ಚುನಾವಣಾ ಅಕ್ರಮ ಆಳಂದಕ್ಕೆ ಮಾತ್ರವಲ್ಲ, ದೇಶಕ್ಕೆ ವ್ಯಾಪಿಸಿದ ಅಕ್ರಮ ಜಾಲ: ಸಿಎಂ ಸಿದ್ದರಾಮಯ್ಯ

Date:

ಕಲಬುರಗಿ ಜಿಲ್ಲೆಯ ಆಳಂದ ಮತಕ್ಷೇತ್ರದ ಪ್ರಕರಣವು ಕೇವಲ ಈ ಒಂದು ಕ್ಷೇತ್ರಕ್ಕೆ ಸೀಮಿತವಾದುದ್ದಲ್ಲ, ಇದು ದೇಶಾದ್ಯಂತ ವ್ಯಾಪಿಸಿರುವ ಬೃಹತ್‌ ಚುನಾವಣಾ ಅಕ್ರಮ ಜಾಲದ ಒಂದು ಕೊಂಡಿಯಷ್ಟೇ. ಇದೇ ಮಾದರಿಯಲ್ಲಿ ಇಡೀ ದೇಶದಲ್ಲಿ ಚುನಾವಣಾ ಪ್ರಕ್ರಿಯೆಯ ದುರುಪಯೋಗದ ಮೂಲಕ ಭಾರತೀಯರನ್ನು ಅವರ ಮತದಾನದ ಹಕ್ಕಿನಿಂದ ವಂಚಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಇಂದು ಬಯಲು ಮಾಡಿರುವ ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದ ಸತ್ಯಾಂಶಗಳು ಅತ್ಯಂತ ಆಘಾತಕಾರಿಯಾಗಿವೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೇಗೆ ಮತಗಳ್ಳತನದ ಮೂಲಕ ವ್ಯವಸ್ಥಿತವಾಗಿ ಬುಡಮೇಲುಗೊಳಿಸಲಾಗುತ್ತಿದೆ ಎಂಬ ಕರಾಳ ಸತ್ಯವನ್ನು ಮತ್ತೊಮ್ಮೆ ರಾಹುಲ್‌ ಗಾಂಧಿ ಅವರು ದೇಶದ ಜನರೆದುರು ತೆರೆದಿಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

2022ರ ಫೆಬ್ರವರಿಯಿಂದ 2023ರ ಫೆಬ್ರವರಿ ವರೆಗೆ ಆಳಂದ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಅಪ್ಲಿಕೇಷನ್‌ ಮೂಲಕ ಫಾರ್ಮ್‌ 7ರ ಅಡಿ ಮತದಾರರ ಹೆಸರುಗಳನ್ನು ಅಳಿಸಿಹಾಕುವಂತೆ ಒಟ್ಟು 6,018 ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಪೈಕಿ ಕೇವಲ 24 ಅರ್ಜಿಗಳು ಅಸಲಿಯಾಗಿದ್ದು, ಉಳಿದ 5,994 ಅರ್ಜಿಗಳು ನಕಲಿ ಎಂಬುದು ತನಿಖೆಯ ಮೂಲಕ ತಿಳಿದುಬಂದಿದೆ. ಮತದಾರರ ಮಾಹಿತಿ ಕಳವು, ನಕಲಿ ಲಾಗಿನ್‌ ಗಳು ಹಾಗೂ ಹೊರರಾಜ್ಯದ ಮೊಬೈಲ್‌ ಸಂಖ್ಯೆಗಳ ಮೂಲಕ ಬೇನಾಮಿ ಅರ್ಜಿಗಳ ಸಲ್ಲಿಕೆ ಮಾಡಲಾಗಿದೆ. ಕುಟುಂಬವೊಂದರ ಅರಿವಿಗೆ ಬಾರದೆಯೇ ಇಡೀ ಕುಟುಂಬದ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡುವಂತೆ ಅರ್ಜಿ ಸಲ್ಲಿಕೆಯಾಗಿತ್ತು. ಈ ಬಗ್ಗೆ ದೂರು ದಾಖಲಾಗಿದ್ದು, ಸಿಐಡಿ ತನಿಖೆ ನಡೆಸುತ್ತಿದೆ ಎಂದು ಸಿಎಂ ಹೇಳಿದ್ದಾರೆ.

