ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಅವರ ಎಕ್ಸ್ ಖಾತೆಯನ್ನು ಭಾನುವಾರ ಹ್ಯಾಕ್ ಮಾಡಲಾಗಿದೆ. ಹ್ಯಾಕರ್‌ಗಳು ಪಾಕಿಸ್ತಾನ ಮತ್ತು ಟರ್ಕಿ ಧ್ವಜಗಳ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನದ ನಡುವೆ ಏಷ್ಯಾ ಕಪ್ ಎರಡನೇ ಪಂದ್ಯ ನಡೆಯಲಿರುವ ಮುನ್ನ ಹ್ಯಾಕರ್‌ಗಳು ಈ ಕೃತ್ಯವನ್ನು ಎಸಗಿದ್ದಾರೆ. ಸದ್ಯ ಖಾತೆಯನ್ನು ಮತ್ತೆ ನಿಯಂತ್ರಣಕ್ಕೆ ಪಡೆದು ಪೋಸ್ಟ್ ಡಿಲೀಟ್ ಮಾಡಲಾಗಿದೆ.
ಇದನ್ನು ಓದಿದ್ದೀರಾ? ಭಾರತಕ್ಕೆ ಬಂದು ಇವಿಎಂ ಹೇಗೆ ಹ್ಯಾಕ್ ಆಗುತ್ತೆ ತೋರಿಸಿ: ಮಸ್ಕ್‌ಗೆ ಚುನಾವಣಾ ಆಯೋಗ ಸವಾಲು
“ನಾವು ತಕ್ಷಣ ಸೈಬರ್ ಅಪರಾಧ ಪೊಲೀಸರಿಗೆ ಎಚ್ಚರಿಕೆ ನೀಡಿದ್ದೇವೆ. ಉಪಮುಖ್ಯಮಂತ್ರಿಗಳ ಎಕ್ಸ್ ಖಾತೆಯ ನಿಯಂತ್ರಣ ಹೊಂದಿರುವ ನಮ್ಮ ತಂಡವು ನಂತರ ಖಾತೆಯನ್ನು ಮತ್ತೆ ತಮ್ಮ ನಿಯಂತ್ರಣಕ್ಕೆ ಪಡೆದುಕೊಂಡಿದೆ. ಸುಮಾರು 30ರಿಂದ 45 ನಿಮಿಷಗಳ ಸಮಯ ತೆಗೆದುಕೊಂಡಿದೆ” ಎಂದು ಅಧಿಕಾರಿಗಳು ಹೇಳಿದ್ದಾರೆ.
