ಚುನಾವಣೆ ಅಗ್ನಿಪರೀಕ್ಷೆ ನಿಜ, ಹಾಗಂತ ಬಗ್ಗಲು ನನ್ನಿಂದ ಸಾಧ್ಯವಿಲ್ಲ: ಕುಮಾರಸ್ವಾಮಿ ನೇರ ಮಾತು

Date:

Advertisements

ಚನ್ನಪಟ್ಟಣ ಟಿಕೆಟ್ ವಿಷಯಕ್ಕೆ ನೆಲದವರೆಗೂ ಬಗ್ಗಿದ್ದೇನೆ. ಇನ್ನೂ ಬಗ್ಗಿ ಎಂದರೆ ಎಲ್ಲಿಗೆ ಬಗ್ಗಲಿ. ನನ್ನ ತಾಳ್ಮೆ, ಸಹನೆಗೂ ಮಿತಿ ಇದೆ. ಅಭ್ಯರ್ಥಿ ವಿಷಯದಲ್ಲಿ ಕಾರ್ಯಕರ್ತರ ಭಾವನೆಗಳಿಗೆ ವಿರುದ್ಧವಾಗಿ ನಿರ್ಧಾರ ಕೈಗೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಕಾರ್ಯಕರ್ತರು ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ನನ್ನಷ್ಟು ಉಪ ಚುನಾವಣೆಗಳನ್ನು ಎದುರಿಸಿದ, ಯಶಸ್ವಿಯಾಗಿ ನಿಭಾಯಿಸಿದ ವ್ಯಕ್ತಿ ಇನ್ನೊಬ್ಬರಿಲ್ಲ. ಎಂತೆಂತಹ ಚುನಾವಣೆಗಳನ್ನು, ಅಗ್ನಿಪರೀಕ್ಷೆಗಳನ್ನು ಎದುರಿಸಿದ್ದೇನೆ. ಚನ್ನಪಟ್ಟಣ ಚುನಾವಣೆ ಎದುರಿಸುವುದಕ್ಕೆ ನನಗೆ ಭಯವೇ? ಸಾಧ್ಯವೇ ಇಲ್ಲ” ಎಂದು ಗುಡುಗಿದರು.

“ನಿಮ್ಮಂತ ಕಾರ್ಯಕರ್ತರು ಜೊತೆಯಲ್ಲಿ ಇರಬೇಕಾದರೆ ನಾವು ಹೆದುರುತ್ತೇವೆಯೇ? ನೆಲದವರಿಗೆ ಬಗ್ಗಿದ್ದೇನೆ, ಜೆಡಿಎಸ್ ಮುಗಿಸಲು ಅನೇಕರು ನಮ್ಮಿಂದಲೇ ಬೆಳೆದವರು ಹೇಗೆಲ್ಲಾ ಮಾತಾಡಿದ್ದಾರೆ. ನಾನು ಬಗ್ಗಿರುವುದು ಅಧಿಕಾರಕ್ಕಾಗಿ ಅಲ್ಲಾ. ವೈಯಕ್ತಿಕವಾಗಿ ನಾನು ಮಾಡದಿರುವ ತಪ್ಪಿಗೆ ತಲೆಕೊಟ್ಟಿದ್ದೇನೆ. ಈ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಮೂಲೋತ್ಪಾಟನೆ ಮಾಡಬೇಕು ಎನ್ನುವ ಪ್ರಧಾನಿ ಮೋದಿ ಸಂಕಲ್ಪಕ್ಕೆ ಹೆಗಲಾಗಿ ನಿಂತಿದ್ದೇನೆ” ಎಂದು ಹೇಳಿದರು.

