ಗಾಝಾ ಮೇಲೆ ಇಸ್ರೇಲ್ ಬಾಂಬ್ ದಾಳಿ: ವಿಶ್ವಸಂಸ್ಥೆಯ 11 ಸಿಬ್ಬಂದಿ ಬಲಿ

Date:

Advertisements

ಇಸ್ರೇಲ್ ಮೇಲೆ ಕಳೆದ ಶನಿವಾರ ಹಮಸ್ ದಾಳಿಯನ್ನು ಪ್ರಾರಂಭಿಸಿದಾಗಿನಿಂದ ಗಾಝಾ ಮೇಲೆ ನಿರಂತರವಾಗಿ ಇಸ್ರೇಲ್ ಬಾಂಬ್ ಸುರಿಯುತ್ತಿರುವುದರಿಂದ ವಿಶ್ವಸಂಸ್ಥೆಯ 11 ಸಿಬ್ಬಂದಿ ಬಲಿಯಾಗಿರುವುದಾಗಿ ‘ರಾಯಿಟರ್ಸ್‌’ ಸುದ್ದಿ ಸಂಸ್ಥೆ ವರದಿ ಮಾಡಿದೆ.

‘ಕನಿಷ್ಠ 11 ಸಿಬ್ಬಂದಿ ಮತ್ತು ವಿಶ್ವಸಂಸ್ಥೆ ನಡೆಸುತ್ತಿದ್ದ ಶಾಲೆಗಳ ಮೇಲೂ ಇಸ್ರೇಲ್ ಬಾಂಬ್ ಸುರಿದ ಪರಿಣಾಮ 30 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ’ ಎಂದು ವಿಶ್ವಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.

‘ಹಮಸ್ ದಾಳಿಯ ಬಳಿಕ ಇಸ್ರೇಲ್ ಗಾಝಾದ ಮೇಲೆ ನಿರಂತರವಾಗಿ ಬಾಂಬ್ ಸುರಿಸುತ್ತಿದೆ. ಕಳೆದ ಶನಿವಾರದಿಂದ ಯುಎನ್‌ಡಬ್ಲ್ಯೂಆರ್‌ಎಯ 11 ಮಂದಿ ಮೃತಪಟ್ಟಿದ್ದಾರೆ. ಅವರೆಲ್ಲರೂ ಪ್ಯಾಲೆಸ್ತೀನಿನ ನಿರಾಶ್ರಿತರಿಗಾಗಿ ಸೇವೆ ಸಲ್ಲಿಸುತ್ತಿದ್ದರು. ವಿಶ್ವಸಂಸ್ಥೆಯ ಶಾಲೆಯಲ್ಲಿ ಕಲಿಯುತ್ತಿದ್ದ 30 ವಿದ್ಯಾರ್ಥಿಗಳು ಮೃತಪಟ್ಟರೆ, ಎಂಟು ಮಂದಿ ಗಾಯಗೊಂಡಿದ್ದಾರೆ” ಎಂದು ಯುಎನ್ ವಕ್ತಾರ ಸ್ಟೀಫನ್ ಡುಜಾರಿಕ್ ತಿಳಿಸಿದರು.

Advertisements

ಮೃತಪಟ್ಟ 11 ಮಂದಿ ವಿಶ್ವಸಂಸ್ಥೆಯ ಸಿಬ್ಬಂದಿಗಳ ಪೈಕಿ ಐವರು ಶಿಕ್ಷಕರು, ಸ್ತ್ರೀರೋಗ ತಜ್ಞರು, ಎಂಜಿನಿಯರ್, ಸಲಹೆಗಾರರು ಮತ್ತು ಮೂವರು ಸಹಾಯಕ ಸಿಬ್ಬಂದಿ ಸೇರಿದ್ದಾರೆ ಎಂದು ಯುಎನ್‌ಆರ್‌ಡಬ್ಲ್ಯುಎಯ ಉಪ ನಿರ್ದೇಶಕಿ ಜೆನ್ನಿಫರ್ ಆಸ್ಟಿನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಜನರ ಸೇವೆ ಮಾಡುತ್ತಿದ್ದ ವಿಶ್ವಸಂಸ್ಥೆಯ ಸಿಬ್ಬಂದಿಯನ್ನು ಕಳೆದುಕೊಂಡಿರುವುದು ನಮ್ಮನ್ನು ತುಂಬಾ ದುಃಖಕ್ಕೀಡು ಮಾಡಿದೆ. ಸಿಬ್ಬಂದಿಗಳ ಕುಟುಂಬದೊಂದಿಗೆ ನಾವು ನಿಲ್ಲುತ್ತೇವೆ. ಇಸ್ರೇಲ್ ಜನವಸತಿ ಇರುವ ಸ್ಥಳಗಳಲ್ಲಿ ಬಾಂಬ್ ಹಾಕುವುದನ್ನು ನಿಲ್ಲಿಸಬೇಕು. ವಿಶ್ವಸಂಸ್ಥೆ ಈ ಬಗ್ಗೆ ತುರ್ತು ಗಮನ ನೀಡಬೇಕು” ಎಂದು ತಿಳಿಸಿದ್ದಾರೆ.

ಹಮಸ್ ಅನ್ನು ಗುರಿಯಾಗಿರಿಸಿಕೊಂಡು ಇಸ್ರೇಲ್ ನಿರಂತರವಾಗಿ ವೈಮಾನಿಕ ದಾಳಿ ನಡೆಸುತ್ತಿದೆ. ಈವರೆಗೆ ಸಾವಿರಕ್ಕೂ ಅಧಿಕ ಪ್ಯಾಲೆಸ್ತೀನ್ ನಾಗರಿಕರು ಬಲಿಯಾಗಿದ್ದು, 2500 ಸಾವಿರಕ್ಕೂ ಮಂದಿ ಗಾಯಾಳುಗಳಾಗಿದ್ದಾರೆ. ಸುಮಾರು 2,50,000 ಕ್ಕೂ ಹೆಚ್ಚು ಜನರು ತಮ್ಮ ಮನೆಗಳನ್ನು ತೊರೆದಿದ್ದು, ನಿರಾಶ್ರಿತರೆಲ್ಲರೂ ವಿಶ್ವಸಂಸ್ಥೆಯ ಏಜೆನ್ಸಿ ನಡೆಸುತ್ತಿರುವ ಶಾಲೆಗಳಲ್ಲಿ ಕಿಕ್ಕಿರಿದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X