ಪಶ್ಚಿಮ ಬಂಗಾಳ | ಇ ಡಿ ಅಧಿಕಾರಿಗಳ ಮೇಲೆ ಗುಂಪಿನಿಂದ ದಾಳಿ; ವಾಹನಗಳ ಮೇಲೆ ಕಲ್ಲು ತೂರಾಟ

Date:

Advertisements

ಜಾರಿ ನಿರ್ದೇಶನಾಲಯ(ED)ದ ಅಧಿಕಾರಿಗಳು ದಾಳಿ ನಡೆಸುತ್ತಿದ್ದ ವೇಳೆ ಅಧಿಕಾರಿಗಳು ಹಾಗೂ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ ನಾಯಕನನ್ನು ಬಂಧಿಸಲಾಗಿದೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ ಖಾಲಿಯಲ್ಲಿ ಶುಕ್ರವಾರ ಜಾರಿ ನಿರ್ದೇಶನಾಲಯದ ತಂಡ ದಾಳಿ ನಡೆಸಿದಾಗ, ಸುಮಾರು 200ಕ್ಕೂ ಹೆಚ್ಚು ಸ್ಥಳೀಯರು ಅಧಿಕಾರಿಗಳನ್ನು ಸುತ್ತುವರೆದು ಕಲ್ಲು ತೂರಾಟ ನಡೆಸಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಕೆಲವರಿಗೆ ಗಾಯಗಳಾಗಿರುವುದಾಗಿಯೂ ವರದಿಯಾಗಿದೆ.

ಘಟನೆಯ ವೇಳೆ ಕೇಂದ್ರ ಸಶಸ್ತ್ರ ಅರೆಸೇನಾ ಪಡೆಯ ಬೆರಳೆಣಿಕೆಯ ಸಿಬ್ಬಂದಿಗಳು ಇದ್ದುದ್ದರಿಂದ ಗುಂಪನ್ನು ಚದುರಿಸಲು ಸಾಧ್ಯವಾಗಿಲ್ಲ. ತೃಣಮೂಲ ನಾಯಕ ಷಾಜಹಾನ್ ಶೇಖ್ ಅವರ ನಿವಾಸವನ್ನು ಸಮೀಪಿಸುತ್ತಿದ್ದಂತೆ ತಂಡವು ದಾಳಿ ನಡೆಸಿದೆ. ಈ ಬೆಳವಣಿಗೆಯ ನಡುವೆಯೂ ಕೂಡ ಷಾಜಹಾನ್ ಶೇಖ್ ಅವರನ್ನು ಪ್ರಕರಣದಲ್ಲಿ ಬಂಧಿಸಲಾಯಿತು.

Advertisements

ಈ ದಾಳಿಯ ಬಗ್ಗೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ಸುಕಾಂತ ಮಜುಂದಾರ್, “ರೋಹಿಂಗ್ಯಾಗಳು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವ ರೀತಿಯಲ್ಲಿ ಗೌರವ ಕೊಡುತ್ತಿದ್ದಾರೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ” ಎಂದು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಪಶ್ಚಿಮ ಬಂಗಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯು ಹದಗೆಟ್ಟು ಹೋಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ಅವರು ಈ ಗಂಭೀರ ಪರಿಸ್ಥಿತಿಯನ್ನು ಅರಿತುಕೊಳ್ಳಬೇಕು. ರಾಜ್ಯದಲ್ಲಿ ಸೃಷ್ಟಿಯಾಗಿರುವ ಅರಾಜಕತೆಯನ್ನು ಹತ್ತಿಕ್ಕಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಈ ಬಗ್ಗೆ ರಾಷ್ಟ್ರೀಯ ತನಿಖಾ ತಂಡ(ಎನ್‌ಐಎ) ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

ಪಡಿತರ ವಿತರಣೆ ಹಗರಣ
ಪಡಿತರ ವಿತರಣೆಯಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೆಲವು ತಿಂಗಳುಗಳಿಂದ ಅಲ್ಲಲ್ಲಿ ದಾಳಿ ನಡೆಸುತ್ತಿದ್ದಾರೆ. ಫಲಾನುಭವಿಗಳಿಗೆ ನೀಡಲಾಗಿದ್ದ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಪಡಿತರದ ಸುಮಾರು 30 ಪ್ರತಿಶತವನ್ನು ಮುಕ್ತ ಮಾರುಕಟ್ಟೆಗೆ ರವಾನಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಈ ಹಿಂದೆ ಬಹಿರಂಗಪಡಿಸಿತ್ತು.

ಕಳೆದ ವರ್ಷ ಅಕ್ಟೋಬರ್ 14ರಂದು ತನಿಖಾ ಸಂಸ್ಥೆಯು ಅಕ್ಕಿ ಗಿರಣಿಗಾರ ಬಾಕಿಬುರ್ ರಹಮಾನ್ ಅವರನ್ನು ಬಂಧಿಸಿತ್ತು. ಬಳಿಕ ಅವರಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿತ್ತು.


ಅಕ್ಟೋಬರ್ 11, 26 ಮತ್ತು ನವೆಂಬರ್ 4ರಂದು ನಡೆಸಿದ ಶೋಧದ ಬಳಿಕ 1.42 ಕೋಟಿಗಳನ್ನು ಇಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಶೆಲ್ ಕಂಪನಿಗಳ ಬ್ಯಾಂಕ್ ಖಾತೆಗಳಲ್ಲಿ ಇಡಲಾಗಿದ್ದ 16.87 ಕೋಟಿ ರೂ.ಗಳನ್ನು ಕೂಡ ಜಪ್ತಿ ಮಾಡಿದ್ದರು.

ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಸಚಿವ ಜ್ಯೋತಿ ಪ್ರಿಯೋ ಮಲ್ಲಿಕ್ ಅವರನ್ನು ತನಿಖಾ ಸಂಸ್ಥೆ ಬಂಧಿಸಿತ್ತು. ಅವರು 2011ರಿಂದ 2021 ರವರೆಗೆ ಆಹಾರ ಸರಬರಾಜು ಸಚಿವರಾಗಿ ಸೇವೆ ಸಲ್ಲಿಸಿದ್ದರು. ಈ ಅವಧಿಯಲ್ಲಿ ಪಡಿತರ ವಿತರಣೆಯಲ್ಲಿ ಅಕ್ರಮ ಸಂಭವಿಸಿದೆ ಎಂದು ವರದಿಯಾಗಿದೆ. ಮಲ್ಲಿಕ್ ಅವರನ್ನು ಸ್ಥಳೀಯ ನ್ಯಾಯಾಲಯವು ನವೆಂಬರ್ 6ರವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X