ಇ.ಡಿ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರಲು: ಸಿಎಂ ಸಿದ್ದರಾಮಯ್ಯ ಆರೋಪ

Date:

ಹೈಕೋರ್ಟ್‌ನಲ್ಲಿ ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ ಇ.ಡಿ ಅವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

- Advertisement -

ಕೆ.ಆರ್.ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, “ಇ.ಡಿ ಅವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು , ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ಈ ವಿಚಾರಕ್ಕೆ ಸಂಬಂಧಪಟ್ಟಂತೆನಾಳೆ ನಮ್ಮ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದರ ಹಿಂದೆ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹದ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ” ಎಂದು ತಿಳಿಸಿದರು.

“ಡಿಸೆಂಬರ್ 24 ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ ಇ.ಡಿ ಯವರು ಲೋಕಾಯುಕ್ತಕ್ಕೆ ವರದಿ ನೋಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿರುವುದರ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ” ಎಂದರು.

ಮಂತ್ರಿ ಮಂಡಲ ಪುನಾರಚನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಮಂತ್ರಿಮಂಡಲ ಪುನಾರಚನೆ ಮಾಡ್ತೀವಿ ಅಂತ ನಾನು ಹೇಳಿದ್ನಾ? ನೀವೇ ನಿಮ್ಮ ಪಾಡಿಗೆ ನೀವು ಕಲ್ಪಿಸಿಕೊಂಡು ಸುದ್ದಿ ಮಾಡಿದ್ರಿ. ಈಗ ನನ್ನ ಬಳಿ ಉತ್ತರ ಕೇಳಿದರೆ ಹೇಗೆ? ಈ ಬಗ್ಗೆ ಹೈ ಕಮಾಂಡ್ ಕೂಡ ಸೂಚನೆ ಕೊಟ್ಟಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...