ಪ್ರತಿಪಕ್ಷಗಳ ದಮನದಿಂದ ಭಾರತದ ಸಮಸ್ಯೆಗಳು ಪರಿಹಾರವಾಗದು: ಸೋನಿಯಾ ಗಾಂಧಿ

Date:

Advertisements

ಕೇಂದ್ರ ಸರ್ಕಾರ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗವನ್ನು ವ್ಯವಸ್ಥಿತವಾಗಿ ಹಾನಿಗೊಳಿಸುತ್ತಿದೆ. ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ನ್ಯಾಯಾಂಗ ದುರ್ಬಲಗೊಳಿಸಿದೆ ಮತ್ತು ಮಾಧ್ಯಮಗಳನ್ನು ಹಿಡಿತದಲ್ಲಿಟ್ಟುಕೊಂಡಿದೆ ಎಂದು ಸೋನಿಯಾ ಗಾಂಧಿ ಟೀಕಿಸಿದ್ದಾರೆ.

ಭಾರತದ ಪ್ರಜಾಪ್ರಭುತ್ವದ ಎಲ್ಲಾ ಮೂರು ಸ್ತಂಭಗಳನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ದಮನಿಸುತ್ತಿದೆ ಎಂದು ಸೋನಿಯಾ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

ʻದಿ ಹಿಂದೂʼ ಪತ್ರಿಕೆಯಲ್ಲಿ ಮಂಗಳವಾರ ಪ್ರಕಟವಾಗಿರುವ ಸಂಪಾದಕೀಯ ಪುಟದ ಬರಹದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

Advertisements

“ಕೇಂದ್ರ ಸರ್ಕಾರವು ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗವನ್ನು ವ್ಯವಸ್ಥಿತವಾಗಿ ಹಾನಿಗೊಳಿಸುತ್ತಿದೆ. ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ನ್ಯಾಯಾಂಗವನ್ನು ದುರ್ಬಲಗೊಳಿಸಿದ್ದಾರೆ ಮತ್ತು ಮಾಧ್ಯಮಗಳನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡಿದ್ದಾರೆ” ಎಂದು ಸೋನಿಯಾ ಗಾಂಧಿ ಟೀಕಿಸಿದ್ದಾರೆ.

“ಮೌನ ಹೇರಿಕೆಯ ಮೂಲಕ ಭಾರತದ ಸಮಸ್ಯೆಗಳಿಗೆ ಪರಿಹಾರ ಸಾಧ್ಯವಿಲ್ಲ” ಎಂಬ ಶೀರ್ಷಿಕೆಯಡಿ ಸೋನಿಯಾ ಬರೆದಿರುವ ಲೇಖನದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಆಳವಾದ ತಿರಸ್ಕಾರ ಭಾವನೆಯಿದೆ ಎಂದು ಆರೋಪಿಸಿದ್ದಾರೆ.

“ನಿರುದ್ಯೋಗ, ಹಣದುಬ್ಬರ ಮತ್ತು ಸಾಮಾಜಿಕ ವಿಭಜನೆಗಳಂತಹ ಗಂಭೀರ ಸಮಸ್ಯೆ, ಬಜೆಟ್‌ ಮೇಲಿನ ಚರ್ಚೆ ಹಾಗೂ ಅದಾನಿ ಹಗರಣಗಳನ್ನು ಪ್ರತಿಪಕ್ಷಗಳು ಅಧಿವೇಶನದ ವೇಳೆ ಸಂಸತ್ತಿನಲ್ಲಿ ಪ್ರಸ್ತಾಪಿಸುವುದನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ತಡೆಯುತ್ತಿದೆ” ಎಂದು ಸೋನಿಯಾ ಹೇಳಿದ್ದಾರೆ.

