ಲೋಕಸಭಾ ಚುನಾವಣೆಗೂ ಮುನ್ನ ಚುನಾವಣಾ ಆಯುಕ್ತ ಹುದ್ದೆಗೆ ರಾಜೀನಾಮೆ ನೀಡಿದ ಅರುಣ್ ಗೋಯೆಲ್

Date:

Advertisements

ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿರುವ ನಡುವೆಯೇ, ದಿಡೀರ್ ಬೆಳವಣಿಗೆಯೊಂದರಲ್ಲಿ ಚುನಾವಣಾ ಆಯುಕ್ತರಾಗಿರುವ ಅರುಣ್ ಗೋಯೆಲ್ ಶನಿವಾರ ರಾಜೀನಾಮೆ ನೀಡಿದ್ದಾರೆ. ಇವರ ಅಧಿಕಾರಾವಧಿ 2027ರವರೆಗೆ ಇತ್ತಾದರೂ, ರಾಜೀನಾಮೆ ನೀಡಿದ್ದಾರೆ.

ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ್ದು, ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ವರದಿಯಾಗಿದೆ. ಗೋಯೆಲ್ ರಾಜೀನಾಮೆಯಿಂದಾಗಿ ಇದೀಗ ಚುನಾವಣಾ ಸಮಿತಿಯಲ್ಲಿ ಎರಡು ಚುನಾವಣಾ ಆಯುಕ್ತ ಸ್ಥಾನಗಳು ಖಾಲಿಯಾಗಿದೆ.

ಗೋಯೆಲ್ ವಾರು, ನಿವೃತ್ತ ಪಂಜಾಬ್-ಕೇಡರ್ ಐಎಎಸ್ ಅಧಿಕಾರಿಯಾಗಿದ್ದು, 2022ರ ನವೆಂಬರ್‌ನಲ್ಲಿ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು.

Advertisements

ಚುನಾವಣಾ ಬಾಂಡ್‌ನ ಬಗ್ಗೆ ಅರ್ಜಿ ಸಲ್ಲಿಸಿದ್ದವರಲ್ಲೋರ್ವರಾಗಿರುವ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಸಂಸ್ಥೆ, ಅರುಣ್ ಗೋಯೆಲ್ ನೇಮಕವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.

ಇದನ್ನು ಓದಿದ್ದೀರಾ? ರಾಜಕೀಯದಲ್ಲಿ ದ್ವೇಷ-ಅಸೂಯೆ ಇದ್ದೇ ಇರುತ್ತೆ: ‘ಟಿಕೆಟ್ ಮಿಸ್’ ಸುದ್ದಿಯ ಬೆನ್ನಲ್ಲೇ ಪ್ರತಾಪ್ ಸಿಂಹ ಹೇಳಿಕೆ

ಮುಂದಿನ ಲೋಕಸಭೆ ಚುನಾವಣೆಯು ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯುವ ನಿರೀಕ್ಷೆಯಿದೆ. ಪ್ರಸ್ತುತ ಸರ್ಕಾರದ ಅವಧಿಯು 2024ರ ಮೇನಲ್ಲಿ ಕೊನೆಗೊಳ್ಳಲಿದೆ. ಸದ್ಯ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ಕಾರ್ಯ ನಿರ್ವಹಿಸುತ್ತಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X