ರಾಜ್ಯದ ಮಹತ್ವಾಕಾಂಕ್ಷೆಯ ‘ಎತ್ತಿನಹೊಳೆ’ ಕುಡಿಯುವ ನೀರಿನ ಯೋಜನೆ ಉದ್ಘಾಟನೆಗೆ ಕೂಡಿಬಂತು ಕಾಲ

Date:

ದೊಡ್ಡ ಮಟ್ಟದಲ್ಲಿ ಪರ ಹಾಗೂ ವಿರೋಧ ಚರ್ಚೆಗೆ ಗ್ರಾಸವಾಗಿದ್ದ ರಾಜ್ಯದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆ ಜಾರಿಗೆ ಕೊನೆಗೂ ಮುಹೂರ್ತ ಕೂಡಿ ಬಂದಿದೆ. ಶುಕ್ರವಾರ (ಸೆ.6)ದಂದು ಹಂತ -1 ರ ಉದ್ಘಾಟನೆ ನಡೆಯಲಿದೆ.

- Advertisement -

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ, ಪಶ್ಚಿಮಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆಹೊಳೆ, ಕೇರಿಹೊಳೆ ಮತ್ತು ಹೊಂಗದಹಳ್ಳದಿಂದ ಮುಂಗಾರು ಮಳೆ ಅವಧಿಯಲ್ಲಿ (139 ದಿನಗಳು) 24.01 ಟಿ.ಎಂ.ಸಿ ಪ್ರಮಾಣದ ಪ್ರವಾಹದ ನೀರನ್ನು 07 ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರಿನ ಬರಪೀಡಿತ 29 ತಾಲ್ಲೂಕಿನ 38 ಪಟ್ಟಣ ಪ್ರದೇಶದ ಹಾಗೂ 6657 ಗ್ರಾಮಗಳ ಸುಮಾರು 75.59 ಲಕ್ಷ ಜನರಿಗೆ ಮತ್ತು ಜಾನುವಾರುಗಳಿಗೆ 14.056 ಟಿ.ಎಂ.ಸಿ ಕುಡಿಯುವ ನೀರನ್ನು ಒದಗಿಸುವ ಯೋಜನೆ ಇದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಜೊತೆಗೆ 05 ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಹಾಸನ ಹಾಗೂ ತುಮಕೂರು ವ್ಯಾಪ್ತಿಯಲ್ಲಿ ಬರುವ 527 ಕೆರೆಗಳಿಗೆ 9.953 ಟಿ.ಎಂ.ಸಿ ಪ್ರಮಾಣದ ನೀರನ್ನು ಕೆರೆಗಳ ಸಾಮರ್ಥ್ಯದ ಶೇ. 50% ರಷ್ಟು ತುಂಬಿಸಿ ಅಂತರ್ಜಲ ಮರುಪೂರಣ ಮಾಡುವ ರೂ.23,251.66 ಕೋಟಿಗಳ ಮೊತ್ತದ ಉದ್ದೇಶಿತ ರಾಜ್ಯದ ಮಹತ್ವಾಕಾಂಕ್ಷೆಯ ಕುಡಿಯುವ ನೀರಿನ ಯೋಜನೆಯಾಗಿದೆ.

2014ರಲ್ಲಿ ಆರಂಭಗೊಂಡ ಯೋಜನೆಯ ಮೊದಲನೇ ಹಂತದ ಏತ ಮತ್ತು ವಿದ್ಯುತ್ ಪೂರೈಕೆಯ ಕಾಮಗಾರಿಗಳ ಅನುಷ್ಠಾನದಲ್ಲಿ ಬಹುದಿನಗಳಿಂದ ಉದ್ಭವಿಸಿದ್ದ ಅಡಚಣೆಗಳನ್ನು ನಿವಾರಿಸಿಕೊಂಡು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಪ್ರಸ್ತುತ ವಿಯರ್-1,2,4,5,6,7&8 ರಿಂದ ಒಟ್ಟಾರೆ 79.50 ಕ್ಯುಮೆಕ್ಸ್ (2800.00 ಕ್ಯೂಸೆಕ್ಸ್) ನೀರನ್ನೆತ್ತಿ ವಿತರಣಾ ತೊಟ್ಟಿ-3 ರವರೆಗೆ (Delivery Chamber-3) ಪೂರೈಸಿ ತದನಂತರ ವಿತರಣಾ ತೊಟ್ಟಿ-3 ರಿಂದ ನೀರನ್ನೆತ್ತಿ ವಿತರಣಾ ತೊಟ್ಟಿ-4 ರ ಮುಖಾಂತರ ಗುರುತ್ವ ಕಾಲುವೆಗೆ 79.50 ಕ್ಯುಮೆಕ್ಸ್ (2800.೦೦ ಕ್ಯೂಸೆಕ್ಸ್) ನೀರನ್ನು ಹರಿಸಲು ಯೋಜಿಸಲಾಗಿದೆ.

