ಕೇಜ್ರಿವಾಲ್ ಫೋನ್‌ನಿಂದ ಲೋಕಸಭಾ ಚುನಾವಣೆಗೆ ಎಎಪಿ ತಂತ್ರದ ವಿವರ ಪಡೆಯಲು ಇಡಿ ಯತ್ನಿಸುತ್ತಿದೆ: ಅತಿಶಿ 

Date:

ಜಾರಿ ನಿರ್ದೇಶನಾಲಯವು (ಇಡಿ) ಬಿಜೆಪಿಯ ರಾಜಕೀಯ ಅಸ್ತ್ರವಾಗಿ ಕೆಲಸ ಮಾಡುತ್ತಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಫೋನ್ಅನ್ನು ಪರಿಶೀಲಿಸುವ ಮೂಲಕ ಎಎಪಿಯ ಲೋಕಸಭಾ ಚುನಾವಣಾ ಕಾರ್ಯತಂತ್ರದ ವಿವರಗಳನ್ನು ಪಡೆಯಲು ಯತ್ನಿಸುತ್ತಿದೆ ಎಂದು ಎಎಪಿ ಹಿರಿಯ ನಾಯಕಿ, ದೆಹಲಿ ಸಚಿವೆ ಅತಿಶಿ ಆರೋಪಿಸಿದ್ದಾರೆ.

ಕೇಜ್ರಿವಾಲ್ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಮಾರ್ಚ್‌ 21ರಂದು ಬಂಧಿಸಿದೆ. ಅವರನ್ನು ಏಪ್ರಿಲ್ 1ರವರೆಗೆ ಕಸ್ಟಡಿಗೆ ತೆಗೆದುಕೊಂಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅತಿಶಿ, “ಕೇಜ್ರಿವಾಲ್ ಅವರ ಮೊಬೈಲ್‌ಅನ್ನು ಪರಿಶೀಲಿಸಲು ಇಡಿ ಒತ್ತಾಯಿಸುತ್ತಿದೆ. ಆ ಮೊಬೈಲ್ ಕೆಲವು ತಿಂಗಳ ಹಿಂದೆಯಷ್ಟೇ ಖರೀಸಲಾಗಿದೆ. ಅಬಕಾರಿ ನೀತಿ ರೂಪಿಸಿದಾಗ ಈ ಮೊಬೈಲ್ ಇರಲಿಲ್ಲ. ಆದರೂ, ಅದನ್ನು ಪರಿಶೀಲಿಸಲು ಇಡಿ ಯತ್ನಿಸುತ್ತಿದೆ. ಇದು ಈ ಸಂಸ್ಥೆಯು ಬಿಜೆಪಿಯ ‘ರಾಜಕೀಯ ಅಸ್ತ್ರ’ವಾಗಿ ಕೆಲಸ ಮಾಡುತ್ತಿದೆ ಎಂಬುದನ್ನು ಸಾಬೀತು ಮಾಡುತ್ತದೆ” ಎಂದು ಆರೋಪಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ವಾಸ್ತವವಾಗಿ, ಕೇಜ್ರಿವಾಲ್ ಅವರ ಮೊಬೈಲ್‌ನಲ್ಲಿ ಏನಿದೆ ಎಂಬುದನ್ನು ತಿಳಿಯಲು ಇಡಿ ಬಯಸುತ್ತಿಲ್ಲ. ಬದಲಾಗಿ, ಬಿಜೆಪಿ ಬಯಸುತ್ತಿದೆ. ಅಬಕಾರಿ ನೀತಿಯನ್ನು 2021-22ರಲ್ಲಿ ಜಾರಿಗೆ ತರಲಾಗಿತ್ತು. ಕೇಜ್ರಿವಾಲ್ ಅವರ ಬಳಿ ಈಗಿರುವ ಫೋನ್ ಕೆಲವೇ ತಿಂಗಳ ಹಿಂದೆಯಷ್ಟೇ ಖರೀದಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

“ಕೇಜ್ರಿವಾಲ್ ಅವರ ಹೊಸ ಫೋನ್‌ನ ಪಾಸ್‌ವರ್ಡ್‌ಅನ್ನು ಇಡಿ ಕೇಳುತ್ತಿದೆ. ಯಾರೆಂದರೆ, ಅದರಲ್ಲಿ ಲೋಕಸಭಾ ಚುನಾವಣೆಗೆ ಎಎಪಿ ಕಾರ್ಯತಂತ್ರ, ಪ್ರಚಾರ ಯೋಜನೆಗಳು, ‘ಇಂಡಿಯಾ’ ಮೈತ್ರಿಕೂಟದ ನಾಯಕರ ಜೊತೆಗಿನ ಮಾತುಕತೆಗಳು ಹಾಗೂ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳ ಕಾರ್ಯತಂತ್ರದ ಬಗ್ಗೆ ಮಾಹಿತಿಯನ್ನು ಹುಡುಕಲು ಬಯಸಿದೆ” ಎಂದು ದೂರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯೇಂದ್ರ, ಸಿಟಿ ರವಿ, ಪಿ.ರಾಜೀವ್‌ನಿಂದ ಬಿಜೆಪಿ ಹಾಳಾಗುತ್ತಿದೆ: ಮಾಲೀಕಯ್ಯ ಗುತ್ತೇದಾರ ಕಿಡಿ

ಸಹೋದರ ನಿತಿನ್ ಗುತ್ತೇದಾರ ಅವರನ್ನು ಬಿಜೆಪಿಗೆ ಸೇರಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಚಿವ...

ತಮಿಳುನಾಡು ಸರ್ಕಾರಕ್ಕೆ ಜಯಲಲಿತಾ ಚಿನ್ನಾಭರಣ: ಹಸ್ತಾಂತರ ಪ್ರಕ್ರಿಯೆಗೆ ನೀಡಿದ್ದ ತಡೆ ವಿಸ್ತರಿಸಿದ ಹೈಕೋರ್ಟ್‌

ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯದ ಸುಪರ್ದಿಯಲ್ಲಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ...

ಕುಮಾರಸ್ವಾಮಿ ನನಗೆ ಮರ್ಯಾದೆ ಕೊಟ್ಟರೆ, ನಾನೂ ಕೂಡ ಮರ್ಯಾದೆ ಕೊಡುವೆ: ಡಿ.ಕೆ. ಶಿವಕುಮಾರ್

"ನಾನು ಕುಮಾರಸ್ವಾಮಿ ಅವರಿಗೆ ವೈಯಕ್ತಿಕವಾಗಿ ಗೌರವ ನೀಡುತ್ತೇನೆ. ಈಗಲೂ ನೀಡುತ್ತಿದ್ದೇನೆ, ಮುಂದೆಯೂ...

ಯುಪಿಎಸ್‌ಸಿ ಫಲಿತಾಂಶ ಪ್ರಕಟ: ಆದಿತ್ಯ ಶ್ರೀವಾಸ್ತವ ಮೊದಲ ರ‍್ಯಾಂಕ್‌, 1016 ಮಂದಿ ತೇರ್ಗಡೆ

ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ) 2023ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಫಲಿತಾಂಶಗಳನ್ನು...