ಮಹಾರಾಷ್ಟ್ರ ಚುನಾವಣೆ | ರಾಹುಲ್ ಗಾಂಧಿ ಆರೋಪಗಳಿಗೆ ಚುನಾವಣಾ ಆಯೋಗ ಉತ್ತರಿಸಬೇಕು: ಪ್ರಶಾಂತ್ ಕಿಶೋರ್

Date:

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಕುರಿತು ಕಾಂಗ್ರೆಸ್ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಎತ್ತಿರುವ ಅನುಮಾನಗಳ ಬಗ್ಗೆ ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು, ಈ ಆರೋಪಗಳ ಬಗ್ಗೆ ಆಯೋಗ ಉತ್ತರಿಸಬೇಕು ಎಂದು ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

- Advertisement -

ವಿಧಾನಸಭಾ ಚುನಾವಣೆಗೆ ಮುನ್ನ ತಮ್ಮ ಜನ ಸುರಾಜ್ ಪಕ್ಷಕ್ಕೆ ಸಾರ್ವಜನಿಕ ಬೆಂಬಲವನ್ನು ಹೆಚ್ಚಿಸಲು ಬಿಹಾರ ಪ್ರವಾಸದಲ್ಲಿರುವ ಐಪಿಎಸಿ ಸಂಸ್ಥಾಪಕ, ಮಾಜಿ ಚುನಾವಣಾ ತಂತ್ರಜ್ಞ ಭಾನುವಾರ ಸಂಜೆ ಬೇಗುಸರಾಯ್‌ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಅಂತ್ಯಗೊಳ್ಳುತ್ತಿದೆ ಮೋದಿ-ಶಾ ‘ಬ್ರಾಂಡ್’ ರಾಜಕಾರಣ; ಅದಕ್ಕೆ ಮಹಾರಾಷ್ಟ್ರವೇ ಸಾಕ್ಷಿ

“ಈ ವಿಚಾರದಲ್ಲಿ ನಾನು ತಜ್ಞನಲ್ಲ. ಆದರೂ ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಲಿಖಿತವಾಗಿ ಮಾಡಿರುವ ಆರೋಪಗಳಿಗೆ ಚುನಾವಣಾ ಆಯೋಗ ಪ್ರತಿಕ್ರಿಯಿಸಬೇಕು” ಎಂದು ಮಾಜಿ ಚುನಾವಣಾ ತಂತ್ರಜ್ಞ ಹೇಳಿದ್ದಾರೆ.

“ಕಾಂಗ್ರೆಸ್ ದೇಶದ ಪ್ರಮುಖ ವಿರೋಧ ಪಕ್ಷ. ರಾಹುಲ್ ಗಾಂಧಿ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ. ಆದ್ದರಿಂದ, ಚುನಾವಣಾ ಆಯೋಗ ಅವರು ಎತ್ತುವ ಯಾವುದೇ ಅನುಮಾನಗಳನ್ನು ಹೋಗಲಾಡಿಸಬೇಕು” ಎಂದು ಪ್ರಶಾಂತ್ ಕಿಶೋರ್ ತಿಳಿಸಿದ್ದಾರೆ.

ಕಳೆದ ವಾರ ರಾಷ್ಟ್ರೀಯ ಇಂಗ್ಲಿಷ್ ದಿನಪತ್ರಿಕೆಯೊಂದರಲ್ಲಿ ರಾಹುಲ್ ಗಾಂಧಿ ಒಂದು ಲೇಖನ ಬರೆದಿದ್ದರು. ಅದರಲ್ಲಿ ಅವರು ಕಳೆದ ವರ್ಷ ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭಾ ಚುನಾವಣೆಗಳು ಮುಕ್ತ ಮತ್ತು ನ್ಯಾಯಯುತವಾಗಿರಲಿಲ್ಲ ಎಂದು ಆರೋಪಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...