ನೀಟ್ ಸೋರಿಕೆಯಿಂದಾಗಿ ಐವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ ಶಿಕ್ಷಣ ಸಚಿವರು ರಾಜೀನಾಮೆ ನೀಡಲೇಬೇಕು ಎಂದು ವಿಡಂಬನಾತ್ಮಕ ರಾಜಕೀಯ ಚಳವಳಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸ್ಥಾಪಕ ಅಭಿಜೀತ್ ದೀಪ್ಕೆ ಆಗ್ರಹಿಸಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಪರೀಕ್ಷೆಗಳ ಅಧ್ವಾನಕ್ಕೆ ಕಾರಣವಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ನಡೆಸಲಿದೆ. ಈ ಪ್ರತಿಭಟನೆಗೆ ಆರಂಭದಲ್ಲಿ ಅನುಮತಿ ನೀಡಿರಲಿಲ್ಲ. ಆದರೆ ಇಂದು ಬೆಳಿಗ್ಗೆ ಅಭಿಜೀತ್ ದೀಪ್ಕೆ ಅಮೆರಿಕದಿಂದ ಭಾರತಕ್ಕೆ ಬಂದಿಳಿಯುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ.
ಇದನ್ನು ಓದಿದ್ದೀರಾ? ಭಾರತಕ್ಕೆ ಬಂದಿಳಿದ ಅಭಿಜೀತ್ ದೀಪ್ಕೆ: ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆಗೆ ದೆಹಲಿ ಪೊಲೀಸರ ಅನುಮತಿ
ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅಭಿಜೀತ್ ದೀಪ್ಕೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ. ಪರೀಕ್ಷೆಗಳಲ್ಲಿ ನಡೆದ ಅಕ್ರಮಗಳು ಮತ್ತು ವಿದ್ಯಾರ್ಥಿಗಳ ಮೇಲಿನ ಪರಿಣಾಮಗಳ ಬಗ್ಗೆ ತಮ್ಮ ಬೇಡಿಕೆಯನ್ನೂ ಉಲ್ಲೇಖಿಸಿದರು.
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಪುಸ್ತಕವನ್ನು ಎತ್ತಿ ಹಿಡಿದ ದೀಪ್ಕೆ “ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು. ಐದು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.
ಇನ್ನು ಈಗಾಗಲೇ ದೆಹಲಿಯ ಜಂತರ್ ಮಂತರ್‌ನಲ್ಲಿ ಸಾವಿರಾರು ಮಂದಿ ಸೇರಿದ್ದಾರೆ. “ನಾನೂ ಜಿರಳೆ” ಎಂದು ಇಂಗ್ಲೀಷ್, ಹಿಂದಿಯಲ್ಲಿ ಬರೆದಿರುವ ಪೋಸ್ಟರ್‌ಗಳನ್ನು ಪ್ರತಿಭಟನಾಕಾರರು ಹಿಡಿದಿದ್ದಾರೆ. ಹಾಗೆಯೇ ಶಿಕ್ಷಣ ಸಚಿವರು ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದ ಪೋಸ್ಟರ್‌ಗಳು ಕಾಣಿಸಿವೆ.





