ಚುನಾವಣಾ ಬಾಂಡ್ | ನಮ್ಮ ತೀರ್ಪನ್ನು ಮೂರನೇಯವರು ಹೇಗೆ ವ್ಯಾಖ್ಯಾನಿಸುತ್ತಾರೆ ಎಂಬುದರ ಬಗ್ಗೆ ನಾವು ತಲೆಕೆಡಿಸಿಕೊಳ್ಳಲ್ಲ: ಸುಪ್ರೀಂ ಕೋರ್ಟ್‌

Date:

Advertisements

ಚುನಾವಣಾ ಬಾಂಡ್‌ಗೆ ಕುರಿತಾದ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಬಹಿರಂಗಗೊಳಿಸುವಂತೆ ಎಸ್‌ಬಿಐಗೆ ಸುಪ್ರೀಂ ಕೋರ್ಟ್‌ ಸೋಮವಾರ ತಾಕೀತು ಮಾಡಿದೆ. ಅಲ್ಲದೆ, ಯೋಜನೆಯನ್ನು ರದ್ದುಗೊಳಿಸಲಾದ ತೀರ್ಪನ್ನು ವಿವಿಧ ವ್ಯಕ್ತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬ ಬಗ್ಗೆ ಕೇಂದ್ರ ಸರ್ಕಾರ ವ್ಯಕ್ತಪಡಿಸಿದ್ದ ಕಳವಳವನ್ನು ಸಹ ಸುಪ್ರೀಂ ಕೋರ್ಟ್‌ ಇದೇ ವೇಳೆ ತಳ್ಳಿಹಾಕಿದೆ.

ಚುನಾವಣಾ ಬಾಂಡ್‌ ಮೂಲಕ ಬಹಿರಂಗಪಡಿಸಲಾದ ಎಲ್ಲಾ ವಿವರಗಳನ್ನು ತಮ್ಮ ಕಾರ್ಯಸೂಚಿಗೆ ತಕ್ಕಂತೆ ತಿರುಚಲಾಗುತ್ತಿದ್ದು,  ಇದರಿಂದಾಗಿ ನ್ಯಾಯಾಲಯ ಮುಜುಗರಕ್ಕೊಳಗಾಗುತ್ತಿದೆ ಎಂದು ಕೇಂದ್ರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ವಾದಿಸಿದರು.

ಈ ವಾದವನ್ನು ತಳ್ಳಿಹಾಕಿದ ಸುಪ್ರೀಂ ಕೋರ್ಟ್‌ ಸಿಜೆಐ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ ಆರ್ ಗವಾಯಿ, ಜೆ ಬಿ ಪರ್ದಿವಾಲಾ ಹಾಗೂ ಮನೋಜ್ ಮಿಶ್ರಾ ಅವರಿದ್ದ ಐವರು ಸದಸ್ಯರ ಪೀಠ, ತನ್ನ ತೀರ್ಪುಗಳನ್ನು ಮೂರನೆಯವರು ಹೇಗೆ ವ್ಯಾಖ್ಯಾನಿಸುತ್ತಾರೆ ಎಂಬುದರ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ನ್ಯಾಯಾಲಯವು ಸ್ಪಷ್ಟಪಡಿಸಿತು.

Advertisements

“ಕಪ್ಪು ಹಣ ನಿಗ್ರಹಿಸುವುದು ಅಂತಿಮ ಗುರಿಯಾಗಿದ್ದು, ತೀರ್ಪನ್ನು ನ್ಯಾಯಾಲಯದ ಹೊರಗೆ ಹೇಗೆ ಬಳಸಿಕೊಳ್ಳಲಾಗುತ್ತದೆ ಎಂಬದರ ಬಗ್ಗೆ ಈ ನ್ಯಾಯಾಲಯಕ್ಕೆ ತಿಳಿದಿರಬೇಕಿತ್ತು. ಕಿರುಕುಳ ಎಂಬುದು ಕೇಂದ್ರ ಸರ್ಕಾರದ ಮಟ್ಟದಲ್ಲಿ ಅಲ್ಲ ಬದಲಿಗೆ ಬೇರೊಂದು ನೆಲೆಯಲ್ಲಿ ಆರಂಭವಾಗಿದೆ. ನ್ಯಾಯಾಲಯದ ಮುಂದೆ ಇದ್ದವರು ಪತ್ರಿಕಾ ಸಂದರ್ಶನಗಳನ್ನು ನೀಡಲು ಪ್ರಾರಂಭಿಸಿ, ಉದ್ದೇಶಪೂರ್ವಕವಾಗಿ ನ್ಯಾಯಾಲಯವನ್ನು ಮುಜುಗರಕ್ಕೀಡು ಮಾಡಿದರು. ಇದು ನ್ಯಾಯಸಮ್ಮತವಲ್ಲ” ಎಂದು ಕೇಂದ್ರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ವಾದಿಸಿದರು.

