‘ಈಸ್ಟರ್ ಭಾನುವಾರ’ ಕೆಲಸದ ದಿನವೆಂದು ಘೋಷಣೆ; ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

Date:

Advertisements

ಕ್ರೈಸ್ತರ ಪ್ರಮುಖ ಹಬ್ಬವಾದ ‘ಈಸ್ಟರ್ ಭಾನುವಾರ’ವನ್ನು (ಮಾರ್ಚ್‌ 31) ಕೆಲಸದ ದಿನವಾಗಿ ಮಣಿಪುರ ಸರ್ಕಾರ ಘೋಷಿಸಿದೆ. ಅಂದು ಎಲ್ಲ ಸರ್ಕಾರಿ ಇಲಾಖೆಗಳಲ್ಲಿಯೂ ಸಿಬ್ಬಂದಿಗಳು ಕರ್ತರ್ವ ನಿರ್ವಹಿಸಬೇಕೆಂದು ಸೂಚಿಸಿದೆ. ಸರ್ಕಾರದ ಈ ನಿರ್ಧಾರ ವಿರುದ್ಧ ಕ್ರಿಶ್ಚಿಯನ್ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ.

ಕುಕಿ ಮತ್ತು ಮೈಥೇಯಿ ಸಮುದಾಯಗಳ ನಡುವಿನ ಹಿಂಸಾಚಾರದಿಂದ ಕಂಗೆಟ್ಟಿರುವ ಮಣಿಪುರದಲ್ಲಿ, ಅಲ್ಲಿನ ಬಿಜೆಪಿ ಸರ್ಕಾರ ಹೊಸ ವಿವಾದವನ್ನು ಹುಟ್ಟುಹಾಕಿದೆ. ಸರ್ಕಾರದ ಸಾಮಾನ್ಯ ಆಡಳಿತ ಇಲಾಖೆಯು ‘ಈಸ್ಟರ್ ಸಂಡೇ’ ಕುರಿತು ಆದೇಶ ಹೊರಡಿಸಿದ್ದು, “ಶನಿವಾರ (ಮಾರ್ಚ್ 30) ಮತ್ತು ಭಾನುವಾರ (ಮಾರ್ಚ್ 31) ಎಲ್ಲ ಸರ್ಕಾರಿ ಕಚೇರಿಗಳು, ಸಾರ್ವಜನಿಕ ವಲಯದ ಸಂಸ್ಥೆಗಳು ಹಾರೂ ರಾಜ್ಯ ಸರ್ಕಾರದ ಅಧೀನದಲ್ಲಿರುವ ಎಲ್ಲ ಸಂಸ್ಥೆಗಳು ಕಾರ್ಯನಿರ್ವಹಿಸಬೇಕು. ಹಣಕಾಸು ವರ್ಷದ (2023-24) ಕೊನೆಯ ದಿನಗಳಲ್ಲಿ ಕಚೇರಿ ಕೆಲಸಗಳನ್ನು ಪೂರ್ಣಗೊಳಿಸಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ” ಎಂದು ಹೇಳಿದೆ.

2011ರ ಜನಗಣತಿಯ ಪ್ರಕಾರ, ಮಣಿಪುರದ ಜನಸಂಖ್ಯೆಯಲ್ಲಿ ಕ್ರಿಶ್ಚಿಯನ್ನರು 40.1% (2.8 ಮಿಲಿಯನ್) ರಷ್ಟಿದ್ದಾರೆ. ಅವರಲ್ಲಿ ಹೆಚ್ಚಿನವರು ಕುಕಿ, ಝೋ ಮತ್ತು ನಾಗಾ ಸಮುದಾಯಗಳಿಗೆ ಸೇರಿದವರಾಗಿದ್ದಾರೆ.

Advertisements

ಸರ್ಕಾರದ ಈ ಆದೇಶವು ಕ್ರಿಶ್ಚಿಯನ್ ಸಮುದಾಯದ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಬುಡಕಟ್ಟು ಸಮುದಾಯಗಳ ಒಕ್ಕೂಟ ಸಂಸ್ಥೆ – ಇಂಡಿಜಿನಸ್ ಟ್ರೈಬಲ್ ಲೀಡರ್ಸ್ ಫೋರಂ (ಐಟಿಎಲ್‌ಎಫ್) ಹೇಳಿದೆ. “ಮಣಿಪುರದಲ್ಲಿ ಅನೇಕ ಕ್ರೈಸ್ತರಿದ್ದಾರೆ. ಭಾನುವಾರವು ರಜೆಯ ದಿನವಾಗಿದೆ. ಅಲ್ಲದೆ, ‘ಈಸ್ಟರ್’ ದಿನವೂ ಆಗಿದೆ” ಎಂದು ಐಟಿಎಲ್‌ಎಫ್‌ ಅಸಮಾಧಾನ ವ್ಯಕ್ತಪಡಿಸಿರುವುದಾಗಿ ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ನಾಗಾ ಸಮುದಾಯದ ವಿದ್ಯಾರ್ಥಿ ಸಂಘಟನೆ ‘ಪೌಮೈ ನಾಗಾ ತ್ಸೈಡೌಮೈ ಮಿ’ ಕೂಡ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದೆ.

ಈ ಆದೇಶವು ಹಿಂದೂ-ಬಹುಸಂಖ್ಯಾತ ಮೈಥೇಯಿ ಮತ್ತು ಕ್ರೈಸ್ತ ಬಹುಸಂಖ್ಯಾತ ಕುಕಿ-ನಾಗಾ ಸಮುದಾಯಗಳ ನಡುವಿನ ಹಳೆಯ ಹಿಂಸಾಚಾರಕ್ಕೆ ಮತ್ತೆ ಪ್ರಚೋದನೆ ನೀಡುವಂತಿದೆ ಎಂದು ಆರೋಪಿಸಲಾಗಿದೆ.

ಕಳೆದ ವರ್ಷ ಮೇ 3 ರಂದು ಮಣಿಪುರದಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರದಲ್ಲಿ ಈವರೆಗೆ 200ಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಂಡಿದ್ದಾರೆ. ಕುಕಿ ಸಮುದಾಯದ ಮಹಿಲೆಯವರ ಮೇಲೆ ಅಮಾನವೀಯ ದೌರ್ಜನ್ಯ, ಅತ್ಯಾಚಾರಗಳು ನಡೆದಿವೆ. ಹಿಂಸಾಚಾರದ ಕಾರಣದಿಂದಾಗಿ 50,000ಕ್ಕೂ ಹೆಚ್ಚು ಜನರನ್ನು ತಮ್ಮೂರುಗಳನ್ನು ತೊರೆದು, ವಲಸೆ ಹೋಗಿದ್ದಾರೆ ಮತ್ತು ಸ್ಥಳಾಂತರಗೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X