ಗುರುತ್ವ ಕಾಲುವೆಯು ಒಟ್ಟು 252.61 ಕಿ.ಮೀ ಉದ್ದವಿದ್ದು, ಈ ಪೈಕಿ 164.47 ಕಿ.ಮೀ ಪೂರ್ಣಗೊಂಡಿದ್ದು, 25.87 ಕಿ.ಮೀ ಪ್ರಗತಿಯಲ್ಲಿರುತ್ತದೆ. ಗುರುತ್ವ ಕಾಲುವೆಯ ಸ:೦.೦೦ ಕಿ.ಮೀ ಯಿಂದ ಸ:42.೦೦ ಕಿ.ಮೀ ವರಗಿನ ಕಾಮಗಾರಿಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಂಡಿದ್ದು, ನಂತರದ ಕಾಮಗಾರಿಗಳು ಅರಣ್ಯ ಮತ್ತು ಭೂಸ್ವಾಧೀನ ಸಮಸ್ಯೆಯಿಂದಾಗಿ ಪೂರ್ಣಗೊಂಡಿರದ ಕಾರಣ, ಗುರುತ್ವ ಕಾಲುವೆಯ ಸ:32.50 ಕಿ.ಮೀ ನಲ್ಲಿರುವ ನಾಲಾ ಎಸ್ಕೇಪ್ ಮೂಲಕ ಸುಮಾರು 132.50 ಕಿ.ಮೀ ದೂರದಲ್ಲಿರುವ ವಾಣಿ ವಿಲಾಸ ಸಾಗರಕ್ಕೆ ವೇದಾ ವ್ಯಾಲಿಯ ಮುಖಾಂತರ ತಾತ್ಕಾಲಿಕವಾಗಿ 1500 ಕ್ಯೂಸೆಕ್ಸ್ ನೀರನ್ನು ಹರಿಸಲು ಕಾರ್ಯಕ್ರಮ ರೂಪಿಸಲಾಗಿದೆ.

ಇದರನ್ವಯ ನವೆಂಬರ್-2023 ರಿಂದಲೇ ಪೂರ್ವ ಪರಿಕ್ಷಾರ್ಥ ಚಾಲನಾ ಚಟುವಟಿಕೆಗಳನ್ನು ಕೈಗೊಳ್ಳಲಾಗಿದ್ದು, ವಿಯರ್-4-5 ರಿಂದ ನೀರನ್ನೆತ್ತಿ ವಿತರಣಾ ತೊಟ್ಟಿ -3 ರವರೆಗೆ ನೀರನ್ನು ಪೂರೈಸಲಾಗಿತ್ತು. ಪ್ರಸ್ತುತ ಇವುಗಳ ಜೊತೆ ವಿಯರ್-1, 2&8 ರಿಂದಲೂ ಸಹ ನೀರನ್ನೆತ್ತಿ ವಿತರಣಾ ತೊಟ್ಟಿ – 4ರವರೆಗೆ ಪೂರೈಸಿ, ಅಲ್ಲಿಂದ ಗುರುತ್ವ ಕಾಲುವೆಗೆ ದಿನಾಂಕ:26-08-2024 ರಂದು ಯಶಸ್ವಿಯಾಗಿ ನೀರು ಹರಿಸಲಾಗಿದ್ದು, ಗುರುತ್ವ ಕಾಲುವೆಯಲ್ಲಿನ ನೀರು ಸ:32.50 ಕಿ.ಮೀ ನಲ್ಲಿರುವ ನಾಲಾ ಎಸ್ಕೇಪ್ ಮೂಲಕ ವೇದಾ ವ್ಯಾಲಿಯನ್ನು ಪ್ರವೇಶಿಸಿ ಈಗಾಗಲೇ ಹಳೇಬೀಡು ಕೆರೆಯು ತುಂಬಿ ಕೋಡಿ ಬಿದ್ದು ತದನಂತರ ಬೆಳವಾಡಿ ಕೆರೆಯನ್ನು ಪ್ರವೇಶಿಸಿದ್ದು ಇಲ್ಲಿಂದ ವಾಣಿ ವಿಲಾಸ ಸಾಗರದತ್ತ ನೀರು ಹರಿಯಲಿದೆ.

ಎತ್ತಿನಹೊಳೆ ಯೋಜನೆಯ ಜಲಾನಯನ ಪ್ರದೇಶದಲ್ಲಿ ನಿರ್ಮಿಸಲಾಗಿರುವ 8 ವಿಯರ್‌ಗಳ ಹತ್ತಿರ ನೀರಿನ ಹರಿವನ್ನು ನಿಖರವಾಗಿ ಅಳೆಯುವ ಉದ್ದೇಶದಿಂದ ಜರ್ಮನ್ ತಂತ್ರಜ್ಞಾನವನ್ನೊಳಗೊಂಡ Telemetry ವ್ಯವಸ್ಥೆಯನ್ನು 2018 ರಲ್ಲಿ ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನ ಮುಂಗಾರಿನ ಹಂಗಾಮಿನಲ್ಲಿ ಜೂನ್-1 ರಿಂದ ಆಗಸ್ಟ್-31 ರವರೆಗೆ 14.13 ಟಿ.ಎಂ.ಸಿ ನೀರು ದಾಖಲಾಗಿರುತ್ತದೆ. ಸದರಿ ಯೋಜನೆಯನ್ನು 2026-27ನೇ ಸಾಲಿನಲ್ಲಿ ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಕಾರ್ಯಕ್ರಮ ರೂಪಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...