“ಮುಜುಗರ ಉಂಟುಮಾಡುವ ಉದ್ದೇಶದಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿಕೆಗಳ ಸುರಿಮಳೆ ನೀಡಲಾಗುತ್ತಿದೆ. ಮಾಹಿತಿ ತೆರೆದ ಬಯಲಾಗಿದ್ದು, ಜನ ತಮಗೆ ಬೇಕಾದಂತೆ ಅಂಕಿ ಅಂಶ ತಿರುಚಬಹುದು. ಅಂಕಿ-ಅಂಶಗಳ ಆಧಾರದ ಮೇಲೆ ಬೇಕಾದಂತೆ ಹೇಳಿಕೆ ನೀಡಲಾಗುತ್ತಿದೆ” ಎಂದು ತುಷಾರ್ ಮೆಹ್ತಾ ತಿಳಿಸಿದರು.

“ನ್ಯಾಯಮೂರ್ತಿಗಳಾಗಿ ನಾವು ಕಾನೂನು ಪರಿಪಾಲನೆಯನ್ನು ಮಾತ್ರವೇ ಪರಿಗಣಿಸುತ್ತೇವೆ, ಸಂವಿಧಾನದ ಪ್ರಕಾರ ಕೆಲಸ ಮಾಡುತ್ತೇವೆ. ರಾಜ್ಯಾಡಳಿತ ವ್ಯವಸ್ಥೆಯಲ್ಲಿ ಕಾನೂನು ಪರಿಪಾಲನೆಗಾಗಿ ಮಾತ್ರವೇ ನಮ್ಮ ನ್ಯಾಯಾಲಯವು ಕೆಲಸ ಮಾಡುತ್ತದೆ. ನ್ಯಾಯಮೂರ್ತಿಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಮಾತನಾಡಲಾಗುತ್ತದೆ. ಆದರೆ ಆ ಮಾತುಗಳನ್ನು ಸಹಿಸುವಷ್ಟು ನ್ಯಾಯಾಂಗದ ಭುಜಗಳು ವಿಶಾಲವಾಗಿವೆ. ತೀರ್ಪಿನ ಪ್ಯಾರಾ ಬಿ ಮತ್ತು ಸಿಯಲ್ಲಿ ನೀಡಲಾದ ನಿರ್ದೇಶನಗಳನ್ನು ಜಾರಿಗೊಳಿಸಲಾಗಿದೆಯೇ ಎಂಬುದನ್ನಷ್ಟೇ ತಾನು ಗಮನಿಸುತ್ತೇನೆ” ಎಂದು ನ್ಯಾಯಾಲಯ ತಿಳಿಸಿತು. ಆ ಮೂಲಕ ಕೇಂದ್ರ ಸರ್ಕಾರ ವ್ಯಕ್ತಪಡಿಸಿದ್ದ ಕಳವಳವನ್ನು ಸಹ ಸುಪ್ರೀಂ ಕೋರ್ಟ್‌ ತಳ್ಳಿಹಾಕಿದೆ.

ಬಾಂಡ್‌ಗಳಿಗೆ ಎಸ್‌ಬಿಐ ನೀಡಿದ್ದ ಆಲ್ಫಾ ನ್ಯೂಮರಿಕ್‌ ಸಂಖ್ಯೆಗಳ ವಿವರ ಸೇರಿದಂತೆ ಅವುಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿ ಬಹಿರಂಗಪಡಿಸುವಂತೆ ಇದೇ ವೇಳೆ ನ್ಯಾಯಾಲಯ ಎಸ್‌ಬಿಐಗೆ ತಾಕೀತು ಮಾಡಿತು.

ಬಾಂಡ್‌ಗಳನ್ನು ನಗದೀಕರಿಸಿಕೊಂಡ ಮತ್ತು ಅವುಗಳನ್ನು ಪಡೆದವರನ್ನು ಗುರುತಿಸಲು ಸಹಾಯವಾಗುವಂತೆ ಚುನಾವಣಾ ಬಾಂಡ್‌ ಸಂಖ್ಯೆಗಳನ್ನು ಬಹಿರಂಗಪಡಿಸದೆ ಇರುವ ಬಗ್ಗೆ ಮಾ. 15ರಂದು ನ್ಯಾಯಾಲಯ ಎಸ್‌ಬಿಐ ಪ್ರತಿಕ್ರಿಯೆ ಕೇಳಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X