ಈ ದಿನ ಫಲಶೃತಿ | ರಾಜ್ಯದಲ್ಲಿ ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಲೇಬಲ್‌ ಕಡ್ಡಾಯ

Date:

ಕನ್ನಡ ಭಾಷೆಗೆ ಹೆಚ್ಚಿನ ಒತ್ತು ನೀಡಿದ ರಾಜ್ಯ ಸರ್ಕಾರ ಇದೀಗ, ರಾಜ್ಯದಲ್ಲಿ ಮಾರಾಟವಾಗುವ ಖಾಸಗಿ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಉತ್ಪನ್ನಗಳ ಮೇಲಿನ ಗುರುತನ್ನು (ಲೇಬಲ್‌) ಕನ್ನಡದಲ್ಲೇ ಮುದ್ರಿಸಲು ರಾಜ್ಯದಲ್ಲಿ ಕಡ್ಡಾಯ ಮಾಡಿ ಸುತ್ತೋಲೆ ಹೊರಡಿಸಿದೆ.

- Advertisement -

ಮುಖ್ಯಮಂತ್ರಿಗಳ ಕಚೇರಿ ಶುಕ್ರವಾರ ರಾತ್ರಿ ಮಾಧ್ಯಮಗಳಿಗೆ ಸುತ್ತೋಲೆ ಪ್ರತಿಯನ್ನು ಬಿಡುಗಡೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

‘ಈ ದಿನ.ಕಾಂ’ ಈ ಬಗ್ಗೆ ಗುರುವಾರ (ಫೆ.27) ‘ಕಂಪನಿಗಳ ಉತ್ಪನ್ನಗಳ (Products) ಮೇಲೆ ಹಿಂದಿ- ಇಂಗ್ಲಿಷ್ ಮೆರೆದಾಟ; ಕನ್ನಡ ಕಡ್ಡಾಯ ಯಾವಾಗ?’ ತಲೆಬರಹದಡಿ ಸುದೀರ್ಘ ವರದಿಯೊಂದನ್ನು ಪ್ರಕಟಿಸಿತ್ತು.

2024ರಲ್ಲಿ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ -2024’ ಫೆಬ್ರವರಿ 15ರಂದು ಕರ್ನಾಟಕ ವಿಧಾನಸಭೆಯು ಅಂಗೀಕರಿಸಿದ ಮೇಲೆ ನಾಮಫಲಕಗಳ ಒಟ್ಟಾರೆ ವಿಸ್ತೀರ್ಣದಲ್ಲಿ ಕನ್ನಡ ಭಾಷೆಯನ್ನು ಮೇಲ್ಭಾಗದಲ್ಲಿ ಶೇ.60 ರಷ್ಟು (60 ಕನ್ನಡ-40 ಇತರೆ ಭಾಷೆ) ಪ್ರದರ್ಶಿಸುವುದು ರಾಜ್ಯದಲ್ಲಿ ಕಡ್ಡಾಯವಾಗಿದೆ. ಆದರೆ, ಉತ್ಪನ್ನಗಳ ಮೇಲೆ ಕನ್ನಡ ಕಡ್ಡಾಯವಾಗುವುದು ಯಾವಾಗ ಎಂದು ವರದಿಯಲ್ಲಿ ಪ್ರಶ್ನೆಯನ್ನು ಎತ್ತಲಾಗಿತ್ತು.

ವರದಿ ಪ್ರಕಟವಾದ ಮರುದಿನವೇ ಸ್ಪಂದಿಸಿರುವ ಸರ್ಕಾರ, ‘ರಾಜ್ಯದಲ್ಲಿ ಸರ್ಕಾರಿ ಮತ್ತು ಖಾಸಗಿ ಕಂಪನಿಗಳಲ್ಲಿ ಉತ್ಪಾದಿಸಲಾಗುವ ಉತ್ಪನ್ನಗಳ ಮೇಲೆ ಕನ್ನಡದ ಹೆಸರನ್ನ ಕಡ್ಡಾಯ ಎಂದು ಹೇಳಿದೆ. ಯಾವುದೇ ಉತ್ಪನ್ನಗಳಿರಲಿ ಕನ್ನಡದಲ್ಲಿ ಹೆಸರು ಇರಲೇಬೇಕು’ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಸುತ್ತೋಲೆ ಹೊರಡಿಸಿದೆ.

