ವಿದ್ಯುತ್‌ ಕಳ್ಳತನ ಪ್ರಕರಣ | ಅಚಾತುರ್ಯಕ್ಕೆ ನನ್ನ ವಿಷಾದವಿದೆ, ದಂಡ ಕಟ್ಟಲು ಸಿದ್ಧ: ಹೆಚ್‌ ಡಿ ಕುಮಾರಸ್ವಾಮಿ

Date:

ಮನೆಯ ದೀಪಾಲಂಕಾರಕ್ಕೆ ವಿದ್ಯುತ್ ಕಳ್ಳತನ ಆರೋಪ ಮಾಡಿರುವ ಬಗ್ಗೆ ಕಾಂಗ್ರೆಸ್ ವಿಡಿಯೋ ಟ್ವೀಟ್ ಮಾಡಿ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರ ವಿರುದ್ಧ ಆರೋಪಿಸಿದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಅವರು, “ದಂಡ ಕಟ್ಟಲು ಸಿದ್ಧ” ಎನ್ನುವ ಮೂಲಕ ಕಳ್ಳತನ ನಡೆದಿರುವುದನ್ನು ಒಪ್ಪಿಕೊಂಡಿದ್ದಾರೆ.

- Advertisement -

“ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ” ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಆರೋಪಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಕುರಿತು ಪ್ರತಿಕ್ರಿಯಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ ಡಿ ಕುಮಾರಸ್ವಾಮಿ, “ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ. ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

‘ಇದನ್ನು ಕಾಂಗ್ರೆಸ್‌ನವರು ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ. ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ’ ಎಂದು ಮಾಜಿ ಸಿಎಂ ತಿಳಿಸಿದ್ದಾರೆ.

ಸರ್ಕಾರದ ಗೃಹ ಜ್ಯೋತಿ ಗ್ಯಾರಂಟಿಯ ಬಗ್ಗೆ ‘ಕತ್ತಲೆ ಭಾಗ್ಯ’ ಎನ್ನುವ ಮೂಲಕ ಕುಮಾರಸ್ವಾಮಿ ಟೀಕಿಸಿದ್ದ ಬೆನ್ನಲ್ಲೇ, ಈ ರೀತಿಯ ಬೆಳವಣಿಗೆ ನಡೆದಿರುವುದು ಮುಜುಗರ ಸೃಷ್ಟಿಸಿದೆ.

ಕಾಂಗ್ರೆಸ್ ಟೀಕಾ ಪ್ರಹಾರವೇನು?

“ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ” ಎಂದು ಕಾಂಗ್ರೆಸ್ ಟೀಕಿಸಿತ್ತು. 

“ಕುಮಾರಸ್ವಾಮಿಯವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ! ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ, ಒಹ್, ತಿಳಿದಿರಲಿಲ್ಲ ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದೇ ಮೀಟರ್ ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್ ಗಳಿವೆಯಲ್ಲವೇ!” ಎಂದು ಆರೋಪಿಸಿತ್ತು.

“ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಖವಾಗಿ ಮಾತನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು ʼಬರʼ ಎದುರಿಸುತ್ತಿದ್ದೀರಾ?” ಎಂದು ಪ್ರಶ್ನಿಸಿತ್ತು.

“ಅದೇನೋ ಪತ್ರಿಕಾಗೋಷ್ಠಿ ನಡೆಸಿ ʼಕರ್ನಾಟಕ ಕತ್ತಲಲ್ಲಿದೆʼ ಎನ್ನುತ್ತಾ ಬಡಬಡಿಸಿದ್ದಿರಲ್ಲವೇ, ಈಗ ಕದ್ದ ವಿದ್ಯುತ್ತಿನಲ್ಲಿ ನಿಮ್ಮ ಮನೆಗೆ ಬೆಳಕು ಮಾಡಿಕೊಂಡಿದ್ದೀರಿ, ನಿಮ್ಮ ಮನೆ ಹೀಗೆ ಜಗಮಗ ಹೊಳೆಯುತ್ತಿರುವಾಗ ಅದ್ಯಾವ ಬಾಯಲ್ಲಿ ಕರ್ನಾಟಕ ಕತ್ತಲಲ್ಲಿದೆ ಎನ್ನುವಿರಿ ಸ್ವಾಮಿ?! ನಿಮ್ಮದೇ ಶೈಲಿಯ ಪ್ರಶ್ನೆ ಕೇಳಬೇಕೆಂದರೆ, ರಾಜ್ಯ ಬರ ಎದುರಿಸುತ್ತಿರುವಾಗ ನಿಮ್ಮ ಮನೆ ಮಾತ್ರ ಜಗಮಗಿಸಬೇಕೆ?” ಎಂದು ಕೇಳಿತ್ತು.

“ರೈತರ ಪಾಲಿನ ವಿದ್ಯುತ್ ಕಳ್ಳತನ ಮಾಡಿ ಮೋಜು ಮಾಡಬೇಕೆ? ನಿಮ್ಮ ಮನೆಯ ದೀಪಾವಳಿಗೆ ರಾಜ್ಯದ ಜನರ ʼದಿವಾಳಿʼಯನ್ನು ಬಯಸುತ್ತಿದ್ದೀರಾ? ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು?” ಎಂದು ವಿಡಿಯೋ ಹಂಚಿಕೊಂಡು ಆರೋಪಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...