ಬಿಜೆಪಿ ಟಿಕೆಟ್ | ಯಡಿಯೂರಪ್ಪ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಪಕ್ಕಕ್ಕೆ ಸರಿಸಿದ್ದಾರೆ: ಕೆ.ಎಸ್. ಈಶ್ವರಪ್ಪ

Date:

ಬಿಜೆಪಿ ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪುತ್ರ ಕಾಂತೇಶ್‌ಗೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ “ಚರ್ಚೆ ನಡೆಸಿ ಪಕ್ಷೇತರ ನಿಲ್ಲುವ ತೀರ್ಮಾನ” ಮಾಡುವುದಾಗಿ ಈಶ್ವರಪ್ಪ ಹೇಳಿದರು.

- Advertisement -

ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, “ನಳಿನ್ ಕುಮಾರ್ ಕಟೀಲ್, ಸದಾನಂದ ಗೌಡ, ಪ್ರತಾಪ್​ ಸಿಂಹ, ಸಿಟಿ ರವಿ ಹೀಗೆ ಹಲವರಿಗೆ ಅನ್ಯಾಯವಾಗಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಪಕ್ಕಕ್ಕೆ ಸರಿಸಲಾಗುತ್ತಿದೆ. ಈ ಕೆಲಸವನ್ನ ಯಡಿಯೂರಪ್ಪನವರು ಮಾಡುತ್ತಿದ್ದಾರೆ ಎಂಬ ಅಭಿಪ್ರಾಯ ಹಲವರಿಗೆ ಇದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಪಕ್ಷೇತರರಾಗಿ ನೀವು ನಿಲ್ಲಬೇಕು, ನಿಮ್ಮನ್ನು ನಾವು ಗೆಲ್ಲಿಸುತ್ತೇವೆ ಎಂದು ಒತ್ತಡ ಹಾಕಲಾಗುತ್ತಿದೆ. ಈ ವಿಚಾರದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ. ನಾನು ಪಕ್ಷ ತೊರೆಯುತ್ತೇನೆ ಎಂದಾಗಲಿ ಅಥವಾ ಪಕ್ಷೇತರನಾಗಿ ನಿಲ್ಲುತ್ತೇನೆ ಎಂದು ಹೇಳಿಲ್ಲ. ಅಭಿಪ್ರಾಯ ಸಂಗ್ರಹ ಮಾಡಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಕಾರ್ಯಕರ್ತರಿಗೆ ಹೇಳಿದೆ” ಎಂದು ತಿಳಿಸಿದರು.

ಬಹಿರಂಗವಾಗಿಯೇ ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಈಶ್ವರಪ್ಪ “ನಿಮ್ಮ ಮಗ ಹಾವೇರಿಯಲ್ಲಿ ಚುನಾವಣೆ ಸಿದ್ಧತೆ ಮಾಡಲಿ, ನಾನು ಟಿಕೆಟ್ ಕೊಡಿಸುತ್ತೇನೆ. ನಾನೇ ಅಲ್ಲಿ ಪ್ರಚಾರ ಮಾಡಿ ನಿಮ್ಮ ಮಗನನ್ನು ಗೆಲ್ಲಿಸುತ್ತೇನೆ ಎಂದು ಬಿಎಸ್‌ವೈ ಹೇಳಿದ್ದರು. ಆದರೆ ಈಗ ಮೋಸ ಮಾಡಿದ್ದಾರೆ, ಅವರೇ ಟಿಕೆಟ್ ತಪ್ಪಿಸಿದ್ದಾರೆ” ಎಂದು ಆರೋಪಿಸಿದರು.

“ಯಡಿಯೂರಪ್ಪ ಭರವಸೆ ನೀಡಿ ಈಗ ಯಾಕೆ ಮೋಸ ಮಾಡಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲ. ಆದರೆ ಇದರಿಂದಾಗಿ ನಮ್ಮ ಕಾರ್ಯಕರ್ತರಿಗೆ ನೋವಾಗಿದೆ. ಈಗ ನಮ್ಮ ಪಕ್ಷವೂ ಉಳಿಯಬೇಕು, ಕಾರ್ಯಕರ್ತರ ನೋವೂ ದೂರವಾಗಬೇಕು. ನಾನು ಕಾರ್ಯಕರ್ತರ ತೀರ್ಮಾನದ ಬಗ್ಗೆ ಪಕ್ಷದ ಹಿರಿಯರು ಹಾಗೂ ಕಾರ್ಯಕರ್ತರ ಜೊತೆಗೆ ಮಾತನಾಡಿ ಅಂತಿಮ ನಿರ್ಧಾರ ಮಾಡುತ್ತೇನೆ” ಎಂದರು.

“ಈಗ ನನ್ನನ್ನು ರಾಧಾ ಮೋಹನ್ ಅಗರ್​ ಲಾಲ್ ಬೆಂಗಳೂರಿಗೆ ಕರೆದಿದ್ದಾರೆ. ಆದರೆ ಈಗಾಗಲೇ ಟಿಕೆಟ್ ಘೋಷಣೆ ಮಾಡಿಯಾಗಿದೆ, ಈಗ ಯಾಕೆ ಹೋಗುವುದು, ಇನ್ನು ಮಾತನಾಡಿ ಏನು ಲಾಭವಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಬಿಜೆಪಿ ನಾಯಕರಿಗೆ ಯಡಿಯೂರಪ್ಪನವರು ಮೋಸ ಮಾಡಿದ್ದಾರೆ. ಬೊಮ್ಮಾಯಿ, ಕರಂದ್ಲಾಜೆಯವರ ಟಿಕೆಟ್ ಯಾರ ಕೈಯಲ್ಲಿ ಇದೆ” ಎಂದು ಪ್ರಶ್ನಿಸಿದ ಈಶ್ವರಪ್ಪ, “ಬೊಮ್ಮಾಯಿಯವರು ನಾನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿದ್ದರು. ಬಸವರಾಜ್ ಬೊಮ್ಮಾಯಿಯವರೇ ಚುನಾವಣಾ ಸಮಿತಿಯಲ್ಲಿ ಕಾಂತೇಶ್ ​ಅವರನ್ನು ಹಾವೇರಿಯಲ್ಲಿ ನಿಲ್ಲಿಸಿ ಎಂದು ಹೇಳಿದ್ದರು. ಆದರೆ ಈಗ ಅವರಿಗೆ ಟಿಕೆಟ್ ಕೊಡಲಾಗಿದೆ. ಕುತ್ತಿಗೆ ಹಿಚುಕುವ ಕಾರ್ಯ ಮಾಡಲಾಗುತ್ತಿದೆ” ಎಂದು ದೂರಿದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...