ಈ ಸ್ಟೋರಿ ಓದಿದ್ದೀರಾ? ಕಂಪನಿಗಳ ಉತ್ಪನ್ನಗಳ (Products) ಮೇಲೆ ಹಿಂದಿ- ಇಂಗ್ಲಿಷ್ ಮೆರೆದಾಟ; ಕನ್ನಡ ಕಡ್ಡಾಯ ಯಾವಾಗ?

“ಉತ್ಪನ್ನಗಳ ಮೇಲೆ ಕನ್ನಡ ಕಡ್ಡಾಯ ಇರಬೇಕು ಎಂದು ಸರ್ಕಾರದ ಹಿಂದಿನ ಮುಖ್ಯ ಕಾರ್ಯದರ್ಶಿಯಾಗಿದ್ದ ವಂದಿತಾ ಶರ್ಮಾ ಅವರಿಗೆ ಪತ್ರ ಬರೆಯಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಕಳೆದ ನವೆಂಬರ್‌ನಲ್ಲಿ ಈ ಬಗ್ಗೆ ಘೋಷಣೆ ಮಾಡಿದ್ದರು. ಮಾರ್ಚ್‌ ತಿಂಗಳ ಕೊನೆಯೊಳಗೆ ರಾಜ್ಯ ಸರ್ಕಾರದ ಆದೇಶ ಹೊರಬೀಳುವ ನಿರೀಕ್ಷೆಯಿದೆ” ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಆಶಾವಾದ ವ್ಯಕ್ತಪಡಿಸಿದ್ದನ್ನು ಇಲ್ಲಿ ನೆನೆಯಬಹುದು.

ಸುತ್ತೋಲೆಯಲ್ಲಿ ಏನಿದೆ?

ಭಾಷೆಯು ನೆಲದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಒಂದು ಭಾಷೆ ಬೆಳವಣಿಗೆ ಆಗಬೇಕಾದರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಟೆ, ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿರಬೇಕು. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರವು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ನ್ನು ದಿನಾಂಕ: 12.03.2024 ರಿಂದ ಜಾರಿಗೆ ತಂದಿರುತ್ತದೆ. ಸದರಿ ಅಧಿನಿಯಮದ ಕಲಂ 17 (7)ರಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲಾ ಕೈಗಾರಿಕಾ ಮತ್ತು ಇತರೆ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಯಾವುದಾದರೂ ಇದ್ದಲ್ಲಿ ಯಾವುದೇ ಇತರ ಭಾಷೆಯ ಜೊತೆಗೆ ಕನ್ನಡದಲ್ಲಿ ಇರತಕ್ಕದ್ದೆಂದು ತಿಳಿಸಲಾಗಿದೆ.

ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಎಲ್ಲಾ ಕೈಗಾರಿಕೆ ಮತ್ತು ಗ್ರಾಹಕ ಉತ್ಪನ್ನಗಳ ಮೇಲೆ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಇತರ ಭಾಷೆಗಳ ಜೊತೆಗೆ ಕನ್ನಡದಲ್ಲಿಯೂ ಕಡ್ಡಾಯವಾಗಿ ಮುದ್ರಿಸುವಂತೆ ಈ ಮೂಲಕ ಸೂಚಿಸಲಾಗಿದೆ ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ರ ಕಲಂ 9ರಡಿ ಗೊತ್ತುಪಡಿಸಿದ ಜಾರಿ ಪ್ರಾಧಿಕಾರಗಳು ಈ ಸೂಚನೆಗಳನ್ನು ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದ ಎಲ್ಲಾ ಕೈಗಾರಿಕಾ ಮತ್ತು ಗ್ರಾಹಕ ವಸ್ತುಗಳ ಉತ್ಪನ್ನದಾರರು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಬಗ್ಗೆ ಮೇಲ್ವಿಚಾರಣೆಯನ್ನು ಮಾಡುವಂತೆ ಸೂಚಿಸಲಾಗಿದೆ.

WhatsApp Image 2025 03 01 at 10.17.55 AM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...