ಈ ಪ್ರಕರಣದಲ್ಲಿ ಭಾಗಿಯಾದವರು ಯಾರು? ಮತ್ತು ಯಾವ ಸ್ಥಳದಿಂದ ಈ ಎಲ್ಲಾ ಕೃತ್ಯಗಳು ನಡೆದಿದ್ದವು? ಎಂದು ಪತ್ತೆಹಚ್ಚಲು ಟೆಕ್ನಿಕಲ್‌ ಮಾಹಿತಿಗಳಾದ ಐಪಿ ಅಡ್ರೆಸ್‌, ಬಳಕೆಯಾದ ಡಿವೈಸ್‌ ಗಳು ಮತ್ತು ಒಟಿಪಿ ಪಡೆದವರ ವಿವರಗಳನ್ನು ಕಳೆದ 18 ತಿಂಗಳಗಳಿಂದ ರಾಜ್ಯದ ಸಿಐಡಿ ತನಿಖಾ ಸಂಸ್ಥೆಯವರು ನಿರಂತರವಾಗಿ ಚುನಾವಣಾ ಆಯೋಗದ ಬಳಿ ಕೇಳುತ್ತಿದ್ದಾರೆ. ಆದರೆ ಚುನಾವಣಾ ಆಯೋಗವು ಈ ಮಾಹಿತಿಯನ್ನು ಒದಗಿಸಲು ನಿರಾಕರಿಸುತ್ತಾ ಬಂದಿದೆ. ಇಂದು ಚುನಾವಣಾ ಆಯೋಗವು ಈ ಬೇಡಿಕೆಗಳಿಗೆ ಸೂಕ್ತ ಮಾಹಿತಿಯನ್ನು ಒದಗಿಸಿ ಸ್ಪಂದಿಸುವ ಬದಲು ನಿರ್ದಿಷ್ಟ ಪ್ರಕ್ರಿಯೆಗೊಳಪಡದೆ ಮತದಾರರ ಪಟ್ಟಿಯಿಂದ ಹೆಸರನ್ನು ಕೈಬಿಡುವುದು ಅಸಾಧ್ಯವೆಂದು ಹೇಳಿ ಈ ಎಲ್ಲ ಆರೋಪಗಳನ್ನು “ಆಧಾರ ರಹಿತ ಮತ್ತು ಅಸತ್ಯ” ಎಂದು ತಳ್ಳಿಹಾಕಿದೆ. ಸಿಐಡಿ ಕಡೆಯಿಂದ 18 ನಿರಂತರ ಮನವಿಗಳ ಹೊರತಾಗಿಯೂ ಚುನಾವಣಾ ಆಯೋಗ ಡಿಜಿಟಲ್‌ ಸಾಕ್ಷ್ಯಗಳನ್ನು ನೀಡದಿರಲು ಕಾರಣವೇನು ಎಂಬ ಪ್ರಶ್ನೆ ಮಾತ್ರ ಪ್ರಶ್ನೆಯಾಗಿಯೇ ಉಳಿದಿದೆ ಎಂದರು.

ರಾಹುಲ್‌ ಗಾಂಧಿ ಅವರು ಮುಂದಿಟ್ಟಿರುವ ಸಾಕ್ಷ್ಯಗಳ ಆಧಾರದಲ್ಲಿ ನೋಡುವುದಾದರೆ ಇದು ಸ್ಥಳೀಯವಾಗಿ ನಡೆದ ಅಕ್ರಮವಲ್ಲ ಎಂಬುದಂತು ಸ್ಪಷ್ಟ. ಪ್ರತಿ ಬೂತ್‌ ನ ಮೊದಲ ಮತದಾರನ ಹೆಸರಲ್ಲಿ ಅರ್ಜಿ ಸಲ್ಲಿಕೆಯಾಗಿದೆ, ನಕಲಿ ಫೋನ್‌ ನಂಬರ್‌ಗಳು ಸೇರ್ಪಡೆಗೊಂಡಿವೆ ಮತ್ತು ಕಾಂಗ್ರೆಸ್‌ ಪ್ರಾಬಲ್ಯವಿರುವ ಬೂತ್‌ಗಳಲ್ಲಿಯೇ ಮತದಾರರ ಹೆಸರು ಡಿಲೀಟ್‌ ಮಾಡುವ ಪ್ರಕ್ರಿಯೆಯು ಕೇಂದ್ರೀಕೃತವಾಗಿ ನಡೆದಿದೆ. ಇದೇ ಮಾದರಿಯನ್ನು ಅನುಸರಿಸಿ ಮಹಾರಾಷ್ಟ್ರ, ಹರಿಯಾಣ, ಉತ್ತರ ಪ್ರದೇಶ ಹಾಗೂ ಇತ್ತೀಚೆಗೆ ಬೆಂಗಳೂರು ಸೆಂಟ್ರಲ್‌ ಕ್ಷೇತ್ರದ ಮಹದೇವಪುರ ಮತಕ್ಷೇತ್ರದಲ್ಲಿ ಕೂಡ ದೊಡ್ಡ ಪ್ರಮಾಣದಲ್ಲಿ ಅವ್ಯವಹಾರ ನಡೆಸಿರುವುದು ಬೆಳಕಿಗೆ ಬಂದಿದೆ ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಸ್ತೆ ಗುಂಡಿ ಮುಚ್ಚುವುದು ಸಚಿವ ಡಿ.ಕೆ. ಶಿವಕುಮಾರ್ ಕೆಲಸವೇ?

