ಗ್ಯಾರಂಟಿ ಯೋಜನೆ | ಸರ್ಕಾರ ಹೇಳಿದ್ದೊಂದು, ಮಾಡುತ್ತಿರುವುದೊಂದು: ಬೊಮ್ಮಾಯಿ ಟೀಕೆ

Date:

  • ಕಾಂಗ್ರೆಸ್‌ನ ಪಂಚ ಗ್ಯಾರಂಟಿ ಅನುಷ್ಠಾನ ಲೇವಡಿ ಮಾಡಿದ ಬೊಮ್ಮಾಯಿ
  • ನಮ್ಮ ಯೋಜನೆ ಲಾಭ ಪಡೆದು ಅವರ ಗ್ಯಾರಂಟಿ ಜಾರಿ ಮಾಡುತ್ತಿದ್ದಾರೆ

ಕಾಂಗ್ರೆಸ್ ಸರ್ಕಾರ ಇಂದು ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳು ಜನರ ದಿಕ್ಕು ತಪ್ಪಿಸುತ್ತಿವೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು.

ಬೆಂಗಳೂರಿನ ತಮ್ಮ ಸರ್ಕಾರಿ ನಿವಾಸದಲ್ಲಿ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಬೊಮ್ಮಾಯಿ, “ಚುನಾವಣೆ ವೇಳೆ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ ಎಂದು ಹೇಳಿದ್ದರು. ಆದರೆ ಈಗ 200 ಯೂನಿಟ್ ಒಳಗೆ ಬಳಸಿದರೆ ಮಾತ್ರ ಉಚಿತ ಎನ್ನುತ್ತಿದ್ದಾರೆ. ಈಗ ಸಿಎಂ ವಾರ್ಷಿಕ ಸರಾಸರಿ ಲೆಕ್ಕ ಹಾಕಿ ಉಚಿತ ಕೊಡುವುದಾಗಿ ಹೇಳುತ್ತಾರೆ. ಇದು ಇವರ ಹಿಡನ್ ಅಜೆಂಡಾ ಆಗಿದೆ. ಇದರಿಂದ ಸರಾಸರಿ 120 ರಿಂದ 125 ಯೂನಿಟ್ ವ್ಯತ್ಯಾಸವಾಗುತ್ತದೆ.‌ ಸರಾಸರಿ ಬಳಕೆ ಲೆಕ್ಕ ಹಾಕುವುದು ಹಿಡನ್ ಅಜೆಂಡಾ. ಇವರು ಗ್ಯಾರಂಟಿಯಲ್ಲಿ ದೋಖಾ ಮಾಡುತ್ತಿದ್ದಾರೆ” ಎಂದು ಕಿಡಿ ಕಾರಿದರು.

“ಸಿದ್ದರಾಮಯ್ಯ ಅವರದ್ದು ಚುನಾವಣೆ ಮೊದಲು ಒಂದು ಮಾತು ಈಗ ಒಂದು ಮಾತು. ಅನ್ನಭಾಗ್ಯ ಯೋಜನೆ ಜಾರಿಯಲ್ಲೂ ಸ್ಪಷ್ಟತೆ ಇಲ್ಲ. ಮೊದಲು ನಾವೇ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದಿದ್ದರು. ಈಗ ಆಹಾರ ಧಾನ್ಯ ಕೊಡುತ್ತೇವೆ ಎಂದಿದ್ದಾರೆ. ಹಾಗೆಯೇ ಕೇಂದ್ರ ಸರ್ಕಾರದ ಉಚಿತ ಅಕ್ಕಿಯನ್ನೂ ಬಳಸಿಕೊಂಡು ತಮ್ಮ ಕ್ರೆಡಿಟ್ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದ ಜನರನ್ನ ಯಾಮಾರಿಸುವ ಕೆಲಸ ಮಾಡುತ್ತಿದೆ. 10 ಕೆಜಿಯಲ್ಲಿ ರಾಗಿ, ಜೋಳ ಸೇರಿದೆಯಾ, ಇಲ್ಲಾ ಹೆಚ್ಚುವರಿ ಕೊಡ್ತಾರಾ..?” ಎಂದು ಮಾಜಿ ಸಿಎಂ ಪ್ರಶ್ನಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ದೋಖಾ ಇದೆ. ವಿಶೇಷವಾಗಿ ಬಡವರ ಮನೆಯಲ್ಲಿ ಹಿರಿಯ ಮಹಿಳೆಯರಿರುತ್ತಾರೆ. ಆನ್‌ಲೈನ್ ಅರ್ಜಿ ಹಾಕಲು ಹೇಳಿ ಅವರಿಗೆ ಯೋಜನೆ ಲಾಭ ಸಿಗದಂತೆ ಮಾಡುವ ಹುನ್ನಾರ ಅಡಗಿದೆ. ಎಲ್ಲ ಪಂಚಾಯತಿಗಳಲ್ಲಿ ಪಿಡಿಒಗಳಿದ್ದಾರೆ. ಅವರ ಮೂಲಕ ಮಾಹಿತಿ ಸಂಗ್ರಹಿಸಿ ಕೊಡಬೇಕಿತ್ತು. ಅರ್ಜಿ ಹಾಕಲು ಒಂದು ತಿಂಗಳು, ಪ್ರಕ್ರಿಯೆ ಮಾಡಲು ಒಂದು ತಿಂಗಳು ಕಾಲಹರಣ ಮಾಡುವ ಲೆಕ್ಕ ಇದರಲ್ಲಿ ಅಡಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ರಾಜ್ಯ ಸರ್ಕಾರವೇ ಎಲ್ಲರ ಮನೆಗಳಿಗೆ ಹೋಗಿ ಮಾಹಿತಿ ಪಡೆದು ಯೋಜನೆ ಜಾರಿ ಮಾಡಬೇಕು. ಇನ್ನು ಎಸಿ ಬಸ್ಸು, ಲಗ್ಜುರಿ ಬಸ್ ಇಲ್ಲ ಅಂತ ಹೇಳಿದ್ದಾರೆ. ಕೆಂಪು ಬಸ್ ಮಾತ್ರ ಗ್ಯಾರಂಟಿ ಅಂತ ಆಯಿತು. ಯುವ ನಿಧಿ ಯೋಜನೆಯನ್ನು 2022-23 ಪಾಸಾದ ಡಿಗ್ರಿ ಹೋಲ್ಡರ್ಸ್‌ಗೆ ಕೊಡುವುದಾಗಿ ಹೇಳುತ್ತಾರೆ. ಡಿಗ್ರಿ ಮುಗಿಸಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ತೆರಳುತ್ತಾರೆ. ಹೀಗಾಗಿ ಹೆಚ್ಚಿನ ನಿರುದ್ಯೋಗಿಗಳಿಗೆ ಅನುಕೂಲ ಆಗುವುದಿಲ್ಲ. ಮತ್ತೆ ಈ ಯೋಜನೆಗಳ ಜಾರಿಗೆ ಎಷ್ಟು ಖರ್ಚಾಗುತ್ತದೆ ಎನ್ನುವುದನ್ನು ಹೇಳಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ?:ಶೋಭಕ್ಕ, ಕಟೀಲಣ್ಣ, ಬೊಮ್ಮಾಯಿ ಸಾಹೇಬ್ರಿಗೂ ಫ್ರೀ; ಗ್ಯಾರಂಟಿ ಜಾರಿ ಮಾಡಿ ಬಿಜೆಪಿ ಕುಟುಕಿದ ಕಾಂಗ್ರೆಸ್

