ವಿದ್ಯೆ ಯಾರೊಬ್ಬರ ಸ್ವತ್ತೂ ಅಲ್ಲ, ಮೇಲ್ವರ್ಗದವರಿಗೆ ಮಾತ್ರ ಶಿಕ್ಷಣ ಎನ್ನುವುದು ತಪ್ಪು: ಸಿಎಂ ಸಿದ್ದರಾಮಯ್ಯ

Date:

Advertisements

ವಿದ್ಯೆ ಯಾರೊಬ್ಬರ ಸ್ವತ್ತೂ ಅಲ್ಲ. ವಾಲ್ಮೀಕಿ, ವ್ಯಾಸ, ಕನಕದಾಸ ಎಲ್ಲರೂ ಶೂದ್ರ, ದಲಿತ ಸಮುದಾಯದವರು. ಮೇಲ್ವರ್ಗಕ್ಕೆ ಮಾತ್ರ ಶಿಕ್ಷಣ ಎನ್ನುವುದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಲ್ಲಿನ 443.64 ಕೋಟಿಯ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ಫಲಾನುಭವಿಗಳಿಗೆ ಕೃಷಿ ಸಲಕರಣೆಗಳನ್ನು ವಿತರಿಸಿದ ಬಳಿಕ ವಾಲ್ಮೀಕಿ ಜಯಂತಿ ಪ್ರಯುಕ್ತ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

“ನಾವು ಈಗಾಗಲೇ ಸರ್ಕಾರದ ವತಿಯಿಂದ ವಾಲ್ಮೀಕಿ ಜಯಂತಿ ಆಚರಿಸುತ್ತಿದ್ದು ರಾಜ್ಯ ಮಟ್ಟದ ವಾಲ್ಮೀಕಿ ಪ್ರಶಸ್ತಿಯನ್ನೂ ನೀಡುತ್ತಿದ್ದೇವೆ. ವಾಲ್ಮೀಕಿಯವರು ಸಂಸ್ಕೃತದಲ್ಲಿ 20 ಸಾವಿರ ಶ್ಲೋಕಗಳನ್ನು ರಚಿಸಿದ್ದಾರೆ. ಶೂದ್ರ ವರ್ಗದ ಜನ ವಿದ್ಯೆ ಕಲಿಯುವುದೇ ನಿಷಿದ್ಧವಾಗಿದ್ದ ಕಾಲದಲ್ಲಿ ವಿದ್ಯೆ ಕಲಿತು, ಸಂಸ್ಕೃತವನ್ನೂ ಕಲಿತು ರಾಮಾಯಣ ರಚಿಸಿದ್ದು ಬಹಳ ದೊಡ್ಡ ಹೋರಾಟ ಮತ್ತು ಸಾಧನೆ” ಎಂದರು.

Advertisements

“ಮಹಾಭಾರತ ಬರೆದ ವ್ಯಾಸರು ಬೆಸ್ತರು, ರಾಮಾಯಣ ಬರೆದ ವಾಲ್ಮೀಕಿ ಬೇಡ ಸಮುದಾಯದವರು, ಶಾಕುಂತಲ ಬರೆದ ಕಾಳಿದಾಸರು ಕುರುಬ ಸಮುದಾಯದವರು. ವಿದ್ಯೆ ಯಾರೊಬ್ಬರ ಸ್ವತ್ತೂ ಅಲ್ಲ. ಅವಕಾಶಗಳು ಸಿಗಬೇಕು ಅಷ್ಟೆ. ನಮ್ಮ ಜೀವನವನ್ನು ರೂಪಿಸಿಕೊಳ್ಖುವ ಶಿಲ್ಪಿ ನಾವೇ. ಆದ್ದರಿಂದ ವಿದ್ಯೆ ಕಲಿಯಲೇಬೇಕು. ಶೂದ್ರ ಜಾತಿಯ ಕನಕದಾಸರು ದಾಸಶ್ರೇಷ್ಠರಾದರು. ಆದ್ದರಿಂದ ವಿದ್ಯಾವಂತರಾಗಲು ಜಾತಿ ಅಡ್ಡಿ ಬರುವುದಿಲ್ಲ. ಮೇಲ್ವರ್ಗದವರಿಗೆ ಮಾತ್ರ ವಿದ್ಯೆ ಎನ್ನುವುದನ್ನು ನಮ್ಮಲ್ಲಿ ಬಿತ್ತಿದ್ದಾರೆ. ಇದು ತಪ್ಪು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾರ್ವಜನಿಕ ಸಂಯಮವೂ, ಸುದ್ದಿ ಮಾಧ್ಯಮಗಳೂ

