ವಿಮಾನ ನಿಲ್ದಾಣಗಳ ಹತ್ತಿರದಲ್ಲಿ ಆಹಾರ ಪಾರ್ಕ್ ಸ್ಥಾಪನೆ: ಸಚಿವ ಚಲುವರಾಯಸ್ವಾಮಿ

Date:

ಕೃಷಿ, ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ರಫ್ತು ಉತ್ತೇಜಿಸಲು ಸರ್ಕಾರ ಗರಿಷ್ಠ ನೆರವು ಒದಗಿಸುತ್ತಿದೆ. ಈ ಸಾಲಿನಲ್ಲಿ ವಿಮಾನ ನಿಲ್ದಾಣಗಳ ಹತ್ತಿರದಲ್ಲಿರುವ ಶಿವಮೊಗ್ಗ ಜಿಲ್ಲೆಯ ಸೋಗಾನೆ ಹಾಗೂ ವಿಜಯಪುರದ ಇಟ್ಟಂಗಿಹಾಳದಲ್ಲಿ ಆಹಾರ ಪಾರ್ಕ್‌ ಸ್ಥಾಪಿಸಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

- Advertisement -

ವಿಧಾನಸಭೆಯಲ್ಲಿ ಸದಸ್ಯರಾದ ಟಿ ಬಿ ಜಯಚಂದ್ರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸದ ಸಚಿವರು, “ರಾಜ್ಯದಲ್ಲಿ ಪುಡ್ ಪಾರ್ಕ್‌ಗಳ ಸ್ಥಾಪನೆಗೆ ಪ್ರೋತ್ಸಾಹದ ಜೊತೆಗೆ ಬ್ರಾಂಡಿಗೂ ನೆರವು ಒದಗಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

“ಆಹಾರ ಪಾರ್ಕ್‍ಗಳ ಅನುಷ್ಠಾನಕ್ಕೆ ಹಾಗೂ ಮೇಲುಸ್ತುವಾರಿ ನಿರ್ವಹಿಸಲು ಆಹಾರ ಕರ್ನಾಟಕ ನಿಯಮಿತ ಎಂಬ ವಿಶೇಷ ಉದ್ದೇಶ ಸಂಸ್ಥೆಯನ್ನು 2003ರಲ್ಲಿ ಕಂಪನಿ ಕಾಯ್ದೆ 1956ರಡಿಯಲ್ಲಿ ಸ್ಥಾಪಿಸಲಾಗಿದೆ. ಆಹಾರ ಕರ್ನಾಟಕ ನಿಯಮಿತವು ಈ ಹಿಂದೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಡಿಯಲ್ಲಿದ್ದು, ಪ್ರಸ್ತುತ ಕೃಷಿ ಇಲಾಖೆಯಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ” ಎಂದು ಮಾಹಿತಿ ನೀಡಿದರು.

“ಹತ್ತನೇ ಪಂಚವಾರ್ಷಿಕ ಯೋಜನೆ ಅವಧಿಯಲ್ಲಿ ನಾಲ್ಕು ಆಹಾರ ಪಾರ್ಕ್‌ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ. ಅದರಂತೆ, ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಅಕ್ಷಯ ಫುಡ್‌ ಪಾರ್ಕ್‌, ಬಾಗಲಕೋಟೆಯಲ್ಲಿ ಗ್ರೀನ್‌ ಫುಡ್‌ ಪಾರ್ಕ್‌, ಕೋಲಾರ ಜಿಲ್ಲೆ ಮಾಲೂರಿನಲ್ಲಿ ಇನ್ನೋವಾ ಅಗ್ರಿ ಬಯೋಪಾರ್ಕ್‌ ಹಾಗೂ ಕಲಬುರ್ಗಿ ಜಿಲ್ಲೆಯ ಜೇವರ್ಗಿಯಲ್ಲಿ ಫುಡ್‌ ಪಾರ್ಕ್‌ ಸ್ಥಾಪಿಸಲಾಗಿದೆ” ಎಂದು ಹೇಳಿದರು.

“ಈಗ ಉದ್ದೇಶಿತ ಯೋಜನೆಯನ್ವಯ ಪ್ರತಿ ಆಹಾರ ಪಾರ್ಕ್ ಸ್ಥಾಪನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ 50:50 ಅನುಪಾತದಲ್ಲಿ ಒಟ್ಟು 800 ಲಕ್ಷ ರೂ. ಸಹಾಯ ಧನ/ಬಡ್ಡಿ ರಹಿತ ಅಸುರಕ್ಷಿತ ಸಾಲದ ರೂಪದಲ್ಲಿ ಮಂಜೂರು ಮಾಡಿರುತ್ತದೆ” ಎಂದು ಕೃಷಿ ಸಚಿವರು ಹೇಳಿದರು.

“ಘಟಕ ಪ್ರಾರಂಭಿಸಲು ಆಸಕ್ತಿ ವಹಿಸದ ಉದ್ದಿಮೆದಾರರಿಂದ ಕೈಗಾರಿಕಾ ನಿವೇಶನಗಳನ್ನು ಮರು ಹಂಚಿಕೆ ಮಾಡಲು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಸಹಯೋಗದೊಂದಿಗೆ ಕ್ರಮವಹಿಸಲು ಸೂಚಿಸಲಾಗಿದೆ” ಎಂದು ಇದೇ ವೇಳೆ ಸಚಿವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...

SIR ಬದಲು SSR! ಪ್ರತಿಭಟನೆ, ಉಳಿದಿಬ್ಬರು ಚುನಾವಣಾ ಆಯುಕ್ತರ ತಕರಾರುಗಳಿಗೆ ಕಡೆಗೂ ಮಣಿಯಿತೇ ಗ್ಯಾನೇಶ್- ಮೋದಿ- ಶಾ ತ್ರಿವಳಿ?

ತೀವ್ರ ವಿರೋಧ, ಪ್ರತಿಭಟನೆ, ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾದ ಬಳಿಕ...