SIR ಎಂಬ ರೋಗ ದೇಶಾದ್ಯಂತ ಹರಡುವುದನ್ನು ಸಹಿಸಲಾಗದು: ನಟ ಕಮಲ್ ಹಾಸನ್

Date:

ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಗ್ಗೆ ಪ್ರಸಿದ್ಧ ನಟ, ಮಕ್ಕಳ್ ನೀಧಿ ಮೈಯಂ (ಎಂಎನ್‌ಎಂ) ಸಂಸ್ಥಾಪಕ ಅಧ್ಯಕ್ಷ, ಸಂಸದ ಕಮಲ್ ಹಾಸನ್ ಕಳವಳ ವ್ಯಕ್ತಪಡಿಸಿದ್ದಾರೆ. “ಈ ಪ್ರಕ್ರಿಯೆಯ ಮೂಲಕ ಚುನಾವಣಾ ಆಯೋಗವು ಜನರ ಮತದಾನದ ಹಕ್ಕನ್ನು ದುರ್ಬಲಗೊಳಿಸುತ್ತಿದೆ. ಈ ರೋಗ ದೇಶಾದ್ಯಂತ ಹರಡುವುದನ್ನು ಸಹಿಸಲಾಗದು” ಎಂದು ಹೇಳಿದ್ದಾರೆ.

- Advertisement -

ರಾಜ್ಯಸಭೆಯಲ್ಲಿ ಮಾತನಾಡಿದ ಸಂಸದ ಕಮಲ್ ಹಾಸನ್, “ಆಯೋಗವು ಚುನಾವಣಾ ಪ್ರಕ್ರಿಯೆಯಲ್ಲಿ ಜನರು ಸಕ್ರಿಯವಾಗಿ ಭಾಗಿಯಾಗುವಂತೆ ನೋಡಿಕೊಳ್ಳುವುದರ ಬದಲಾಗಿ ಜನರ ಮತದಾನದ ಹಕ್ಕನ್ನು ಮಾತ್ರ ಪರಿಶೀಲಿಸುತ್ತಿದೆ. ನಾನು ಇದನ್ನು ‘ಜೀವಂತವಾಗಿದ್ದೂ ಸತ್ತವರ ಬಗ್ಗೆ ಪರಿಶೀಲನೆ ನಡೆಸುವ ಕಥೆ’ ಎಂದು ಕರೆಯುತ್ತೇನೆ. ಚುನಾವಣಾ ಆಯೋಗ ನಮ್ಮ ಹಕ್ಕನ್ನು ಪರಿಶೀಲಿಸುವ ಬದಲು ಕಾಗುಣಿತ, ವಿಳಾಸವನ್ನು ಪರಿಶೀಲಿಸುತ್ತಿದೆ. ಅದು ಕೂಡಾ ತಪ್ಪಾಗಿ ಪರಿಶೀಲನೆ ನಡೆಸುತ್ತಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ದೇಶ ವಿಭಜಿಸಲು, ಸೌಹಾರ್ದತೆ ಕದಡಲು ಸಿಎಎ ಜಾರಿ: ನಟ ಕಮಲ್ ಹಾಸನ್

“ಸದ್ಯ ನನ್ನ ಕಾಳಜಿ ಇರುವುದು ತಮಿಳುನಾಡಿನಲ್ಲಿ ಮುಂಬರುವ ಚುನಾವಣೆಯ ಬಗ್ಗೆ. ಕಾಗುಣಿತ ತಪ್ಪುಗಳು ಭಾಷೆಯ ಆಯಾಮದಲ್ಲಿ ಮಾತ್ರ ಕೆಟ್ಟದು. ಆಧುನಿಕ ಸಾಹಿತ್ಯವು ಈ ತಪ್ಪನ್ನು ಕ್ಷಮಿಸುತ್ತದೆ. ಇಂಟರ್ನೆಟ್ ಕೂಡ ಹಾಗೆ ಮಾಡುತ್ತದೆ. ಆದರೆ ಚುನಾವಣಾ ಆಯೋಗ ಮಾತ್ರ ಈ ಕಾಗುಣಿತ ತಪ್ಪನ್ನು ಕ್ಷಮಿಸುವುದಿಲ್ಲ” ಎಂದು ಟೀಕಿಸಿದ್ದಾರೆ.

“ಚುನಾವಣಾ ಆಯೋಗ ಎಂದರೆ ಇಂಗ್ಲಿಷ್ ತರಬೇತುದಾರರು ಎಂಬ ಅರ್ಥವಲ್ಲ. ಬಿಹಾರ ಇದೀಗ ಜೀವಂತವಾಗಿದ್ದರೂ ಸತ್ತವರ ನೆಲವಾಗಿದೆ. ಈ ರೋಗವು ದೇಶಾದ್ಯಂತ ಹರಡುವುದನ್ನು ಸಹಿಸಲಾಗದು. ಇಸಿಐ ಖಂಡಿತವಾಗಿಯೂ ಈ ರೋಗ ಹರಡಲು ಸಹಾಯ ಮಾಡುತ್ತಿದೆ” ಎಂದೂ ಆರೋಪಿಸಿದರು.

ಇನ್ನು ಸುಪ್ರೀಂ ಕೋರ್ಟ್‌ನಲ್ಲಿ ಎಸ್‌ಐಆರ್ ವಿರುದ್ಧ ಅರ್ಜಿ ಸಲ್ಲಿಸಿ, ತಮ್ಮ ಪರವಾಗಿ ತಾವೇ ವಾದಕ್ಕಿಳಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಬೆಂಬಲಿಸಿದ ಕಮಲ್ ಹಾಸನ್, “ಪಶ್ಚಿಮ ಬಂಗಾಳದ ನನ್ನ ದೀದಿ ಕೂಡ ಇಸಿಐ ಕಚೇರಿಯಲ್ಲಿ ಇದೇ ರೀತಿ ವಿಷಾದಿಸಿದರು. ಅವರು ಈಗಾಗಲೇ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...