ಮುಂದಿನ ಮೂರು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements

ಬೆಂಗಳೂರು ಗ್ರಾಮಾಂತರ ಪ್ರದೇಶಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸಲು ಮುಂದಿನ ಮೂರು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು(ಡಿ.3) ಬೀರೇಶ್ವರ ಸ್ವಾಮಿ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ ವತಿಯಿಂದ ಶ್ರೀ ಬೀರೇಶ್ವರ ಸಮುದಾಯ ಭವನ ಮತ್ತು ಪ್ರಾರ್ಥನಾ ಮಂದಿರ ಉದ್ಘಾಟಿಸಿ ಮಾತನಾಡಿದರು.

‘ನೆಲಮಂಗಲ ಪಟ್ಟಣಕ್ಕೆ ಕುಡಿಯುವ ನೀರಿನ ಬೇಡಿಕೆ ಇದೆ. ನೆಲಮಂಗಲ ಸುತ್ತಮುತ್ತಲ ಪ್ರದೇಶಗಳ ಕೆರೆಗಳನ್ನು ತುಂಬುವ ವೃಷಭಾವತಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. ಈ ಯೋಜನೆಯಿಂದ ನೀರಿನ ಅಂತರ್ಜಲ ಮಟ್ಟ ಹೆಚ್ಚಲಿದೆ. ಮೆಟ್ರೋ ಸಂಪರ್ಕವನ್ನು ನೆಲಮಂಗಲದವರೆಗೂ ವಿಸ್ತರಿಸುವ ಯೋಜನೆ ಸರ್ಕಾರ ಪರಿಶೀಲಿಸಲಿದೆ. ನೆಲಮಂಗಲದ ಒಳಚರಂಡಿ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಗೊಳಿಸಲಾಗುವುದು ಎಂದರು.

Advertisements

‘ಕುರುಬರು ಸಾಮಾನ್ಯವಾಗಿ ಶೈವ ಪಂಥದವರು. ಬೀರೇಶ್ವರ ಕುರುಬ ಸಮುದಾಯದ ಕುಲದೇವರು. ಇವರು ದೈವಭಕ್ತರು. ದೇವನೊಬ್ಬ ನಾಮ ಹಲವು. ನಾವು ಇತರರಿಗೆ ಒಳಿತು ಬಯಸಿದರೆ ಭಗವಂತನೂ ಒಳ್ಳೆಯದನ್ನೇ ಮಾಡುತ್ತಾನೆ. ಮನುಷ್ಯ ಮತ್ತೊಮ್ಮ ಮನುಷ್ಯನನ್ನು ದ್ವೇಷಿಸಬಾರದು’ ಎಂದು ಸಿಎಂ ಸಲಹೆ ನೀಡಿದರು.

‘ಯಾವುದೇ ಜಾತಿ ಮತ ಧರ್ಮದ ಸೇರಿದ ಮನುಷ್ಯರನ್ನು ನಾವು ಗೌರವದಿಂದ ಕಾಣುವುದೇ, ದೇವರಿಗೆ ಅರ್ಪಿಸುವ ಗೌರವ. ಕನಕದಾಸರು, ಸಮಾಜದ ತಾರತಮ್ಯ ತೊಲಗಿ, ಎಲ್ಲರೂ ಮನುಷ್ಯರಾಗಿ ಬಾಳಬೇಕು ಎಂದು ಬಯಸಿದ್ದರು. ಜಾತಿಯ ಎಲ್ಲೆಯ ಮೀರಿ ಸಮಾಜ ಬೆಳೆಯಬೇಕು. ಕನಕದಾಸರು ಒಂದು ಜಾತಿಗೆ ಸೀಮತವಾಗದೇ ವಿಶ್ವ ಮಾನವ ಎಂದು ಕರೆಸಿಕೊಂಡರು. ನಾವೆಲ್ಲರೂ ವಿಶ್ವಮಾನವರಾಗುವ ದಾರಿಯಲ್ಲಿ ನಡೆಯಬೇಕು. ಕುವೆಂಪುರವರು ಸರ್ವಜನಾಂಗದ ಶಾಂತಿಯ ತೋಟದಂತಹ ಸಮಾಜವನ್ನು ನಿರ್ಮಿಸಬೇಕು’ ಎಂದರು.

‘ಮುಖ್ಯಮಂತ್ರಿಯಾಗಿ ಎಲ್ಲ ಧರ್ಮದ ಬಡವರಿಗೆ ಆರ್ಥಿಕ , ಸಾಮಾಜಿಕ ಶಕ್ತಿಯನ್ನು ತುಂಬುವುದು ನನ್ನ ಗುರಿಯಾಗಿದೆ. ಬಡವರಿಗೆ ಅಕ್ಕಿ, ಉಚಿತ ವಿದ್ಯುತ್, ಶಕ್ತಿ ಯೋಜನೆ,ಗೃಹಲಕ್ಷ್ಮಿ ಯೋಜನೆಗಳು ಯಾವುದೇ ಜಾತಿಧರ್ಮಕ್ಕೆ ಸೀಮಿತವಾಗಿಲ್ಲ. 1.14 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದಾರೆ’ ಎಂದು ತಿಳಿಸಿದರು.

‘ಗ್ಯಾರಂಟಿ ಯೋಜನೆಗಳಿಂದ ಜನರ ಕೈಗೆ ಬರುವ ದುಡ್ಡು, ಅವರ ಇತರೆ ಅವಶ್ಯಕತೆಗಳನ್ನು ಪೂರೈಸಿ, ಆರ್ಥಿಕತೆ ಹೆಚ್ಚುತ್ತದೆ. ಕೇವಲ ಶ್ರೀಮಂತರಲ್ಲದೇ, ಬಡವರು ಊಟಮಾಡುವಂತಾಗಬೇಕು, ಕರ್ನಾಟಕ ಹಸಿವುಮುಕ್ತ ರಾಜ್ಯವಾಗಬೇಕು. 1.30 ಕೋಟಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆಗಳಿಂದ ಲಾಭವಾಗಿದೆ. ಸಮಾಜ ನಿಂತ ನೀರಾಗದೆ ಬದಲಾವಣೆಯಾಗಬೇಕು. ಸಮಾಜಕ್ಕೆ ಚಲನೆ ದೊರೆತಾಗ ಆರ್ಥಿಕತೆ ಚುರುಕಾಗುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X