ಚುನಾವಣೋತ್ತರ ಸಮೀಕ್ಷೆ | ಹರಿಯಾಣದಲ್ಲಿ ಬಿಜೆಪಿಯ ಹುಟ್ಟಡಗಿಸುತ್ತೆ ಕಾಂಗ್ರೆಸ್‌!

Date:

ಶನಿವಾರ, ಹರಿಯಾಣ ವಿಧಾನಸಭೆಗೆ ಮತದಾನ ನಡೆದಿದೆ. ಚುನಾವಣೋತ್ತರ ಸಮೀಕ್ಷೆಗಳ ಹೊರಬೀಳುತ್ತಿವೆ. ಹರಿಯಾಣದಲ್ಲಿ ಬಿಜೆಪಿಯ 10 ವರ್ಷದ ಆಡಳಿತಕ್ಕೆ ಅಲ್ಲಿನ ಮತದಾರರು ಅಂತ್ಯ ಹಾಡಿದ್ದು, ಕಾಂಗ್ರೆಸ್‌ ಭರ್ಜರಿ ಜಯ ಸಾಧಿಸಲಿದೆ ಎಂದು ಸಮೀಕ್ಷೆಗಳು ಹೇಳಿವೆ. ಅಂತೆಯೇ, ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಕಾಂಗ್ರೆಸ್‌ ಸರ್ಕಾರ ರಚಿಸಲಿದೆ ಎಂದೂ ಸಮೀಕ್ಷೆಗಳು ಹೇಳುತ್ತಿವೆ.

- Advertisement -

ಹರಿಯಾಣ ವಿಧಾಸಭೆಯಲ್ಲಿ 90 ಸ್ಥಾನಗಳಿದ್ದು, ಬಹುಮತಕ್ಕೆ 46 ಸ್ಥಾನಗಳ ಅಗತ್ಯವಿದೆ. ಚುನಾವಣೆಯಲ್ಲಿ ಕಾಂಗ್ರೆಸ್‌ ಸರಾಸರಿ 60 ಸ್ಥಾನಗಳನ್ನು ಗೆಲ್ಲಲಿದೆ. ಆಡಳಿತರೂಢ ಬಿಜೆಪಿ ಹೀನಾಯವಾಗಿ ಸೋಲುವ ಮೂಲಕ ಮುಖಭಂಗ ಅನುಭವಿಸಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪೀಪಲ್ಸ್ ಪಲ್ಸ್ ಸಮೀಕ್ಷೆಯ ಪ್ರಕಾರ, ಹರಿಯಾಣದಲ್ಲಿ ಬಿಜೆಪಿಗೆ 20-32 ಸ್ಥಾನಗಳು, ಕಾಂಗ್ರೆಸ್‌ಗೆ 49-61 ಸ್ಥಾನಗಳು ಹಾಗೂ ಇತರರು 3-5 ಸ್ಥಾನಗಳನ್ನು ಗೆಲ್ಲಬಹುದು ಎಂದು ಹೇಳಿದೆ.

ಧ್ರುವ್ ರಿಸರ್ಚ್ ಪ್ರಕಾರ, ಬಿಜೆಪಿ 22-32 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 50-62 ಸ್ಥಾನಗಳನ್ನು ಗೆಲ್ಲಲಿದೆ.

NDTV ಸಮೀಕ್ಷೆಯು ಬಿಜೆಪಿಗೆ 20-32, ಕಾಂಗ್ರೆಸ್‌ಗೆ 49-61 ಸ್ಥಾನಗಳು ಬರಲಿದೆ ಎಂದು ಹೇಳಿದೆ.

ದೈನಿಕ್ ಭಾಸ್ಕರ್ ಹೇಳುವಂತೆ, ಕಾಂಗ್ರೆಸ್‌ಗೆ 44-54 ಸ್ಥಾನಗಳು ಗೆಲ್ಲಲಿದೆ. ಬಿಜೆಪಿ 25ರಿಂದ 30 ಸ್ಥಾನಗಳನ್ನು ಪಡೆಯಲಿದೆ.

ಇನ್ನು ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಕಾಂಗ್ರೆಸ್‌ ಸರ್ಕಾರ ರಚಿಸಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್‌ ಮತ್ತು ನ್ಯಾಷನಲ್‌ ಕಾನ್ಫರೆನ್ಸ್‌ ಮೈತ್ರಿ ಮಾಡಿಕೊಂಡಿದ್ದು, ಉಭಯ ಪಕ್ಷಗಳು ಸರ್ಕಾರ ರಚಿಸಲಿವೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿಯೂ 90 ಸ್ಥಾನಗಳಿದ್ದು, ಅಲ್ಲಿಯೂ ಸರ್ಕಾರ ರಚನೆಗೆ ಕನಿಷ್ಠ 46 ಸ್ಥಾನಗಳ ಅಗತ್ಯವಿದೆ.

ದೈನಿಕ್‌ ಭಾಸ್ಕರ್‌ ಸಮೀಕ್ಷೆ ಪ್ರಕಾರ, ಬಿಜೆಪಿಗೆ 20-25 ಸ್ಥಾನಗಳನ್ನೂ, ಕಾಂಗ್ರೆಸ್‌ ಮೈತ್ರಿಕೂಟಕ್ಕೆ 35-40 ಸ್ಥಾನಗಳು, ಪಿಡಿಪಿಗೆ 4-7 ಸ್ಥಾನಗಳು, ಇತರರಿಗೆ 12-16 ಸ್ಥಾನಗಳನ್ನು ಗೆಲ್ಲಲಿವೆ.

ಇಂಡಿಯಾ ಟುಡೆ – ಸಿ ವೋಟರ್‌ ಸಮೀಕ್ಷೆಯ ಹೇಳುವಂತೆ, ಬಿಜೆಪಿ27-32 ಸ್ಥಾನಗಳು, ಕಾಂಗ್ರೆಸ್‌ ಮೈತ್ರಿಕೂಟವು 40-48 ಸ್ಥಾನಗಳಲ್ಲಿ ಜಯಗಳಿಸಲಿದೆ. ಪಿಡಿಪಿ 6-12 ಹಾಗೂ 6-11 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ.

ಪೀಪಲ್ಸ್‌ ಪಲ್ಸ್‌ 23-27 ಸ್ಥಾನಗಳನ್ನು ಬಿಜೆಪಿಗೆ ಸಮೀಕ್ಷೆಯಲ್ಲಿ ನೀಡಿದೆ. ಕಾಂಗ್ರೆಸ್‌ ಮೈತ್ರಿಗೆ 46-50 ಸ್ಥಾನಗಳು ಹಾಗೂ ಪಿಡಿಪಿ 7-11, ಇತರರು 4-6 ಸ್ಥಾನಗಳು ಗೆಲ್ಲುವ ಸಾಧ್ಯತೆಯಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...