ದೆಹಲಿಯಲ್ಲಿ ರಾಹುಲ್ ಗಾಂಧಿ ಬಂಧನಕ್ಕೆ ಈಶ್ವರ ಖಂಡ್ರೆ ಖಂಡನೆ

Date:

ವಿದ್ಯಾರ್ಥಿಗಳ ಮೇಲಿನ ಉಗ್ರ ಲಾಠಿ ಚಾರ್ಜ್ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಂಧನವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ತೀವ್ರವಾಗಿ ಖಂಡಿಸಿದ್ದಾರೆ‌.

- Advertisement -

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಪ್ರತಿಯೊಬ್ಬರ ಹಕ್ಕು, ಆದರೆ ಕೇಂದ್ರ ಬಿಜೆಪಿ ನೇತೃತ್ವದ ಎನ್.ಡಿಎ ಸರ್ಕಾರ ದಮನಕಾರಿ ಪ್ರವೃತ್ತಿ ಅನುಸರಿಸುತ್ತಿದ್ದು, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ್ ಗಾಂಧಿ ಮೊದಲಾದವರ ಮೇಲೆ ಬಲಪ್ರಯೋಗ ಮಾಡಿ ಬಂಧಿಸಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ದೆಹಲಿಯಲ್ಲಿ ಸೋಮವಾರ ಕೇಂದ್ರದ ಎನ್‌ಡಿಎ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಯುವಜನರು ಸಿಡಿದೆದಿದ್ದಾರೆ. ನೀಟ್ ಪರೀಕ್ಷೆಯಲ್ಲಿ ಅಕ್ರಮ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಲಾರದ ಹೇಡಿ ಕೇಂದ್ರ ಸರ್ಕಾರ ಹೋರಾಟದ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ತನ್ನ ಪೌರುಷ ಮೆರೆದಿದೆ. ಆಶ್ರುವಾಯು ಶೆಲ್ ಸಿಡಿಸಿ, ಲಾಠಿ ಚಾರ್ಜ್ ಮಾಡಿದ ಕೇಂದ್ರ ಸರ್ಕಾರದ ಕ್ರಮ ಖಂಡನೀಯ” ಎಂದಿದ್ದಾರೆ.

ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಜ್ ಖಂಡಿಸಿ ಮಂಗಳವಾರ ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದ ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿ ಅವರನ್ನು ಬಲವಂತವಾಗಿ ಬಂಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಉಗ್ರ ಶಬ್ದಗಳಿಂದ ಖಂಡಿಸಿದ್ದಾರೆ.

ಬಿಜೆಪಿ ಪಾಪದ ಕೊಡ ತುಂಬುತ್ತಿದೆ. ಇನ್ನು ಜನರು ಸುಮ್ಮನಿರುವುದಿಲ್ಲ. ಈ ಹಿಟ್ಲರ್ ಶಾಹಿ ಮನಸ್ಥಿತಿಯವರಿಗೆ ತಕ್ಕ ಪಾಠ ಕಲಿಸುತ್ತಾರೆ. ಈ ಕೂಡಲೇ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ಇಲ್ಲವೇ ರಾಷ್ಟ್ರಪತಿಗಳು ಅವರನ್ನು ಸಚಿವ ಸಂಪುಟದಿಂದ ತೆಗೆದು ಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಿಜೆಪಿ ಸರ್ವಾಧಿಕಾರಿ ಧೋರಣೆ ಬಹಳ ಕಾಲ ನಡೆಯುವುದಿಲ್ಲ. ರಾಹುಲ್ ಗಾಂಧಿ ಅವರನ್ನು ಬಂಧಿಸಿರುವುದು ಸರಿಯಲ್ಲ. ನಾವೆಲ್ಲರೂ ಅವರೊಂದಿಗೆ ನಿಲ್ಲುತ್ತೇವೆ. ಇಡೀ ದೇಶದ ಯುವಜನರು ಅವರೊಂದಿಗೆ ಇದ್ದಾರೆ. ಕೂಡಲೇ ಕೇಂದ್ರ ಸರ್ಕಾರ ತನ್ನ ಹಠಮಾರಿ ನೀತಿ ಬಿಟ್ಟು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆಯದಿದ್ದರೆ, ದೇಶಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು” ಎಂದು ಈಶ್ವರ ಖಂಡ್ರೆ ಎಚ್ಚರಿಸಿದ್ದಾರೆ.

ಪ್ರಜಾಪ್ರಭುತ್ವದ ಮೇಲಿನ ದಾಳಿ : ಸಂಸದ ಸಾಗರ ಖಂಡ್ರೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಇತರ ಕಾಂಗ್ರೆಸ್ ನಾಯಕರ ಮೇಲೆ ಪೊಲೀಸ್ ಬಲಪ್ರಯೋಗಕ್ಕೆ ಯತ್ನಿಸುತ್ತಿರುವುದು ಭಾರತೀಯ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿಯಾಗಿದೆ ಎಂದು ಸಂಸದ ಸಾಗರ್‌ ಖಂಡ್ರೆ ಖಂಡಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ರೈತ ಹುತಾತ್ಮ ದಿನಾಚರಣೆ : ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಲು ರೈತ ಸಂಘ ಆಗ್ರಹ

ಕೇಂದ್ರ ಸರ್ಕಾರದ ಆದೇಶದ ಮೇರೆಗೆ ದೆಹಲಿ ಪೊಲೀಸರು ನಡೆಸಿರುವ ಈ ನಾಚಿಕೆಗೇಡಿನ ಕೃತ್ಯವನ್ನು ಬಲವಾಗಿ ಖಂಡಿಸುತ್ತೇನೆ. ಶಾಂತಿಯುತ ಪ್ರತಿಭಟನೆ ನಮ್ಮ ಸಂವಿಧಾನಬದ್ಧ ಹಕ್ಕು ನೀವು ಸತ್ಯವನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಈ ಸರ್ವಾಧಿಕಾರಿ ಧೋರಣೆಯನ್ನು ನಾವು ಸಂಸತ್ತಿನಲ್ಲಿ ಹಾಗೂ ಬೀದಿಗಳಲ್ಲಿಯೂ ವಿರೋಧಿಸಿ ಹೋರಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.

6378a520579666f153c2fe302416fd40eb44392fa3ff3c717bc425bc472039bf?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಎಸ್‌ಎಸ್‌ ಕೇವಲ ಪುರುಷರಿರುವ ‘ಸಂವಿಧಾನ ವಿರೋಧಿ’ ಸಂಘಟನೆ: ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ...

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...