ಆಳಂದ ಮತಕ್ಷೇತ್ರ ದೊಡ್ಡ ಅಕ್ರಮದ ಸಣ್ಣ ಕುರುಹಿರಬಹುದೇ? 2018 ರಲ್ಲಿ ಇದೇ ಕ್ಷೇತ್ರದಲ್ಲಿ ಬಿಜೆಪಿ ಅತ್ಯಂತ ಅಲ್ಪ ಅಂತರದಲ್ಲಿ ಚುನಾವಣೆ ಜಯಿಸಿತ್ತು. 2023ರಲ್ಲಿ ಸುಮಾರು 6,000 ಹೆಸರನ್ನು ಅಳಿಸುವ ಪ್ರಯತ್ನ ನಡೆದಿತ್ತು. 2024ರಲ್ಲಿ ಬಿಜೆಪಿ ಮತ್ತದೇ ಪ್ರಯತ್ನಕ್ಕೆ ಕೈಹಾಕಿತ್ತು. ದೇಶಾದ್ಯಂತ ಇಂತಹ ಎಷ್ಟು ಅಕ್ರಮಗಳು ಗಮನಕ್ಕೆ ಬಾರದೆಯೇ ನಡೆದಿರಬಹುದು? ಎಷ್ಟು ಫಲಿತಾಂಶಗಳು ಇದರಿಂದ ಅದಲು ಬದಲಾಗಿರಬಹುದು? ಎಂಬ ಬಗ್ಗೆ ಕೂಡ ಪ್ರಶ್ನೆಗಳು ಸಹಜವಾಗಿ ಮೂಡುತ್ತಿದೆ. ಸತ್ಯ ಅತ್ಯಂತ ಕಟುವಾಗಿದೆ ಜೊತೆಗೆ ಸರಳವೂ ಆಗಿದೆ. ಬಿಜೆಪಿ ಮತಗಳ್ಳತನದ ಅಕ್ರಮ ಎಸಗುತ್ತದೆ, ಚುನಾವಣಾ ಆಯೋಗವು ಅಗತ್ಯ ಮಾಹಿತಿಯನ್ನು ಒದಗಿಸಲು ನಿರಾಕರಿಸುವ ಮೂಲಕ ತನಿಖೆಗೆ ತಡೆಯೊಡ್ಡುತ್ತದೆ. ದುರಂತವೆಂದರೆ ಪ್ರಜಾಪ್ರಭುತ್ವದ ರಕ್ಷಣೆ ಮಾಡಬೇಕಿದ್ದ ಚುನಾವಣಾ ಆಯೋಗವು ಮತಗಳ್ಳರ ರಕ್ಷಣೆಗೆ ನಿಂತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಅಗತ್ಯವಿರುವ ಐಪಿ ಅಡ್ರೆಸ್‌, ಬಳಕೆಯಾದ ಡಿವೈಸ್‌ ಗಳು ಹಾಗೂ ಒಟಿಪಿ ಪಡೆದವರ ವಿವರ ಮುಂತಾದ ಮಾಹಿತಿಯನ್ನು ಒಂದು ವಾರದ ಒಳಗಾಗಿ ಸಿಐಡಿ ತನಿಖಾ ಸಂಸ್ಥೆಗೆ ಒದಗಿಸಬೇಕು ಎಂದು ಚುನಾವಣಾ ಆಯೋಗವನ್ನು ಕರ್ನಾಟಕದ ಜನತೆಯ ಪರವಾಗಿ ಆಗ್ರಹಿಸುತ್ತೇನೆ. ಇದನ್ನು ಒದಗಿಸಲು ಚುನಾವಣಾ ಆಯೋಗವು ವಿಫಲವಾದಲ್ಲಿ, ಚುನಾವಣಾ ಅಕ್ರಮಗಳ ಮೂಲಕ ಪ್ರಜಾಪ್ರಭುತ್ವವನ್ನು ದ್ವಂಸಗೈಯ್ಯುತ್ತಿರುವ ದುಷ್ಟರ ರಕ್ಷಣೆಗೆ ಆಯೋಗ ನಿಂತಿದೆ ಎಂಬುದು ಸಾಬೀತಾಗುತ್ತದೆ ಎಂದರು.

ಇದು ನಾಡಿನ ಪ್ರತಿ ಮತದಾರನ, ಯುವ ಜನರ ಮತದಾನದ ಹಕ್ಕಿನ ಪಾವಿತ್ರ್ಯತೆ ಮತ್ತು ಭವಿಷ್ಯದ ಪ್ರಶ್ನೆ. ಮತಗಳ್ಳತನ ಯಶಸ್ವಿಯಾಗಲು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಪಕ್ಷ ಬಿಡುವುದಿಲ್ಲ. ಪಾರದರ್ಶಕ, ನಿಷ್ಪಕ್ಷಪಾತ ಚುನಾವಣೆ ಪ್ರಕ್ರಿಯೆಯ ಹೊಣೆಗಾರಿಕೆಯನ್ನು ಸಂಬಂಧಪಟ್ಟವರು ವಹಿಸಿಕೊಳ್ಳುವವರೆಗೆ ಮತ್ತು ದೇಶದ ಪ್ರಜಾಪ್ರಭುತ್ವಕ್ಕೆ ರಕ್ಷಣೆ ದೊರೆಯುವ ವರೆಗೆ ನಾವು ನಮ್ಮ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...