ಜಾತಿನಿಂದನೆ, ಹನಿಟ್ರ್ಯಾಪ್, ಎಚ್‌ಐವಿ ಸೋಂಕಿತ ರಕ್ತ ಇಂಜೆಕ್ಟ್ ಮಾಡಲು ಸಂಚು ರೂಪಿಸಿದ್ದ ಪ್ರಕರಣಗಳಲ್ಲಿ ಆರೋಪಿಯಾಗಿರುವ, ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಆಯೋಜಿಸಲಾಗಿದ್ದ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮುನಿರತ್ನ ಭಾಗಿಯಾಗಿದ್ದರು. ಈ ವೇಳೆ, ಅವರ ಮೇಲೆ ಕೆಲವರು ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೊಟ್ಟೆ ಎಸೆದವರು ಕಾಂಗ್ರೆಸ್ ಕಾರ್ಯಕರ್ತರೆಂದು ಆರೋಪಿಸಿ ಮುನಿರತ್ನ ಹಾಗೂ ಅವರ ಬೆಂಬಲಿಗರು ಕಂಠೀರವ ಸ್ಟೇಡಿಯಂ ಬಳಿ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಬೆಂಬಲಿಗರು ಕೂಡಾ ಪ್ರತಿ ಪ್ರತಿಭಟನೆ ನಡೆಸಿದ್ದು, ಎರಡೂ ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಪ್ರತಿಭಟನಾಕಾರರು 2-3 ಕಾರುಗಳನ್ನು ಜಖಂಗೊಳಿಸಿದ್ದಾರೆ ಎಂದು ವರದಿಯಾಗಿದೆ.
ಸ್ಥಳಕ್ಕೆ ನಂದಿನಿ ಲೇಔಟ್ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೇವರ್ಸಿ ಮುನಿರತ್ನ ಗೆ ಮೊಟ್ಟೆ ಏಟು 🥚
— 👑Che_ಕೃಷ್ಣ🇮🇳💛❤️ (@ChekrishnaCk) December 25, 2024
ಒಕ್ಕಲಿಗರ ಹೆಣ್ಣನ್ನು ಮಂಚಕ್ಕೆ ಕರೆಯೋದು, ದಲಿತರಿಗೆ ಅವಮಾನ ಮಾಡೋದು. ಇದೆಲ್ಲ ಮಾಡಿದ್ರೆ ಇನ್ನೇನ್ ಆಗುತ್ತೆ pic.twitter.com/LWoUcY4Tl8
ಬಿಬಿಎಂಪಿಯ ಮಾಜಿ ಸದಸ್ಯೆ (ಕಾರ್ಪೋರೇಟರ್) ಬೆಡ್‌ರೂಮ್‌ನಲ್ಲಿ ಕ್ಯಾಮೆರಾ ಇಡಲು ಮುನಿರತ್ನ ಯತ್ನಿಸಿದ್ದರು. ನಂದಿನಿ ಲೇಔಟ್‌ನ ಮಾಜಿ ಕಾರ್ಪೋರೇಟರ್ ಮಂಜುಳ ಅವರ ಕೊಲೆಗೆ ಸಂಚು ರೂಪಿಸಿದ್ದರು. ಹಲವಾರು ಮಹಿಳೆಯರನ್ನು ತನ್ನ ಲೈಂಗಿಕ ಕೃತ್ಯಗಳಿಗೆ ಬಳಸಿಕೊಂಡಿದ್ದರು ಎಂಬ ಆರೋಪಗಳಿವೆ. ಆ ಕಾರಣಕ್ಕಾಗಿಯೇ ಮುನಿರತ್ನ ಮೇಲೆ ಮೊಟ್ಟೆ ಎಸೆಯಲಾಗಿದೆ ಎಂದು ಹೇಳಲಾಗುತ್ತಿದೆ.