ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಮುಂದೆ ಚುನಾವಣೆ ನಡೆಯಲ್ಲ: ಪತ್ರಕರ್ತ ಜಿ ಪಿ ಬಸವರಾಜು ಕಳವಳ

Date:

2024ರ ಲೋಕಸಭಾ ಚುನಾವಣೆ ಪ್ರಜಾಪ್ರಭುತ್ವದ ಅಳಿವು ಉಳಿವಿನ ಚುನಾವಣೆ. ಈ ಬಾರಿಯ ಚುನಾವಣೆಯಲ್ಲಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಮುಂದೆ ದೇಶದಲ್ಲಿ ಚುನಾವಣೆಗಳೇ ನಡೆಯುವುದಿಲ್ಲ ಎಂದು ಪತ್ರಕರ್ತ ಜಿ ಪಿ ಬಸವರಾಜು ಕಳವಳ ವ್ಯಕ್ತಪಡಿಸಿದರು.

ಚಾಮರಾಜನಗರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಡಾ.ಅಂಬೇಡ್ಕರ್ ಅವರ ಸಂವಿಧಾನವನ್ನು ಗಾಳಿಗೆ ತೂರುವ ಕೆಲಸ 10 ವರ್ಷಗಳಿಂದ ನಡೆಯುತ್ತಿದೆ. ಇ.ಡಿ, ಸಿಬಿಐ ಸ್ವಾಯತ್ತ ಸಂಸ್ಥೆಗಳಾಗಿ ಕೆಲಸ ಮಾಡುತ್ತಿಲ್ಲ. ಕೇಂದ್ರದ ವಿರುದ್ಧ ದನಿ ಎತ್ತಿದವರ ಮೇಲೆ ಆಯುಧವನ್ನಾಗಿ ಬಳಸಿಕೊಳ್ಳಲಾಗುತ್ತಿದೆ. ಒಕ್ಕೂಟ ವ್ಯವಸ್ಥೆಗೆ ದೊಡ್ಡ ಅಪಾಯ ಬಂದೊದಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

“ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಆರ್‌ಎಸ್‌ಎಸ್ ಸಿದ್ಧಾಂತವೇ ಬಿಜೆಪಿ ಸಿದ್ಧಾಂತ ಎಂದು ಹೇಳಿದ್ದಾರೆ. ಅಂದರೆ ವರ್ಣ ವ್ಯವಸ್ಥೆ, ಜಾತಿ ವ್ಯವಸ್ಥೆಯನ್ನು ಪ್ರಜಾಪ್ರಭುತ್ವ ವ್ಯವಸ್ಥೆಗೆ ಜೋಡಿಸಲಾಗುತ್ತಿದೆ” ಎಂದು ಬೇಸರ ಹೊರಹಾಕಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪ್ರಧಾನಿ ನರೇಂದ್ರಮೋದಿಯವರು ಒಂದು ಧರ್ಮದ ವಿರುದ್ಧ ಇನ್ನೊಂದು ಧರ್ಮದವರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಸೀತೆ, ಲಕ್ಷ್ಮಣ, ಹನುಮಂತನ ಜೊತೆ ಇದ್ದ ರಾಮನನ್ನು ಒಂಟಿ ಮಾಡಲಾಗಿದೆ. ಧರ್ಮವನ್ನು ಸ್ವಾರ್ಥಕ್ಕೆ, ರಾಜಕಾರಣಕ್ಕೆ ಬಳಸಿಕೊಳ್ಳುವುದು ನೀಚತನ. ಪ್ರಧಾನಿ ಸ್ಥಾನದಲ್ಲಿ ಯಾರೂ ಇಷ್ಟೊಂದು ಕೀಳುಮಟ್ಟಕ್ಕೆ ಇಳಿದಿರಲಿಲ್ಲ. ಈ ಲೋಕಸಭಾ ಚುನಾವಣೆಯಲ್ಲಿ ಯಾರೂ ಬಿಜೆಪಿಗೆ ಮತ ಹಾಕಬೇಡಿ” ಎಂದು ಜನಾಂದೋಲನಗಳ ಮಹಾಮೈತ್ರಿಯ ಸಂಘಟನಾ ಕಾರ್ಯದರ್ಶಿ ಉಗ್ರನರಸಿಂಹೇಗೌಡ ಹೇಳಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಜ್ವಲ್ ಪೆನ್‌ಡ್ರೈವ್ ವಿಚಾರದಲ್ಲಿ ಕುಮಾರಸ್ವಾಮಿ ಆಗಾಗ್ಗೆ ನಿಲುವು ಬದಲಿಸುತ್ತಿರುವುದೇಕೆ? ಡಿ ಕೆ ಶಿವಕುಮಾರ್

"ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ವಿಚಾರದಲ್ಲಿ ಕುಮಾರಸ್ವಾಮಿ ಆಗಾಗ್ಗೆ ನಿಲುವು ಬದಲಿಸುತ್ತಿರುವುದು...

ಲೈಂಗಿಕ ಹಗರಣ | ಪ್ರಜ್ವಲ್ ರೇವಣ್ಣಗೆ ಸಿಬಿಐನಿಂದ ಬ್ಲೂ ಕಾರ್ನರ್ ನೋಟಿಸ್ ಸಾಧ್ಯತೆ

ದೇಶದ ಅತ್ಯಂತ ದೊಡ್ಡ ಲೈಂಗಿಕ ಹಗರಣದಲ್ಲಿ ಭಾಗಿಯಾಗಿರುವ ಹಾಸನದ ಜೆಡಿಎಸ್‌ ಸಂಸದ...

ಪ್ರಜ್ವಲ್ ಪ್ರಕರಣದಿಂದ ದೇವೇಗೌಡರು ತುಂಬಾ ನೊಂದಿದ್ದಾರೆ: ಮೊದಲ ಬಾರಿಗೆ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ

ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಹಾಗೂ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ...