ಜಾರಿ ನಿರ್ದೇಶನಾಲಯ(ED)ದ ಅಧಿಕಾರಿಗಳು ದಾಳಿ ನಡೆಸುತ್ತಿದ್ದ ವೇಳೆ ಅಧಿಕಾರಿಗಳು ಹಾಗೂ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ನಾಯಕನನ್ನು ಬಂಧಿಸಲಾಗಿದೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ ಖಾಲಿಯಲ್ಲಿ ಶುಕ್ರವಾರ ಜಾರಿ ನಿರ್ದೇಶನಾಲಯದ ತಂಡ ದಾಳಿ ನಡೆಸಿದಾಗ, ಸುಮಾರು 200ಕ್ಕೂ ಹೆಚ್ಚು ಸ್ಥಳೀಯರು ಅಧಿಕಾರಿಗಳನ್ನು ಸುತ್ತುವರೆದು ಕಲ್ಲು ತೂರಾಟ ನಡೆಸಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಕೆಲವರಿಗೆ ಗಾಯಗಳಾಗಿರುವುದಾಗಿಯೂ ವರದಿಯಾಗಿದೆ.
#WATCH | North 24 Parganas, West Bengal: A team of the Enforcement Directorate (ED) attacked during a raid in West Bengal’s Sandeshkhali.
More details are awaited pic.twitter.com/IBjnicU9qj
— ANI (@ANI) January 5, 2024
ಘಟನೆಯ ವೇಳೆ ಕೇಂದ್ರ ಸಶಸ್ತ್ರ ಅರೆಸೇನಾ ಪಡೆಯ ಬೆರಳೆಣಿಕೆಯ ಸಿಬ್ಬಂದಿಗಳು ಇದ್ದುದ್ದರಿಂದ ಗುಂಪನ್ನು ಚದುರಿಸಲು ಸಾಧ್ಯವಾಗಿಲ್ಲ. ತೃಣಮೂಲ ನಾಯಕ ಷಾಜಹಾನ್ ಶೇಖ್ ಅವರ ನಿವಾಸವನ್ನು ಸಮೀಪಿಸುತ್ತಿದ್ದಂತೆ ತಂಡವು ದಾಳಿ ನಡೆಸಿದೆ. ಈ ಬೆಳವಣಿಗೆಯ ನಡುವೆಯೂ ಕೂಡ ಷಾಜಹಾನ್ ಶೇಖ್ ಅವರನ್ನು ಪ್ರಕರಣದಲ್ಲಿ ಬಂಧಿಸಲಾಯಿತು.
ಈ ದಾಳಿಯ ಬಗ್ಗೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ಸುಕಾಂತ ಮಜುಂದಾರ್, “ರೋಹಿಂಗ್ಯಾಗಳು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವ ರೀತಿಯಲ್ಲಿ ಗೌರವ ಕೊಡುತ್ತಿದ್ದಾರೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ” ಎಂದು ತಿಳಿಸಿದ್ದಾರೆ.
Horrific. The Law & Order Situation in West Bengal is in shambles.
ED Officials & CRPF Jawans brutally attacked in Sandeshkhali; North 24 Parganas district, while conducting Raid at TMC leader Sheikh Shahjahan’s house.
I doubt that Rohingyas are present amongst the Anti National… pic.twitter.com/XHboQsBVSX— Suvendu Adhikari • শুভেন্দু অধিকারী (@SuvenduWB) January 5, 2024
ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಪಶ್ಚಿಮ ಬಂಗಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯು ಹದಗೆಟ್ಟು ಹೋಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ಅವರು ಈ ಗಂಭೀರ ಪರಿಸ್ಥಿತಿಯನ್ನು ಅರಿತುಕೊಳ್ಳಬೇಕು. ರಾಜ್ಯದಲ್ಲಿ ಸೃಷ್ಟಿಯಾಗಿರುವ ಅರಾಜಕತೆಯನ್ನು ಹತ್ತಿಕ್ಕಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಈ ಬಗ್ಗೆ ರಾಷ್ಟ್ರೀಯ ತನಿಖಾ ತಂಡ(ಎನ್‌ಐಎ) ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.
ಪಡಿತರ ವಿತರಣೆ ಹಗರಣ
ಪಡಿತರ ವಿತರಣೆಯಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೆಲವು ತಿಂಗಳುಗಳಿಂದ ಅಲ್ಲಲ್ಲಿ ದಾಳಿ ನಡೆಸುತ್ತಿದ್ದಾರೆ. ಫಲಾನುಭವಿಗಳಿಗೆ ನೀಡಲಾಗಿದ್ದ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಪಡಿತರದ ಸುಮಾರು 30 ಪ್ರತಿಶತವನ್ನು ಮುಕ್ತ ಮಾರುಕಟ್ಟೆಗೆ ರವಾನಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಈ ಹಿಂದೆ ಬಹಿರಂಗಪಡಿಸಿತ್ತು.
ಕಳೆದ ವರ್ಷ ಅಕ್ಟೋಬರ್ 14ರಂದು ತನಿಖಾ ಸಂಸ್ಥೆಯು ಅಕ್ಕಿ ಗಿರಣಿಗಾರ ಬಾಕಿಬುರ್ ರಹಮಾನ್ ಅವರನ್ನು ಬಂಧಿಸಿತ್ತು. ಬಳಿಕ ಅವರಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿತ್ತು.
VIDEO | A mob attacked vehicles of the Enforcement Directorate (ED) and central forces during a raid being conducted on Shankar Adhya, close aide of jailed West Bengal minister Jyotipriya Mallick, in connection with the alleged ration scam in North 24 Parganas district’s… pic.twitter.com/4XTw3rvi37
— Press Trust of India (@PTI_News) January 5, 2024
ಅಕ್ಟೋಬರ್ 11, 26 ಮತ್ತು ನವೆಂಬರ್ 4ರಂದು ನಡೆಸಿದ ಶೋಧದ ಬಳಿಕ 1.42 ಕೋಟಿಗಳನ್ನು ಇಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಶೆಲ್ ಕಂಪನಿಗಳ ಬ್ಯಾಂಕ್ ಖಾತೆಗಳಲ್ಲಿ ಇಡಲಾಗಿದ್ದ 16.87 ಕೋಟಿ ರೂ.ಗಳನ್ನು ಕೂಡ ಜಪ್ತಿ ಮಾಡಿದ್ದರು.
ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಸಚಿವ ಜ್ಯೋತಿ ಪ್ರಿಯೋ ಮಲ್ಲಿಕ್ ಅವರನ್ನು ತನಿಖಾ ಸಂಸ್ಥೆ ಬಂಧಿಸಿತ್ತು. ಅವರು 2011ರಿಂದ 2021 ರವರೆಗೆ ಆಹಾರ ಸರಬರಾಜು ಸಚಿವರಾಗಿ ಸೇವೆ ಸಲ್ಲಿಸಿದ್ದರು. ಈ ಅವಧಿಯಲ್ಲಿ ಪಡಿತರ ವಿತರಣೆಯಲ್ಲಿ ಅಕ್ರಮ ಸಂಭವಿಸಿದೆ ಎಂದು ವರದಿಯಾಗಿದೆ. ಮಲ್ಲಿಕ್ ಅವರನ್ನು ಸ್ಥಳೀಯ ನ್ಯಾಯಾಲಯವು ನವೆಂಬರ್ 6ರವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿತ್ತು.