“ನಮ್ಮಪ್ಪ ಚನ್ನಪ್ಪಯ್ಯ ಅನ್ನುವವರ ಮೇಲ್ವರ್ಗದವರ ಮಾತು ಕೇಳಿ, ಕುರುಬರೆಲ್ಲಾ ಲಾಯರ್ ಓದೋಕೆ ಆಗಲ್ಲ ಎನ್ನುತ್ತಿದ್ದರು. ಆದರೆ ನಾನು ಹಠ ತೊಟ್ಟು ಕಾನೂನು ಓದಿ ಲಾಯರ್ ಆದೆ. ಮುಖ್ಯಮಂತ್ರಿಯೂ ಆದೆ. ಇಂದು ನಾವು ಆಚರಿಸುತ್ತಿರುವ ಪ್ರಜಾಪ್ರಭುತ್ವಕ್ಕೆ ವಾಲ್ಮೀಕಿ ಅವರು ಅವತ್ತೇ ಅಡಿಪಾಯ ಹಾಕಿದ್ದರು. ಮಹಾತ್ಮ ಗಾಂಧಿಯವರು ಹೇಳುವ ರಾಮರಾಜ್ಯವನ್ನು ವಾಲ್ಮೀಕಿ ಅವರು ರಾಮಾಯಣದಲ್ಲೇ ಚಿತ್ರಿಸಿದ್ದಾರೆ. ಆದರೂ ವಾಲ್ಮೀಕಿ ಅವರು ದರೋಡೆಕೋರ ಆಗಿದ್ದರು ಎಂದೆಲ್ಲಾ ಸುಳ್ಖು ಕತೆ ಸೃಷ್ಟಿಸಿದ್ದಾರೆ. ಇವೆಲ್ಲಾ ನಂಬೋಕೆ ಹೋಗಬೇಡಿ. ವಾಲ್ಮೀಕಿ ಮಹಾನ್ ಮೇದಾವಿ, ವಿದ್ಯಾವಂತ ಆಗಿದ್ದ” ಎಂದರು.

443 ಕೋಟಿ ಎಲ್ಲಿಂದ ಬಂತು: ಸಿಎಂ ಪ್ರಶ್ನೆ

“ಇಂದು ಹೆಚ್.ಡಿ.ಕೋಟೆಯಲ್ಲಿ 443 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟಿಸಿದ್ದೇನೆ. ಶಂಕುಸ್ಥಾಪನೆಯನ್ನೂ ನೆರವೇರಿಸಿದ್ದಾರೆ. ರಾಜ್ಯ ಸರ್ಕಾರದ ಬಳಿ ಸಂಬಳ ಕೊಡಲು, ಅಭಿವೃದ್ಧಿಗೆ ಹಣ ಇಲ್ಲ ಬಿಜೆಪಿಯವರು ಹಸಿ ಸುಳ್ಳು ಹರಡಿಸುತ್ತಾರೆ. ನಮ್ಮಲ್ಲಿ ಹಣ ಇಲ್ಲದಿದ್ದರೆ ಈ 443 ಕೋಟಿ ಎಲ್ಲಿಂದ ಬಂತು? ಯಾವುದಾದರೂ ರಾಜ್ಯ ಸರ್ಕಾರಿ ನೌಕರರಿಗೆ ಸಂಬಳ ನಿಂತಿದೆಯಾ? ರಾಜ್ಯದ ಕೋಟಿ ಕೋಟಿ ಫಲಾನುಭವಿಗಳು ನಮ್ಮ ಐದೂ ಗ್ಯಾರಂಟಿ ಯೋಜನೆಗಳ ಫಲವನ್ನು ಪ್ರತೀ ತಿಂಗಳೂ ಪಡೆಯುತ್ತಿದ್ದಾರೆ. ಆದರೂ ಬಿಜೆಪಿಯವರು ಗ್ಯಾರಂಟಿ ಯೋಜನೆಗಳಿಗೂ ಹಣ ಇಲ್ಲ ಎಂದು ಸುಳ್ಳು ಹರಡಿಸುತ್ತಿದ್ದಾರೆ. ಸುಳ್ಳೇ ಬಿಜೆಪಿಯ ಮನೆ ದೇವರು” ಎಂದು ಹರಿಹಾಯ್ದರು.

ವಾಲ್ಮೀಕಿ ಸಂಘದ ಬೇಡಿಕೆಯಂತೆ ಹೆಚ್.ಡಿ.ಕೋಟೆಯಲ್ಲಿ ವಾಲ್ಮೀಕಿ ಭವನ ನಿರ್ಮಾಣಕ್ಕೆ 2 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಘೋಷಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X