2023ರ ಕೇಂದ್ರ ಬಜೆಟ್ ಅನ್ನು ಅಂಗೀಕರಿಸಲು ಆಡಳಿತ ಪರ ಸಂಸದರು ಗದ್ದಲದ ನಾಟಕವಾಡಿದರು. ಇದರ ಪರಿಣಾಮವಾಗಿ ಸುಮಾರು ₹45 ಲಕ್ಷ ಕೋಟಿ ರೂಪಾಯಿ ಮೌಲ್ಯದ ಬಜೆಟ್ ಅನ್ನು ಯಾವುದೇ ಚರ್ಚೆಯಿಲ್ಲದೆ ಅಂಗೀಕರಿಸಲಾಯಿತು ಎಂದು ಸೋನಿಯಾ ಅವರು ಸಂಪಾದಕೀಯದಲ್ಲಿ ಬರೆದಿದ್ದಾರೆ.

ಸಂಸದ ಸ್ಥಾನದಿಂದ  ರಾಹುಲ್ ಗಾಂಧಿ ಅನರ್ಹತೆ ಮತ್ತು ರಾಹುಲ್‌ ಭಾಷಣದ ಆಯ್ದ ಭಾಗಗಳನ್ನು ಸಂಸತ್ತಿನ ದಾಖಲೆಗಳಿಂದ ತೆಗೆದುಹಾಕಲಾದ ಕ್ರಮವನ್ನು ಸೋನಿಯಾ ಪ್ರಶ್ನಿಸಿದ್ದಾರೆ.

ದೇಶದಲ್ಲಿ ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರ ಕುಮ್ಮಕ್ಕಿನಿಂದ ವ್ಯಾಪಕವಾಗಿ ಹೆಚ್ಚುತ್ತಿರುವ ದ್ವೇಷ ಮತ್ತು ಹಿಂಸಾಚಾರದ ಕುರಿತು ಪ್ರಧಾನಿ ನಿರ್ಲಕ್ಷ್ಯ ಭಾವನೆ ಹೊಂದಿದ್ದಾರೆ. ಒಮ್ಮೆಯೂ ಶಾಂತಿ ಮತ್ತು ಸೌಹಾರ್ದತೆಗಾಗಿ ಅವರು ಕರೆ ನೀಡಿಲ್ಲ. ಅಪರಾಧಿಗಳಿಗೆ ಶಿಕ್ಷೆಯಾಗಲು ಅವರು ಅವಕಾಶ ನೀಡಿಲ್ಲ ಎಂದು ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಸುದ್ದಿವಿವರ | ‘ಡಿಜಿಟಲ್ ಕೊಲೆ’ಗೆ ಹಕ್ಕು ನೀಡುವ ಏಕಪಕ್ಷೀಯ ಫ್ಯಾಕ್ಟ್‌ಚೆಕ್ ವಿಭಾಗ

ಜನಸಾಮಾನ್ಯರ ಸದ್ದಡಗಿಸಲು ಸಾಧ್ಯವಿಲ್ಲ

ಪ್ರಧಾನ ಮಂತ್ರಿಯವರ ನಿರಂತರ ಪ್ರಯತ್ನದ ಹೊರತಾಗಿಯೂ ಸಹ ಅನ್ಯಾಯದ ವಿರುದ್ಧದ ಜನಸಾಮಾನ್ಯರ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ. ಭಾರತದ ಪ್ರಜಾಪ್ರಭುತ್ವಕ್ಕೆ ಮುಂದಿನ ಕೆಲ ತಿಂಗಳು ಅತ್ಯಂತ ಮಹತ್ವದ್ದಾಗಿದೆ. ನಮ್ಮ ದೇಶವು ಕವಲು ದಾರಿಯಲ್ಲಿದೆ. ಪ್ರಧಾನಿ ಮೋದಿ ಸರ್ಕಾರ ಆಡಳಿತ ಯಂತ್ರವನ್ನು ದುರುಪಯೋಗಮಾಡುತ್ತಿದೆ. ಕೆಲ ರಾಜ್ಯಗಳಲ್ಲಿ ಚುನಾವಣೆಗಳು ಸಮೀಪಿಸುತ್ತಿದ್ದು, ಈ ಎಲ್ಲಾ ವಿಷಯಗಳನ್ನು ಕಾಂಗ್ರೆಸ್‌ ಪಕ್ಷವು ನೇರವಾಗಿ ಜನರ ಬಳಿಗೆ ಕೊಂಡೊಯ್ಯಲಿದೆ ಎಂದು ಸೋನಿಯಾ ಪ್ರಸ್ತಾಪಿಸಿದ್ದಾರೆ.

ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಮತ್ತು ಹಣದುಬ್ಬರ ಸಮಸ್ಯೆಗಳನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸದೇ ಇರುವುದಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸೋನಿಯಾ  ತರಾಟೆಗೆ ತೆಗೆದುಕೊಂಡಿದ್ದಾರೆ. “ನಿರ್ಮಲಾ ಅವರ ಭಾಷಣ ಕೇಳಿದರೆ ಈ ಸಮಸ್ಯೆಗಳು ಅಸ್ತಿತ್ವದಲ್ಲಿಲ್ಲ ಎಂದು ಭಾವಿಸಬೇಕು” ಎಂದು ಸೋನಿಯಾ ವ್ಯಂಗ್ಯವಾಡಿದ್ದಾರೆ.

ಲೋಕಸಭೆಯಲ್ಲಿ ಮಹತ್ವದ ಮಸೂದೆಗಳ ಮೇಲಿನ ಚರ್ಚೆ ನಡೆಯುತ್ತಿದ್ದ ವೇಳೆ ಪ್ರಧಾನಿ ಮೋದಿಯವರು ತಮ್ಮ ಕ್ಷೇತ್ರದಲ್ಲಿ ಹಲವು ಯೋಜನೆಗಳನ್ನು ಉದ್ಘಾಟಿಸುವುದರಲ್ಲಿ ನಿರತರಾಗಿದ್ದರು. ಇದಕ್ಕೆ ಮಾಧ್ಯಮಗಳಲ್ಲಿ ಭಾರಿ ಪ್ರಾಮುಖ್ಯತೆ ಸಿಗುವಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಟೀಕಿಸಿದ್ದಾರೆ. 

ಕೇಂದ್ರೀಯ ಏಜೆನ್ಸಿಗಳ ದುರ್ಬಳಕೆ

ಸರ್ಕಾರವು ಕೇಂದ್ರ ತನಿಖಾ ಸಂಸ್ಥೆಗಳನ್ನು ʻದುರುಪಯೋಗಪಡಿಸಿಕೊಳ್ಳುತ್ತಿದೆʼ ಎಂಬ ಪ್ರತಿಪಕ್ಷಗಳ ಆರೋಪವನ್ನು ಸೋನಿಯಾ ಗಾಂಧಿ ಮತ್ತೆ ಪುನರುಚ್ಚರಿಸಿದ್ದಾರೆ.  

95 ಪ್ರತಿಶತಕ್ಕೂ ಹೆಚ್ಚು ರಾಜಕೀಯ ಪ್ರೇರಿತ ಪ್ರಕರಣಗಳು ಪ್ರತಿಪಕ್ಷಗಳ ವಿರುದ್ಧ ಮಾತ್ರ ದಾಖಲಾಗಿವೆʼ ಎಂದು ಪ್ರಸ್ತಾಪಿಸಿರುವ ಹಿರಿಯ ನಾಯಕಿ, ಪ್ರಕರಣ ದಾಖಲಾದ ಪ್ರತಿಪಕ್ಷಗಳ ನಾಯಕರು ಬಿಜೆಪಿಗೆ ಸೇರಿದರೆ ಅವರ ವಿರುದ್ಧದ ಪ್ರಕರಣಗಳು ʻಮಾಯʼವಾಗಿ ಬಿಡುತ್ತದೆ ಎಂದು ಕುಟುಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X