ಚುನಾವಣಾ ಬಾಂಡ್ | ಮೋದಿಯಿಂದ ‘ಸುಲಿಗೆ ದಂಧೆ’; ರಾಹುಲ್ ಗಾಂಧಿ ಕಿಡಿ

Date:

Advertisements

ಚುನಾವಣಾ ಬಾಂಡ್ ಮಾಹಿತಿ ಹೊರಬಿದ್ದ ಬಳಿಕ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಪ್ರಧಾನಿ ಮೋದಿ ‘ಸುಲಿಗೆ ದಂಧೆ’ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ. “ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಸರ್ಕಾರವನ್ನು ಬೀಳಿಸಲು ಈ ಹಣವನ್ನೇ ಬಳಸಲಾಗಿದೆ” ಎಂದು ದೂರಿದ್ದಾರೆ.

ಭಿವಾಂಡಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ “ಸಿಬಿಐ, ಇಡಿ, ಆದಾಯ ತೆರಿಗೆ ಇಲಾಖೆಯನ್ನು ಬಳಸಿಕೊಂಡು ಕೇಂದ್ರ ಸರ್ಕಾರವು ಕಾರ್ಪೋರೇಟ್ ದೈತ್ಯಗಳ ಮೇಲೆ ಒತ್ತಡವನ್ನು ಹೇರಿ ಹಣವನ್ನು ಸುಲಿಗೆ ಮಾಡುತ್ತಿದೆ” ಎಂದು ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.

“ಭಾರತದ ರಾಜಕೀಯ ಆರ್ಥಿಕತೆಯನ್ನು ಸ್ವಚ್ಛಗೊಳಿಸುವ ನಿಟ್ಟಿನಲ್ಲಿ ಒಂದು ಯೋಜನೆಯನ್ನು ವಿನ್ಯಾಸಗೊಳಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿಕೊಂಡಿದ್ದರು. ಅದುವೇ ಚುನಾವಣಾ ಬಾಂಡ್. ಈಗ ಇದು ಭಾರತದ ಅತೀ ದೊಡ್ಡ ಕಾರ್ಪೋರೇಟ್ ಕಂಪನಿಗಳಿಂದ ಹಣವನ್ನು ಸುಲಿಗೆ ಮಾಡಲು ಪ್ರಧಾನಿ ಮೋದಿಯ ಯೋಜನೆ ಎಂಬುವುದು ಸಾಬೀತಾಗಿದೆ” ಎಂದು ಕಾಂಗ್ರೆಸ್ ಮುಖಂಡ ದೂರಿದರು.

Advertisements

“ಭಾರತದಲ್ಲಿರುವ ದೊಡ್ಡ ದೊಡ್ಡ ಕಾಂಟ್ರಾಕ್ಟ್‌ಗಳನ್ನು ನಿಮಗೆ ನೀಡಬೇಕಾದರೆ ನಮ್ಮ ಪಕ್ಷಕ್ಕೆ ಹಣ ನೀಡಬೇಕು ಎಂದು ಕಾರ್ಪೊರೇಟ್ ಸಂಸ್ಥೆಗಳ ಮೇಲೆ ಒತ್ತಡ ಮತ್ತು ಬೆದರಿಕೆ ಹಾಕಿ ಈ ಚುನಾವಣಾ ಬಾಂಡ್ ಮೂಲಕ ಹಣ ಪಡೆಯಲಾಗಿದೆ” ಎಂದು ರಾಹುಲ್ ಆರೋಪಿಸಿದರು.

“ಈ ಹಿಂದೆ ಬಿಜೆಪಿಗೆ ದೇಣಿಗೆಯನ್ನು ನೀಡದ ಸಂಸ್ಥೆಗಳು ಇಡಿ ಅಥವಾ ಸಿಬಿಐ ದಾಳಿಯ ಬಳಿಕ ಚುನಾವಣಾ ಬಾಂಡ್ ಮೂಲಕ ಬಿಜೆಪಿಗೆ ದೇಣಿಗೆಯನ್ನು ನೀಡಿದೆ. ದೊಡ್ಡ ದೊಡ್ಡ ಗುತ್ತಿಗೆಗಳನ್ನು ಪಡೆದ ಬಳಿಕ ಬಿಜೆಪಿಗೆ ಹಣ ನೀಡಿರುವುದು ಕೂಡಾ ನಾವು ದಿನಾಂಕಗಳನ್ನು ಹೋಲಿಸಿದಾಗ ತಿಳಿದುಬರುತ್ತದೆ. ಶೆಲ್ ಕಂಪನಿಗಳ ಮೂಲಕ ಹಣ ನೀಡಲಾಗಿದೆ” ಎಂದು ಕಾಂಗ್ರೆಸ್ ಮುಖಂಡ ಹೇಳಿದರು.

ಚುನಾವಣಾ ಬಾಂಡ್ ಮಾಹಿತಿಯನ್ನು ನೀಡಲು ಅಧಿಕ ಸಮಯ ಕೋರಿದ ಎಸ್‌ಬಿಐ ಅನ್ನು ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡ ಬಳಿಕ ಬ್ಯಾಂಕ್ ಬಾಂಡ್‌ನ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಿದ್ದು, ಆಯೋಗ ಮಾಹಿತಿ ಬಿಡುಗಡೆ ಮಾಡಿದೆ. ಈ ಬಾಂಡ್ ಮೂಲಕ ಅಧಿಕ ದೇಣಿಗೆಯನ್ನು ಪಡೆದ ಪಕ್ಷ ಬಿಜೆಪಿ ಆಗಿದ್ದು, ಹಲವಾರು ಕಾರ್ಪೋರೇಟ್ ಕಂಪನಿಗಳು ಬಿಜೆಪಿಗೆ ದೇಣಿಗೆ ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X