ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

Date:

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಶಾಸಕರ ಸಹೋದರರ ನಿವಾಸದ ಮೇಲೆಯೂ ಇಡಿ ದಾಳಿ ನಡೆದಿದೆ ಎನ್ನಲಾಗಿದೆ.

- Advertisement -

ಕಾಂಗ್ರೆಸ್​ ಶಾಸಕ ವೀರೇಂದ್ರ ಪಪ್ಪಿ ಅವರ ಸಹೋದರರಾದ ಕೆ.ಸಿ.ನಾಗರಾಜ, ಕೆ.ಸಿ.ತಿಪ್ಪೇಸ್ವಾಮಿ ಅವರ ನಿವಾಸದ ಮೇಲೆಯೂ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ಬೆಂಗಳೂರು, ಚಿತ್ರದುರ್ಗ, ಚಳ್ಳಕೆರೆ, ಗೋವಾ, ಸೇರಿ ಒಟ್ಟು 16 ಕಡೆ ದಾಳಿ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಇದನ್ನು ಓದಿದ್ದೀರಾ? ಉತ್ತರ ಕನ್ನಡ | ಶಾಸಕ ಸತೀಶ್ ಸೈಲ್‌ಗೆ ಇಡಿ ಶಾಕ್; ಕಾರವಾರದ ನಿವಾಸದ ಮೇಲೆ ದಾಳಿ

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ, ಅಕ್ರಮ ಆಸ್ತಿ, ತೆರಿಗೆ ವಂಚನೆ ಆರೋಪದಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಶಾಸಕರಿಗೆ ಸೇರಿದ ಪಪ್ಪಿ ಟೆಕ್ನಾಲಜಿ, ರತ್ನ ಗೇಮಿಂಗ್ ಸೊಲ್ಯೂಷನ್ಸ್, ರತ್ನ ಗೋಲ್ಡ್, ರತ್ನ ಮಲ್ಟಿ ಸೋರ್ಸ್ ಸೇರಿ ಇತರೆ ಕಂಪನಿಗಳು ಅಕ್ರಮ ನಡೆಸಿದೆ ಎಂದು ಆರೋಪಿಸಲಾಗಿದೆ.

ಚಳ್ಳಕೆರೆ ಪಟ್ಟಣದಲ್ಲಿರುವ 4 ನಿವಾಸಗಳ ಮೇಲೆ ಇಡಿ ದಾಳಿ ಮಾಡಿದ್ದು, ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇನ್ನು 40ಕ್ಕೂ ಅಧಿಕ ಇಡಿ ಅಧಿಕಾರಿಗಳು ಖಾಸಗಿ ವಾಹನಗಳಲ್ಲಿ ಬಂದಿದ್ದಾರೆ ಎನ್ನಲಾಗಿದೆ. ದಾಳಿ ವೇಳೆ ಶಾಸಕರು ನಿವಾಸದಲ್ಲಿ ಇರಲಿಲ್ಲ ಎಂದು ಹೇಳಲಾಗಿದೆ.

ಚಿತ್ರದುರ್ಗ ನಗರದ ಹಳೇ ಟೌನ್ ವೀರಭದ್ರ ಸ್ವಾಮಿ ದೇವಸ್ಥಾನ ಬಳಿ‌ ಇರುವ ನಿವಾಸದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಚಳ್ಳಕೆರೆಯಲ್ಲಿರುವ ಪಪ್ಪಿ ನಿವಾಸ ಹಾಗೂ ಬೆಂಗಳೂರಿನ ವಸಂತನಗರದಲ್ಲಿರುವ ನಿವಾಸದ ಮೇಲೆಯೂ ದಾಳಿ ನಡೆಸಲಾಗಿದೆ.

2016ರ ಡಿಸೆಂಬರ್ 11ರಂದು ವೀರೇಂದ್ರ ಅವರ ನಿವಾಸದ ಮೇಲೆ ಐಟಿ ದಾಳಿ ನಡೆದಿತ್ತು. ಈ ದಾಳಿ ವೇಳೆ ಮನೆಯ ಬಾತ್ ರೂಂನಲ್ಲಿ 5 ಕೋಟಿ ರೂಪಾಯಿಗೂ ಹೆಚ್ಚು ನಗದು, 30 ಕೆಜಿಗೂ ಹೆಚ್ಚು ಚಿನ್ನ ಪತ್ತೆಯಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...