SIR | ಪಶ್ಚಿಮ ಬಂಗಾಳದ 7 ಅಧಿಕಾರಿಗಳನ್ನು ಅಮಾನತುಗೊಳಿಸಿದ ಚುನಾವಣಾ ಆಯೋಗ

Date:

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಗಂಭೀರ ದುಷ್ಕೃತ್ಯ ನಡೆಸಿದ, ಕರ್ತವ್ಯ ಲೋಪ ಮಾಡಿದ ಮತ್ತು ಅಧಿಕಾರ ದುರುಪಯೋಗ ಮಾಡಿದ ಆರೋಪದಲ್ಲಿ ಪಶ್ಚಿಮ ಬಂಗಾಳದ ಏಳು ಅಧಿಕಾರಿಗಳನ್ನು ಚುನಾವಣಾ ಆಯೋಗವು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ.

- Advertisement -

ಅಮಾನತುಗೊಂಡ ಎಲ್ಲಾ ಅಧಿಕಾರಿಗಳು ಚುನಾವಣಾ ಆಯೋಗದ ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದರು. ಈ ಅಧಿಕಾರಿಗಳು ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ತಯಾರಿಸುವುದು ಮತ್ತು ಅದನ್ನು ಕಾಲಕಾಲಕ್ಕೆ ಪರಿಷ್ಕರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಸಾಫ್ಟ್‌ವೇರ್ ಕೈಗೊಂಬೆಯಾದ ಚುನಾವಣಾ ವ್ಯವಸ್ಥೆ: ದೆಹಲಿಯಿಂದಲೇ ಇಡೀ ದೇಶದ...

ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸಲು ಅಲ್ಲ. ಒಬ್ಬ ಐಟಿ ಅಧಿಕಾರಿಯ ವಿವೇಚನಾರಹಿತ ನಿರ್ಧಾರಗಳು ಹಾಗೂ ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಸಾಂಸ್ಥಿಕ ಮೌನವು ಇಡೀ ಚುನಾವಣಾ...

ಇದನ್ನು ಓದಿದ್ದೀರಾ? SIR ಅಪಾಯ ಬದಿಗಿಟ್ಟ ಕಾಂಗ್ರೆಸ್: ಮಮತಾ ಕೆಚ್ಚು ಸಿದ್ದರಾಮಯ್ಯಗೆ ಪಾಠವಾಗುವುದೇ?

“ಈ ಅಧಿಕಾರಿಗಳ ವಿರುದ್ಧ ಆಯಾ ಕೇಡರ್ ನಿಯಂತ್ರಣ ಅಧಿಕಾರಿಗಳು ಯಾವುದೇ ವಿಳಂಬವಿಲ್ಲದೆ ತಕ್ಷಣವೇ ಶಿಸ್ತು ಕ್ರಮ ಕೈಗೊಳ್ಳಬೇಕು” ಎಂದು ಚುನಾವಣಾ ಆಯೋಗವು ರಾಜ್ಯ ಮುಖ್ಯ ಕಾರ್ಯದರ್ಶಿ ನಂದಿನಿ ಚಕ್ರವರ್ತಿ ಅವರಿಗೆ ಸೂಚಿಸಿದೆ. ಹಾಗೆಯೇ ಈ ಬಗ್ಗೆ ಆಯೋಗಕ್ಕೆ ಮಾಹಿತಿ ನೀಡಬೇಕು ಎಂದೂ ನಿರ್ದೇಶಿಸಿದೆ.

ಬಿಹಾರದಲ್ಲಿ ಎಸ್‌ಐಆರ್ ಪ್ರಕ್ರಿಯೆ ಆರಂಭಿಸಿದ ಚುನಾವಣಾ ಆಯೋಗವು ಸದ್ಯ ಪಶ್ಚಿಮ ಬಂಗಾಳ, ಕೇರಳ ಸೇರಿದಂತೆ 12 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಸಿದೆ. ಈವರೆಗೆ ಪ್ರಕ್ರಿಯೆಯಲ್ಲಿ ದೇಶಾದ್ಯಂತ ಸುಮಾರು 6.5 ಕೋಟಿ ಮತದಾರರ ಹೆಸರುಗಳನ್ನು ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಬಹುತೇಕವಾಗಿ ಮಹಿಳೆಯರು, ಅಲ್ಪಸಂಖ್ಯಾತರು, ದಲಿತರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ 58.20 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದ್ದು, ಇತ್ತೀಚೆಗೆ ಎಸ್‌ಐಆರ್ ವಿಚಾರಣೆ ನಡೆಸಲಾಗಿದ್ದು, ಹೆಚ್ಚುವರಿಯಾಗಿ 6.61 ಲಕ್ಷ ಹೆಸರುಗಳನ್ನು ತೆಗೆದುಹಾಕುವ ಸಾಧ್ಯತೆಯಿದೆ. ಈ ಪ್ರಕ್ರಿಯೆ ವೇಳೆ ಒತ್ತಡದಿಂದಾಗಿ 2025ರ ಅಂತ್ಯದ ವೇಳೆಗೆ ಸುಮಾರು 33ರಿಂದ 50ಕ್ಕೂ ಹೆಚ್ಚು ಬಿಎಲ್‌ಒಗಳು ಸಾವನ್ನಪ್ಪಿದ್ದಾರೆ. ಈ ಎಲ್ಲಾ ವಿಚಾರದಲ್ಲಿ ಚುನಾವಣಾ ಆಯೋಗ ಮತ್ತು ತೃಣಮೂಲ ಕಾಂಗ್ರೆಸ್ ಸರ್ಕಾರದ ನಡುವೆ ತೀವ್ರ ವಾಗ್ವಾದ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈಗಾಗಲೇ ಈ ಪ್ರಕ್ರಿಯೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ತಾವೇ ಖುದ್ದಾಗಿ ವಾದ ಮಂಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ನಯಾರಾ ಎನರ್ಜಿ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ; ಪೆಟ್ರೋಲ್ ₹5, ಡೀಸೆಲ್ ₹3 ದುಬಾರಿ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಹಾಗೂ ಸಂಸ್ಕರಿಸಿದ ಇಂಧನ ಉತ್ಪನ್ನಗಳ ಬೆಲೆ...

ಇನ್‌ಸ್ಟಾಗ್ರಾಮ್ ಚಾಟ್ ವಿವಾಹೇತರ ಸಂಬಂಧಕ್ಕೆ ಪುರಾವೆಯಲ್ಲ: ಅಲಹಾಬಾದ್ ಹೈಕೋರ್ಟ್

ಪತ್ನಿಯು ಮತ್ತೊಬ್ಬ ವ್ಯಕ್ತಿಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ನಡೆಸಿದ ಸಂಭಾಷಣೆಗಳ ಪ್ರಿಂಟ್‌ಔಟ್‌ಗಳನ್ನು ಮಾತ್ರವೇ ಆಧಾರವಾಗಿಟ್ಟುಕೊಂಡು...