ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ ಆರೋಪದಲ್ಲಿ ಉತ್ತರ ಪ್ರದೇಶ ಪೊಲೀಸರ ವಿರುದ್ದ ಚುನಾವಣಾ ಆಯೋಗ ಕ್ರಮಕೈಗೊಂಡಿದೆ. ಪೊಲೀಸ್ ಅಧಿಕಾರಿಗಳ ಅಮಾನತಿಗೆ ಇಸಿ ಆದೇಶಿಸಿದೆ.
ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆ ಬಳಿಕ ತೆರವಾದ ಶಾಸಕ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದೆ. ಮತದಾನ ಪ್ರಕ್ರಿಯೆ ವೇಳೆ ಪೊಲೀಸ್ ಸಿಬ್ಬಂದಿಗಳು ಕೆಲವು ಜನರ ಗುರುತಿನ ಚೀಟಿ ಪರಿಶೀಲಿಸಿ ಮತದಾನ ಮಾಡುವುದನ್ನು ತಡೆದಿದ್ದಾರೆ ಎಂದು ಆರೋಪಿಸಲಾಗಿದೆ.
अगर निर्वाचन आयोग का कोई जीता-जागता अस्तित्व है तो वो जीवंत होकर, प्रशासन के द्वारा वोटिंग को हतोत्साहित करने के लिए तुरंत सुनिश्चित करे:
— Akhilesh Yadav (@yadavakhilesh) November 20, 2024
– लोगों की आईडी पुलिस चेक न करे।
– रास्ते बंद न किये जाएं।
– वोटर्स के आईडी ज़ब्त न किये जाएं।
– असली आईडी को नक़ली आईडी बताकर जेल… pic.twitter.com/4Qddtlgc19
ಎಸ್‌ಪಿ ಅಧ್ಯಕ್ಷ, ಯುಪಿ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಈ ಸಂಬಂಧ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ವಿಡಿಯೋ ಆಧಾರದಲ್ಲಿ ಚುನಾವಣಾ ಆಯೋಗವು ಕ್ರಮಕೈಗೊಂಡಿದೆ. ಪೊಲೀಸರು ಗುರುತಿನ ಚೀಟಿ, ಆಧಾರ್ ಕಾರ್ಡ್ ದಾಖಲೆಗಳನ್ನು ಪರಿಶೀಲಿಸುವುದು, ತಡೆಯುವುದನ್ನು ವಿಡಿಯೋದಲ್ಲಿ ನಾವು ಕಾಣಬಹುದು.
ಇದನ್ನು ಓದಿದ್ದೀರಾ? ಆ. 19ಕ್ಕೆ ಮಾಲೂರು ಕ್ಷೇತ್ರದ ಮತ ಎಣಿಕೆ ದೃಶ್ಯಾವಳಿ ಸಲ್ಲಿಸಿ: ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ
ಚುನಾವಣಾ ಆಯೋಗದ ಆದೇಶದ ಮೇರೆಗೆ ದೂರನ್ನು ಪರಿಶೀಲಿಸಿದ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವಿಡಿಯೋದಲ್ಲಿರುವ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ.
ಇನ್ನು ಕೆಲವು ಸಮುದಾಯದ ಜನರನ್ನು ಮಾತ್ರ ಪೊಲೀಸ್ ಅಧಿಕಾರಿಗಳು ತಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಇನ್ನು ಉತ್ತರ ಪ್ರದೇಶದಲ್ಲಿ ಉಪಚುನಾವಣೆಯ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದೆ.
