ್ಲಿ ಕಡ್ಡಾಯವಾಗಿ ತಂತ್ರಾಂಶದ ಮೂಲಕ ಮಾಹಿತಿಯನ್ನು ಡ್ಯಾಶ್ ಬೋರ್ಡ್‌ನಲ್ಲಿ ಅಳವಡಿಸಲಾಗುವುದು.

ಈ ಸುದ್ದಿ ಓದಿದ್ದೀರಾ? ಸಿಎಂ ಜನತಾ ದರ್ಶನ: ಪಿಎಸ್‌ಐ ಪರೀಕ್ಷಾರ್ಥಿಗಳಿಂದ ಪ್ರತಿಭಟನೆ

ಡಿಐಎಸ್ ತಂತ್ರಾಂಶ

ಮುಖ್ಯಮಂತ್ರಿಗಳು ಸೆಪ್ಟಂಬರ್ 12 ಮತ್ತು 13 ರಂದು ನಡೆದ ‘ಜಿಲ್ಲಾಧಿಕಾರಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಮ್ಮೇಳನ’ದಲ್ಲಿ ಜಿಲ್ಲೆಗಳಿಗೆ ಸಂಬಂಧಪಟ್ಟಂತೆ, 28 ವಿಷಯಗಳ ಬಗ್ಗೆ ಪರಿಶೀಲನೆ ನಡೆಸಿ ಪ್ರತಿ ತಿಂಗಳೂ ವರದಿಯನ್ನು ಸಲ್ಲಿಸಲು ಎಲ್ಲ ‘ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ’ಗಳಿಗೆ ಸೂಚಿಸಿರುತ್ತಾರೆ ಹಾಗೂ ಅಭಿವೃದ್ಧಿ ಆಯುಕ್ತರಿಗೆ ಸದರಿ ವರದಿಗಳನ್ನು ವಿಶ್ಲೇಷಿಸಿ ಮಂಡಿಸುವಂತೆ ಸೂಚಿಸಲಾಗಿರುತ್ತದೆ.

ಅದರಂತೆ, ಕ್ರಮ ವಹಿಸಿ ಇ-ಆಡಳಿತ ಇಲಾಖೆಯಿಂದ ‘ಡಿಐಎಸ್ ತಂತ್ರಾಂಶ’ವನ್ನು ಅಭಿವೃದ್ಧಿಪಡಿಸಲಾಗಿರುತ್ತದೆ.

(1) https://districtincharge.karnataka.gov.in ಈ ತಂತ್ರಾಂಶದ ಮೂಲಕ ಎಲ್ಲ ಜಿಲ್ಲಾ ಉಸ್ತುವಾರಿ ಅಧಿಕಾರಿಗಳು ‘online’ ವರದಿಯನ್ನು ಸಲ್ಲಿಸಲು ಅನುವು ಮಾಡಿಕೊಡಲಾಗಿದೆ.
(2) ಈ ತಂತ್ರಾಂಶದ ಮೂಲಕ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಇತರೆ ಇಲಾಖಾ ಕಾರ್ಯದರ್ಶಿಗಳಿಗೆ ಹಾಗೂ ಜಿಲ್ಲಾಧಿಕಾರಿ /ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಜಿಲ್ಲೆಯಲ್ಲಿರುವ ಸಮಸ್ಯೆಗಳ ಕುರಿತು ಮಾಹಿತಿ ದಾಖಲಿಸಬಹುದು.
(3) ಸದರಿ ಸಮಸ್ಯೆಗಳಿಗೆ ಇಲಾಖಾ ಕಾರ್ಯದರ್ಶಿ/ ಜಿಲ್ಲಾಧಿಕಾರಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಈ ತಂತ್ರಾಂಶದ ಮೂಲಕವೇ ತೆಗೆದುಕೊಂಡ ಕ್ರಮದ ಕುರಿತು ವರದಿ ಸಲ್ಲಿಸಬಹುದಾಗಿರುತ್ತದೆ.
(4) ಸಲ್ಲಿಸಲಾಗಿರುವ ಜಿಲ್ಲಾ ವರದಿಗಳ ಕುರಿತ ಎಮ್ಐಎಸ್ ವರದಿಗಳನ್ನು ಮಾನ್ಯ ಮುಂತ್ರಿಗಳು ಈ ತಂತ್ರಾಂಶದಲ್ಲಿ ವೀಕ್ಷಿಸಬಹುದಾಗಿದೆ.
(5) ತಂತ್ರಾಂಶದ ಬಳಕೆ ಬಗ್ಗೆ ಎಲ್ಲ ಇಲಾಖಾ/ಜಿಲ್ಲಾ ಸಮಾಲೋಚಕರಿಗೆ ತರಬೇತಿಯನ್ನು ಸಹ ನೀಡಲಾಗಿದೆ.
(6) ತಂತ್ರಾಂಶದ ಲಿಂಕ್ ಅನ್ನು ಇ-ಕಛೇರಿ ಮುಖಪುಟದಲ್ಲಿ ನೀಡಲಾಗಿದ್ದು, ಅಲ್ಲಿಂದಲೇ ಬಳಕೆದಾರರು ತಂತ್ರಾಂಶ ಪ್ರವೇಶಿಸಬಹುದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X