ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Date:

Advertisements
  • ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಭರವಸೆ
  • ‘ಈ ವರ್ಗಗಳಿಗೆ 34 ಸಾವಿರ ಕೋಟಿ ರೂ. ಅನುದಾನ ಮೀಸಲು’ 

ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಾಲ್ಮೀಕಿ ಜಯಂತಿಯ ಅಂಗವಾಗಿ ಶನಿವಾರ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.

“ನಮ್ಮ ಹಿಂದಿನ ಸರ್ಕಾರದ ಅವಧಿಯಲ್ಲಿ ಬೆಳಗಾವಿಯ ಅಧಿವೇಶನದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮೀಸಲಿಡುವ ತೀರ್ಮಾನವನ್ನು ಕೈಗೊಳ್ಳಲಾಯಿತು. ಆದಕಾರಣ ಎಸ್ ಸಿ ಎಸ್ ಪಿ ಹಾಗೂ ಟಿಎಸ್ ಪಿ ಯೋಜನೆಯಡಿ ಹೆಚ್ಚು ಅನುದಾನ ಖರ್ಚು ಮಾಡಲು ಸಾಧ್ಯವಾಯಿತು. ಮೊದಲು ಈ ಯೋಜನೆಗಳಡಿ ಕೇವಲ 6 ಸಾವಿರ ಅನುದಾನ ಮೀಸಲಿಡಲಾಗುತ್ತಿತ್ತು. ಆದರೆ ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಈ ಮೊತ್ತವನ್ನು 6 ಸಾವಿರದಿಂದ 30 ಸಾವಿರಕ್ಕೆ ಹೆಚ್ಚಿಗೆ ಮಾಡಲಾಯಿತು. ಹಿಂದಿನ ಸರ್ಕಾರದವರು ಈ ಮೊತ್ತವನ್ನು ಹೆಚ್ಚಿಸಲಿಲ್ಲ. ನಮ್ಮ ಸರ್ಕಾರ ಈ ವರ್ಷದ ಆಯವ್ಯಯದಲ್ಲಿ ಈ ವರ್ಗಗಳಿಗೆ 34 ಸಾವಿರ ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ” ಎಂದು ತಿಳಿಸಿದರು.

Advertisements

ಎಸ್ ಸಿ ಎಸ್ ಟಿ ಜನರಿಗೆ ಅನುದಾನ ರಾಜ್ಯಾಂಗ ಬದ್ಧ 

“ರಾಜ್ಯದ ಒಟ್ಟು ಜನಸಂಖ್ಯೆಯ ಶೇ.17.1ರಷ್ಟು ಎಸ್ ಸಿ ಹಾಗೂ ಶೇ.7 ರಷ್ಟು ಎಸ್ ಟಿ ವರ್ಗಕ್ಕೆ ಸೇರಿದವರಿದ್ದಾರೆ. 2011ರ ಜನಗಣತಿ ಪ್ರಕಾರ, ಶೇ.24.1 ರಷ್ಟು ಎಸ್ ಸಿ ಹಾಗೂ ಎಸ್ ಟಿ ವರ್ಗದ ಜನಸಂಖ್ಯೆಯಿದೆ. ಈ ಜನಸಂಖ್ಯೆಗನುಗುಣವಾಗಿ ಎಸ್ ಸಿ ಎಸ್ ಟಿ ವರ್ಗಗಳ ಕಲ್ಯಾಣಕ್ಕಾಗಿ ಪ್ರತ್ಯೇಕ ಅನುದಾನ ಮೀಸಲಿಡುವ ಬಗ್ಗೆ ಕಾನೂನು ತಂದ ಮೊದಲ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆಗೆ ರಾಜ್ಯ ಪಾತ್ರವಾಗಿದೆ. ಯಾವುದೇ ಸರ್ಕಾರಗಳು ಬಂದರೂ ಈ ಕಾನೂನನ್ನು ಯಾರೂ ಬದಲಾಯಿಸಲು ಸಾಧ್ಯವಿಲ್ಲ. ಈ ಕಾನೂನು ನಂತರ 2013 ರಿಂದ 2018ರವರೆಗೆ ನಮ್ಮ ಸರ್ಕಾರ ಒಟ್ಟು 88 ಸಾವಿರ ಕೋಟಿ ರೂ.ಗಳನ್ನು ಎಸ್ ಸಿ ಎಸ್ಟಿ ಜನರಿಗೆ ಮೀಸಲಿಡಲಾಗಿತ್ತು. ಈ ಪ್ರಮಾಣದ ಜನಸಂಖ್ಯೆಗೆ ಈ ಅನುದಾನ ರಾಜ್ಯಾಂಗಬದ್ಧವಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ” ಎಂದು ತಿಳಿಸಿದರು.

ಪ್ರಶಸ್ತಿ ವಿಜೇತರ ಸಾಧನೆಗಳು ಸ್ಫೂರ್ತಿಯಾಗಲಿ

ನಾಡಿನ ಸಮಸ್ತ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವದ ಶುಭಾಶಯಗಳನ್ನು ಮುಖ್ಯಮಂತ್ರಿಯವರು ಕೋರಿದರು. ಈ ಸಾಲಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 8 ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದ್ದು, ಕನ್ನಡ ನಾಡಿನ ಜನತೆಯ ಪರವಾಗಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಪ್ರಶಸ್ತಿ ಪುರಸ್ಕೃತರ ಸಾಧನೆಗಳು ಎಲ್ಲರಿಗೂ ದಾರಿದೀಪವಾಗಲಿ ಎಂದು ಅವರು ಹಾರೈಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X