Advertisements

ಜೆಡಿಎಸ್‌ನಿಂದಲೇ ಟಿಕೆಟ್ ಕೊಡಿ ಎಂದಿದ್ದರು ನಡ್ಡಾ

“ನವದೆಹಲಿಯಲ್ಲಿ ಭೇಟಿಯಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಅವರಿಗೆ (ಯೋಗೇಶ್ವರ್) ರಾಜೀನಾಮೆ ಕೊಟ್ಟು ಜೆಡಿಎಸ್ ನಿಂದ ಚುನಾವಣೆಗೆ ನಿಲ್ಲುವುದಕ್ಕೆ ಹೇಳುತ್ತೇವೆ ಎಂದು ಹೇಳಿದ್ದರು. ನಾನು ಈ ಸಂಬಂಧ ಉಳಿಯಬೇಕು, ಒಂದು ಸ್ಥಾನ ಮುಖ್ಯವಲ್ಲ, ಎನ್‌ಡಿಎ ಮೈತ್ರಿ ಗೆಲ್ಲಬೇಕು ಎಂದು ಹೇಳುತ್ತಲೇ ಇದ್ದೇನೆ. ಮೋದಿ, ಅಮಿತ್ ಶಾ, ನಡ್ಡಾ ಅವರಂತಹ ನಾಯಕರ ಜತೆ ಸಂಬಂಧ ಮಾಡಿಕೊಳ್ಳಬೇಕಾ?” ಎಂದು ಕಿಡಿಕಾರಿದರು.

“ಕಾರ್ಯಕರ್ತರ ಭಾವನೆಗಳಿಗೆ ಧಕ್ಕೆ ಆಗದಂತೆ ನಿರ್ಧಾರ ಮಾಡುತ್ತೇನೆ. ನಿಮ್ಮ ಮಾತಿಗೆ ಗೌರವ ನೀಡುತ್ತೇನೆ. ಕಾರ್ಯಕರ್ತರು ಒಟ್ಟಾಗಿರಿ, ಯಾರಿಗೂ ತಲೆಬಾಗಬೇಕಿಲ್ಲ. ಗೌರವಕ್ಕೆ ತಲೆಬಾಗೊಣ,‌ ಇನ್ನು ಮೂರು ದಿನ‌ ಸಮಯ ಇದೆ. ನನ್ನ ಕಾರ್ಯಕರ್ತರ ಭಾವನೆಯೇ ಅಂತಿಮ. ಸಮಯ ಕೊಡಿ” ಎಂದು ಕುಮಾರಸ್ವಾಮಿ ಅವರು ಕಾರ್ಯಕರ್ತರನ್ನು ಮನವಿ ಮಾಡಿಕೊಂಡರು.

ಭಾಷಣ ಮೊಟಕುಗೊಳಿಸಿದ ಕುಮಾರಸ್ವಾಮಿ

“ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ಕೊಡಬೇಕು, ಯಾವುದೇ ಕಾರಣಕ್ಕೂ ಯೋಗೇಶ್ವರ್ ಅವರಿಗೆ ಕೊಡಬಾರದು” ಎಂದು ಚನ್ನಪಟ್ಟಣ ಕಾರ್ಯಕರ್ತರು ಗದ್ದಲ ಎಬ್ಬಿಸಿದರು. ನಿಖಿಲ್ ಕುಮಾರಸ್ವಾಮಿ ಅವರು ಭಾಷಣ ಮಾಡುವಾಗಲೂ ಪದೇ ಪದೆ ಅಡ್ಡಿಪಡಿಸಿ, ನಿಖಿಲ್ ಅವರ ಹೆಸರನ್ನು ಘೋಷಣೆ ಮಾಡುವಂತೆ ಒತ್ತಾಯಿಸಿದರು. ಕೊನೆಗೂ ಗದ್ದಲದಲ್ಲಿಯೇ ಕೇಂದ್ರ ಸಚಿವರು ಭಾಷಣ ಮೊಟಕು ಮಾಡಿದರು.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಶಾಸಕಾಂಗ ಪಕ್ಷದ ನಾಯಕರಾದ ಸಿ.ಬಿ.ಸುರೇಶ್ ಬಾಬು, ಮಾಜಿ ಸಚಿವರಾದ ಸಾ ರಾ ಮಹೇಶ್, ವೆಂಕಟರಾವ್ ನಾಡಗೌಡ, ಶಾಸಕ ಶರಣು ಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯ ಮಂಜೇಗೌಡ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಚನ್ನಪಟ್ಟಣ ತಾಲೂಕು ಅಧ್ಯಕ್ಷ ಜಯಮುತ್ತು, ಹಾಪಕಾಮ್ಸ್ ದೇವರಾಜು, ಹಿರಿಯ ಮುಖಂಡ ಪ್ರಸನ್ನ, ಜಯರಾಂ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X