ರಾಜ್ಯದಲ್ಲಿ ‘ಸ್ಪೋರ್ಟ್ಸ್‌ ಸಿಟಿ’ ನಿರ್ಮಾಣಕ್ಕೆ ಒತ್ತು: ಗೃಹ ಸಚಿವ ಡಾ.‌ ಜಿ ಪರಮೇಶ್ವರ್

Date:

Advertisements

ರಾಜ್ಯದಲ್ಲಿ ಕ್ರೀಡೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಎಪ್ಪತ್ತು ಎಕರೆ ವ್ಯಾಪ್ತಿಯ ‘ಸ್ಪೋರ್ಟ್ಸ್ ಸಿಟಿ’ ನಿರ್ಮಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇದ್ದು, ಮುಂಬರುವ ದಿನಗಳಲ್ಲಿ ಕಾರ್ಯಗತಗೊಳಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆಯ 2023ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

“ರಾಜ್ಯದ ಯುವಕರು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಬೇಕು. ಈ ನಿಟ್ಟಿನಲ್ಲಿ ಯುವಕರಿಗೆ ಕ್ರೀಡೆಯನ್ನು ಉತ್ತೇಜಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಂಕಲ್ಪ ತೊಟ್ಟು ಶ್ರಮದಿಂದ ಕ್ರೀಡಾ ಅಭ್ಯಾಸ ನಡೆಸಿ, ರಾಜ್ಯಕ್ಕೆ ಮತ್ತು ದೇಶಕ್ಕೆ ಕೀರ್ತಿ ತಂದು ಕೊಡಬೇಕು. ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ” ಎಂದು ತಿಳಿಸಿದರು.

Advertisements

“ಆಸ್ಟ್ರೇಲಿಯಾ, ಅಮೆರಿಕ, ಚೀನಾ ದೇಶಗಳಲ್ಲಿ ಕ್ರೀಡಾ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲಿ ಕ್ರೀಡಾ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದರೆ, ಯುವಕರಿಗೆ ಅನುಕೂಲವಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುವುದು” ಎಂದರು.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಂಪೇಗೌಡ ವಿಮಾನನಿಲ್ದಾಣ ಸೀಮೆ- ರೈತರ ಕೊರಳ ಬಿಗಿದಿರುವ ಭೂಮಾಫಿಯಾ, ಕುಣಿಕೆ ಕಳಚಲಿ ಕಾಂಗ್ರೆಸ್ ಸರ್ಕಾರ

“ಸುಸಜ್ಜಿತವಾದ ಬಾಸ್ಕೆಟ್ ಬಾಲ್ ಕ್ರೀಡಾಂಗಣ ನಿರ್ಮಾಣಕ್ಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 5 ಎಕರೆ ಭೂಮಿಯನ್ನು ಮೀಸಲಿಡಲಾಗಿದೆ. ಅಲ್ಲದೇ, ರಾಜ್ಯದಲ್ಲಿ 15ಕ್ಕೂ ಹೆಚ್ಚು ಸಿಂಥೆಟಿಕ್ ಟ್ರ್ಯಾಕ್‌ಗಳನ್ನು ನಿರ್ಮಿಸಲಾಗಿದೆ. ತುಮಕೂರಿನಲ್ಲಿ 58 ಕೋಟಿ ರೂ. ಅನುದಾನದಲ್ಲಿ ಸುಸಜ್ಜಿತವಾದ ಕ್ರೀಡಾಂಗಣವನ್ನು ಸರ್ಕಾರ ನಿರ್ಮಿಸಿದೆ. ಕಂಠೀರವ ಸ್ಟೇಡಿಯಂಗಿಂತ ಸುಸಜ್ಜಿತವಾಗಿದೆ. ಸುಮಾರು 800 ಅಥ್ಲೆಟ್‌ಗಳು ಭಾಗವಹಿಸಬಹುದು. ಇದೇ ಮಾದರಿಯ ಕ್ರೀಡಾಂಗಣಗಳನ್ನು ಬೇರೆ ಜಿಲ್ಲೆಗಳಲ್ಲಿಯೂ ನಿರ್ಮಿಸಲಾಗುವುದು” ಎಂದು ಹೇಳಿದರು.

“ಯುವಕರನ್ನು ಕ್ರೀಡಾ ಕ್ಷೇತ್ರಕ್ಕೆ ಸೆಳೆಯಲು ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ. 3ರಷ್ಟು ಮೀಸಲಾತಿ‌ ಕಲ್ಪಿಸಲಾಗಿದೆ. ಇದನ್ನು ರಾಜ್ಯದ ಎಲ್ಲ ಇಲಾಖೆಗಳ ನೇಮಕಾತಿಗೆ ಅನ್ವಯಿಸಲಾಗುವುದು” ಎಂದರು.

ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್, ಕ್ರೀಡಾ ಮತ್ತು ಯುವಜನ ಸಬಲೀಕರಣ ಸಚಿವ ಬಿ.ನಾಗೇಂದ್ರ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ. ಗೋವಿಂದರಾಜು ಅವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X