ಸ್ವಾತಿಜಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಿ: ಕೇಜ್ರಿವಾಲ್‌ಗೆ ನಿರ್ಭಯಾ ತಾಯಿಯ ಮನವಿ

Date:

ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆದ ಪ್ರಕರಣದಲ್ಲಿ ಅವರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಿ ಎಂದು ನಿರ್ಭಯಾ ಪ್ರಕರಣ ಎಂದೇ ಕರೆಯಲಾಗುವ 2012ರ ದೆಹಲಿಯ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ತಾಯಿ ಆಶಾ ದೇವಿ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಮನವಿ ಮಾಡಿದ್ದಾರೆ.

ಸುದ್ದಿ ಸಂಸ್ಥೆ ಐಎಎನ್‌ಎಸ್‌ನೊಂದಿಗೆ ಮಾತನಾಡಿದ ಆಶಾದೇವಿ ಅವರು, “ದೆಹಲಿಯ ಮಹಿಳಾ ಆಯೋಗದ ಮಾಜಿ ಮುಖ್ಯಸ್ಥರಾಗಿ ಎಎಪಿ ನಾಯಕಿ ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಹೋರಾಡಿದ್ದಾರೆ. ಕೇಜ್ರಿವಾಲ್ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದನ್ನು ಖಚಿತಪಡಿಸಿಕೊಳ್ಳಬೇಕು” ಎಂದು ಹೇಳಿದ್ದಾರೆ.

“ನಿರ್ಭಯಾ ಪ್ರಕರಣದಲ್ಲಿ ಜನರ ಕೋಪ ಮತ್ತು ಆಕ್ರೋಶದಿಂದಾಗಿಯೇ ದೆಹಲಿಯಲ್ಲಿ ಎಎಪಿ ಅಧಿಕಾರಕ್ಕೆ ಬಂದಿದೆ. ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಸುರಕ್ಷಿತವಾಗಿಲ್ಲದಿದ್ದರೆ, ಸಾಮಾನ್ಯ ಮಹಿಳೆಯರ ಸ್ಥಿತಿ ಏನು” ಎಂದು ಪ್ರಶ್ನಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ? ಸಿಸೋಡಿಯಾ ಇಲ್ಲಿ ಇದ್ದಿದ್ದರೆ ನನಗೆ ಈ ರೀತಿ ಆಗುತ್ತಿರಲಿಲ್ಲ: ಸ್ವಾತಿ ಮಲಿವಾಲ್

ಇನ್ನು ಈ ವಿಡಿಯೋವನ್ನು ಟ್ವೀಟ್ ಮಾಡಿರುವ ಸ್ವಾತಿ ಮಲಿವಾಲ್, “ನಿರ್ಭಯಾ ತಾಯಿ ದೇಶದಲ್ಲಿ ನ್ಯಾಯಕ್ಕಾಗಿ ಸುದೀರ್ಘ ಹೋರಾಟ ನಡೆಸಿದ್ದಾರೆ. ಮಕ್ಕಳ ಅತ್ಯಾಚಾರಿಗಳನ್ನು ಶಿಕ್ಷಿಸಲು ಆಗ್ರಹಿಸಿ ನಾನು ಉಪವಾಸ ಮಾಡುತ್ತಿದ್ದಾಗಲೂ ಅವರು ನನ್ನನ್ನು ಬೆಂಬಲಿಸಿದರು” ಎಂದು ಹೇಳಿದ್ದಾರೆ.

“ಇಂದು ಅವರು ನನ್ನನ್ನು ಬೆಂಬಲಿಸಿ ಈ ವಿಡಿಯೋ ಮಾಡಿರುವುದು ನೋಡಿ ನಾನು ತುಂಬಾ ಭಾವುಕನಾಗಿದ್ದೇನೆ. ಆದರೆ ಅದೇನು ದೊಡ್ಡ ವಿಷಯವಲ್ಲ, ಈಗ ಕೆಲವು ನಾಯಕರು ನನ್ನನ್ನು ಬೆಂಬಲಿಸಿದಕ್ಕೆ ಅವರನ್ನು ಬಿಜೆಪಿ ಏಜೆಂಟ್ ಎಂದು ಕರೆಯುತ್ತಾರೆ” ಎಂದಿದ್ದಾರೆ.

 

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಹಿತಿಗಳೂ ರಾಜಕಾರಣಿಗಳೇ, ಸರ್ಕಾರದಿಂದ ನೇಮಕವಾಗಿದ್ದಾರೆ, ಸಭೆ ಮಾಡಿದ್ದೇನೆ: ಡಿ ಕೆ ಶಿವಕುಮಾರ್

ಇತ್ತೀಚೆಗೆ ಕೆಪಿಸಿಸಿ ಕಚೇರಿಗೆ ಸಾಹಿತ್ಯ, ಸಂಸ್ಕೃತಿ ಹಾಗೂ ಇತರ ಅಕಾಡೆಮಿಗಳ ಅಧ್ಯಕ್ಷರ...

ವಿನೀತ ಮೋದಿಗೆ ಜಾಗತಿಕ ಒತ್ತಡ; ದುರ್ಬಲಗೊಳ್ಳುತ್ತಿದೆ ವಿದೇಶಾಂಗ ಸಂಬಂಧ

ಭಾರತದಲ್ಲಿ ದುರ್ಬಲರಾಗಿ, ವಿನೀತರಾಗಬೇಕಾದ ಒತ್ತಡ ಹೊಂದಿರುವ ಮೋದಿ, ತಮ್ಮ ಮೂರನೇ ಅವಧಿಯಲ್ಲಿ...

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ; ಸಿ.ಟಿ ರವಿ ವಿರುದ್ಧ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ ನೀಡಿದ್ದ ಮಾಜಿ ಸಚಿವ, ವಿಧಾನ...