ದೇಶದ ಗಮನ ಸೆಳೆದಿದ್ದ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು (ಶನಿವಾರ) ಹೊರ ಬೀಳಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಆರಂಭಿಕ ಮತ ಎಣಿಕೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಹಾಗೂ ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಮುನ್ನಡೆ ಸಾಧಿಸಿವೆ.
ಮಹಾರಾಷ್ಟ್ರದ ಒಟ್ಟು 288 ಕ್ಷೇತ್ರಗಳ ಪೈಕಿ 183 ಸ್ಥಾನಗಳಲ್ಲಿ ಮಹಾಯುತಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ನೇತೃತ್ವದ (ಮಹಾವಿಕಾಸ್ ಅಘಾಡಿ) ಎಂವಿಎ ಕೇವಲ 83 ಕ್ಷೇತ್ರಗಳಲ್ಲಿ ಮಾತ್ರವೇ ಮುನ್ನಡೆಯಲ್ಲಿದೆ.
ಅಂತೆಯೇ, ಜಾರ್ಖಂಡ್‌ನಲ್ಲಿ ಒಟ್ಟು 81 ಕ್ಷೇತ್ರಗಳ ಪೈಕಿ ಇಂಡಿಯಾ ಮೈತ್ರಿಕೂಟ 41 ಸ್ಥಾನಗಳಲ್ಲಿ ಮುಂದಿದೆ. ಬಿಜೆಪಿ ನೇತೃತ್ವದ ಎನ್‌ಡಿಎ 39 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಜಾರ್ಖಂಡ್‌ನಲ್ಲಿ ಭಾರೀ ಪೈಪೋಟಿ ನಡೆಯುತ್ತಿದೆ. ಯಾರು ಸರ್ಕಾರ ರಚನೆ ಮಾಡಬಹುದು ಎಂಬುದನ್ನು ನಿರ್ಧರಿಸಲು ಸಾಧ್ಯವಿಲ್ಲ ಎಂಬ ರೀತಿಯಲ್ಲಿದೆ.
ಇನ್ನು, ಫಲಿತಾಂಶ ಪ್ರಕಟವಾಗುವುದಕ್ಕೂ ಮುನ್ನವೇ, ಮಹಾರಾಷ್ಟ್ರದ ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಗೆದ್ದಿದ್ದಾರೆ. ಅವರೇ ಭವಿಷ್ಯದ ಮುಖ್ಯಮಂತ್ರಿ ಎಂಬ ಬ್ಯಾನರ್‌ಗಳು, ಪೋಸ್ಟರ್‌ಗಳನ್ನು ಹಾಕಲಾಗಿದೆ.