ಡಚ್‌ ಕೈಗಾರಿಕೋದ್ಯಮಗಳ ಹೂಡಿಕೆಗೆ ಉತ್ತೇಜನ; ಸಿಎಂ ಭರವಸೆ

Date:

ಆರ್ಥಿಕತೆ ವೃದ್ಧಿಯಾಗಲು, ಪ್ರಗತಿ ಸಾಧಿಸಲು, ಆರ್ಥಿಕ ವಹಿವಾಟು ಆರೋಗ್ಯಕರವಾಗಿರಲು ಶಾಂತಿ ಮತ್ತು ಸುವ್ಯವಸ್ಥೆ ಅತೀ ಮುಖ್ಯ. ನಾವು ಕಾನೂನು ಸುವ್ಯವಸ್ಥೆ ಹದಗೆಡಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನೆದರ್‌ಲ್ಯಾಂಡ್‌ನ ಕಾನ್ಸುಲೇಟ್‌ ಜನರಲ್‌ ಎವೊಟ್‌ ಡಿ ವಿಟ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದೆ.

“ನೆದರ್‌ಲ್ಯಾಂಡ್‌ ದೇಶವು ರಾಜ್ಯದಲ್ಲಿ ಗಣನೀಯ ಪ್ರಮಾಣದಲ್ಲಿ ಹೂಡಿಕೆ ಮಾಡಿದ್ದು, ಒಟ್ಟಾರೆ ಹೂಡಿಕೆಯ ಶೇ.9 ರಷ್ಟಿದೆ. ಸುಸ್ಥಿರ ಇಂಧನ, ಇಲೆಕ್ಟ್ರಾನಿಕ್ಸ್‌, ಸೆಮಿಕಂಡಕ್ಟರ್‌ ಮೊದಲಾದ ಉದ್ಯಮಗಳಲ್ಲಿ ವಿಶೇಷವಾಗಿ ನಾವೀನ್ಯತಾ ವಲಯದಲ್ಲಿ ನೆದರ್‌ಲ್ಯಾಂಡ್‌ ವಿಶೇಷ ಆಸಕ್ತಿ ಹೊಂದಿದೆ” ಎಂದು ಎವೋಟ್ ಡಿ ವಿಟ್ ವಿವರಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಕರ್ನಾಟಕವು ಕೈಗಾರಿಕೋದ್ಯಮದಲ್ಲಿ ಮುಂಚೂಣಿಯ ರಾಜ್ಯವಾಗಿದೆ. ವಿಶೇಷವಾಗಿ ಐಟಿ, ಬಿಟಿ ವಲಯದಲ್ಲಿ ನಂ. 1 ಸ್ಥಾನದಲ್ಲಿದೆ. ಶಾಂತಿಯುತ ರಾಜ್ಯ ಹಾಗೂ ಕೌಶಲ್ಯಯುತ ಮಾನವ ಸಂಪನ್ಮೂಲ ಲಭ್ಯವಿರುವುದರಿಂದ ಹೂಡಿಕೆಗೆ ಅತ್ಯುತ್ತಮ ತಾಣವಾಗಿದೆ. ರಾಜ್ಯದಲ್ಲಿ ನೆದರ್‌ಲ್ಯಾಂಡ್‌ ಕಂಪೆನಿಗಳ ನೆಲೆಯನ್ನು ಉತ್ತೇಜಿಸಲು ಎಲ್ಲ ಸಹಕಾರ ನೀಡಲಾಗುವುದು” ಎಂದು ತಿಳಿಸಿದರು.

“ಸೆಪ್ಟೆಂಬರ್‌ನಲ್ಲಿ ನೆದರ್‌ಲ್ಯಾಂಡ್ ಪ್ರಧಾನಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಆ ಸಂದರ್ಭದಲ್ಲಿ ಬೆಂಗಳೂರಿಗೂ ಆಗಮಿಸಲಿದ್ದಾರೆ” ಎಂದು ಎವೋಟ್ ಡಿ ವಿಟ್ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಳೆ ನೀರು ಒಳಚರಂಡಿಗೆ ಹರಿಬಿಡುತ್ತಿರುವ ಜನರ ವಿರುದ್ಧ ಕ್ರಮ; ಜಲಮಂಡಳಿ ಅಧ್ಯಕ್ಷ

ಮಳೆ ನೀರು ಕೋಯ್ಲು ಪದ್ದತಿಯ ಅಳವಡಿಕೆಯ ಮೂಲಕ ಆ ನೀರಿನ ಸದ್ಬಳಕೆ...

ʼನಾವೆದ್ದು ನಿಲ್ಲದಿದ್ದರೆ- ಕರ್ನಾಟಕʼ ಸಂಘಟನೆಯಿಂದ ಹಾಸನ ಚಲೋಗೆ ಬೆಂಬಲ

‘ನಾವೆದ್ದು ನಿಲ್ಲದಿದ್ದರೆ’ ಎಂಬುದು ಮಹಿಳೆಯರಿಗೆ ಮತ್ತು ಮಾನವಹಕ್ಕುಗಳಿಗೆ ಸಂಬಂಧಪಟ್ಟ ಎಲ್ಲ ವಿಷಯಗಳ...

ಬೀದರ್‌ | ಹೋರಾಟದ ಚಿಂತನೆಯಿಲ್ಲದ ಸಾಹಿತ್ಯ ಉಳಿಯದು : ಗಂಧರ್ವ ಸೇನಾ

ಸಮತಾ ಸಂಸ್ಕ್ರತಿ ವೇದಿಕೆ ಸ್ಥಾಪಿಸಿ, ಅದರ ಮೂಲಕ ಬಡವರ, ನಿರ್ಗತಿಕರ ಬಾಳು...

ಮೋದಿ ಭಕ್ತರಿಗೆ ಶ್ರೇಯಸ್ ಅಯ್ಯರ್ ಬ್ಯಾಟಿನ ಏಟು; ವಿಶ್ವಕಪ್‌ನಲ್ಲಿ ಶ್ರೇಯಸ್ ಕೈಬಿಡಲು ಮೋದಿ ಕಾರಣವೇ?

ಬೆಟ್ಟಿಂಗ್‌ ದಂಧೆಗೂ ಹೆಸರಾಗಿರುವ, ಭಾರತದ ಕ್ರಿಕೆಟ್‌ ಪ್ರೇಮಿಗಳ ಹುಚ್ಚಿನ ಆಟ ಐಪಿಎಲ್‌-2024...