“ಸರ್ಕಾರ ಹೆಚ್ಚಿನ ಆದಾಯ ತರದೇ ಇರುವ ಹಣವನ್ನೇ ಖರ್ಚು ಮಾಡಿದರೆ, ರಾಜ್ಯ ಆರ್ಥಿಕ ಸಂಕಷ್ಟಕ್ಕೆ ಸಿಲುಕಲಿದೆ. ನಮ್ಮ ರಾಜ್ಯ ಅತಿ ಹೆಚ್ಚು ತೆರಿಗೆ ಸಂಗ್ರಹಿಸುವ ರಾಜ್ಯವಾಗಿದೆ. ಈಗಿರುವ ಆರ್ಥಿಕ ಪರಿಸ್ಥಿತಿ ಸರಿಯಾಗಿ ನಿರ್ವಹಣೆ ಮಾಡದೇ ಹೋದರೆ, ಆರ್ಥಿಕ ಹೊರೆ ಬೀಳಲಿದೆ. ಇವರು ಯಾವ ರೀತಿಯ ಸಾಲ ಪಡೆಯುತ್ತಾರೆ ಎನ್ನುವುದು ಸ್ಪಷ್ಟವಾಗಬೇಕು” ಎಂದರು.

“ಇವರು ತಾವು ಮಾಡುವ ಯೋಜನೆಗಳಿಂದ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ನೂಕುವ ಕೆಲಸ ಮಾಡಬಾರದು. ಅವರು ಮಾತಿಗೆ ತಪ್ಪಿದ್ದಾರೆ‌. ಹೇಳುವುದೊಂದು ಮಾಡುವುದೊಂದು ಮಾಡಿದ್ದಾರೆ. ರಾಜ್ಯದ ಜನತೆ ಇದೆಲ್ಲವನ್ನು ಗಮನಿಸುತ್ತಿದೆ. ರಾಜ್ಯದ ಜನರ ನಿರೀಕ್ಷೆಗಳು ಹುಸಿಯಾಗಿವೆ. ಒಟ್ಟಿನಲ್ಲಿ ರಾಜ್ಯದ ಜನರ ತೆರಿಗೆ ಹಣ ಅಭಿವೃದ್ದಿ ಯೋಜನೆಗೆ ಖರ್ಚಾಗಲಿ” ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಂದುತ್ವ | ಭಾರತೀಯ ಸಮಾಜವನ್ನು ಒಳಗಿನಿಂದಲೇ ವಂಚಿಸುವ ‘ಗೋಮುಖ ವ್ಯಾಘ್ರ’

ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಭಾರತದ ಅತಿದೊಡ್ಡ ರಾಜಕೀಯ ಶಕ್ತಿಯಾಗಿದೆ. ಆದರೆ,...

ಸಂತ್ರಸ್ತೆ ಅಪಹರಣ ಪ್ರಕರಣ | ಮೇ 31ಕ್ಕೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ತೀರ್ಪು

ಕೆ ಆರ್‌ ನಗರ ಮಹಿಳೆ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ...

ಚಂದ್ರಶೇಖರ್‌ ಆತ್ಮಹತ್ಯೆ | ಸರ್ಕಾರದ ಖಜಾನೆಯನ್ನೇ ಲೂಟಿ ಮಾಡಿದ ಹಗರಣವಿದು: ಗೋವಿಂದ ಕಾರಜೋಳ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ಇಲಾಖಾ ಸಚಿವ ನಾಗೇಂದ್ರ ಅವರು...