ಜೈಲಲ್ಲಿದ್ದರೂ ಹಾಸನದ ಅಭಿವೃದ್ಧಿಯದ್ದೇ ಚಿಂತೆ: ರೇವಣ್ಣ ಭೇಟಿ ಬಳಿಕ ಜಿ ಟಿ ದೇವೇಗೌಡ ಹೇಳಿಕೆ

Date:

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿರುವ ಮಾಜಿ ಸಚಿವ ಎಚ್‌ ಡಿ ರೇವಣ್ಣ ಅವರನ್ನು ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷ ಜಿ ಟಿ ದೇವೇಗೌಡ ಇಂದು ಭೇಟಿ ಮಾಡಿದ್ದಾರೆ. ಭೇಟಿಯ ವೇಳೆ ರೇವಣ್ಣ ಕಣ್ಣೀರು ಹಾಕಿದ್ದಾರೆ ಎಂದು ದೇವೇಗೌಡ ತಿಳಿಸಿದ್ದಾರೆ.

ರೇವಣ್ಣ ಭೇಟಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಿ ಟಿ ದೇವೇಗೌಡ, “ಏನೂ ತಪ್ಪು ಮಾಡದೇ ಪ್ರಕರಣದಲ್ಲಿ ಸಿಲುಕಿಸಿ, ಜೈಲಿಗೆ ಹಾಕಿದ್ದಾರೆ ಎಂಬ ನೋವಿನಲ್ಲಿ ರೇವಣ್ಣ ಹತ್ತು ನಿಮಿಷಗಳ ಕಾಲ ಕಣ್ಣೀರು ಹಾಕಿದರು” ಎಂದು ತಿಳಿಸಿದರು.

“ರೇವಣ್ಣ ಜೈಲಿಗೆ ಹೋದ ದಿನದಿಂದ ಬಂದಿರಲಿಲ್ಲ. ಅವರ ಆರೋಗ್ಯ ವಿಚಾರಿಸಲು ಬರಬೇಕೆಂದು ಮೂರು ದಿನದಿಂದ ಮನಸ್ಸಲ್ಲಿತ್ತು. ಭಾನುವಾರ ರಜೆ, ಬಿಡೋದಿಲ್ಲ ಅಂತ ಹೇಳಿದ್ದರು. ಅದಕ್ಕೆ ಇಂದು ಮಾತನಾಡಲು ಬಂದಿದ್ದೇನೆ. ಅವರು ಆರಾಮವಾಗಿ ಕುಳಿತಿದ್ದು, ಜೊತೆಯಲ್ಲಿ ಚಹಾ ಕುಡಿದೆವು. ಹಳೆ ವಿಚಾರಗಳನ್ನೆಲ್ಲ ಮೆಲುಕು ಹಾಕಿದರು. ಜೈಲಲ್ಲಿದ್ದರೂ ಈಗಲೂ ಕೂಡ ಹಾಸನ ಅಭಿವೃದ್ಧಿ ಕಾರ್ಯಕ್ರಮಗಳದ್ದೇ ಚಿಂತೆ” ಎಂದು ಜಿ ಟಿ ದೇವೇಗೌಡ ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರೇವಣ್ಣರಿಗೆ ಒಂದೇ ಯೋಚನೆ, ನಾನೇನೂ ತಪ್ಪು ಮಾಡಿದ್ದೀನಿ ಎಂದು ಕೇಳಿದರು. ಸಂತ್ರಸ್ತ ಮಹಿಳೆ ಜೊತೆ ಮಾತನಾಡಿ ಆರು ವರ್ಷವಾಗಿದೆ. ನನ್ನನ್ನು ಈ ಪ್ರಕರಣದಲ್ಲಿ ಸೇರಿಸಿ ಹೀಗೆ ಮಾಡಿದ್ದಾರೆ. ನಾನು ತಪ್ಪು ಮಾಡಿದ್ದಿದ್ದರೆ ಶಿಕ್ಷೆ ಕೊಟ್ಟರೆ ಅನುಭವಿಸಬಹುದಿತ್ತು. ಏನೂ ತಪ್ಪು ಮಾಡದೇ ಜೈಲಿಗೆ ಹಾಕಿದ್ದಾರಲ್ಲಾ ಎಂಬ ಕೊರಗು ರೇವಣ್ಣನಿಗೆ ಕಾಡುತ್ತಿದೆ. ಅದನ್ನು ನೆನೆಸಿಕೊಂಡು ದುಃಖಪಡುತ್ತಿದ್ದಾರೆ ಪ್ರಜ್ವಲ್ ರೇವಣ್ಣ ವಿಚಾರವಾಗಿ ಯಾವುದೇ ಚರ್ಚೆ ಮಾಡಲಿಲ್ಲ. ರೇವಣ್ಣ ಕೂಡ ಪ್ರಜ್ವಲ್ ಬಗ್ಗೆ ಏನೂ ಹೇಳಲಿಲ್ಲ” ಎಂದರು.

ಇದನ್ನು ಓದಿದ್ದೀರಾ? ಸಂತ್ರಸ್ತೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್ ಡಿ ರೇವಣ್ಣಗೆ ಜಾಮೀನು ಮಂಜೂರು

ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಕಲಗೂಡು ಜೆಡಿಎಸ್ ಶಾಸಕ ಎ ಮಂಜು ಬಗ್ಗೆ ಪ್ರತಿಕ್ರಿಯೆ ನೀಡಿದ ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷ, “ಎಲ್ಲವೂ ಕೂಡ ತನಿಖೆ ಮೂಲಕ ಎಸ್ಐಟಿ ಪತ್ತೆ ಮಾಡುತ್ತಾರೆಂದು ಸಿಎಂ ಬೆನ್ನು ತಟ್ಟಿಕೊಂಡಿದ್ದಾರೆ. ಸಿಎಂ ಹೇಳಿದ್ದಾರೆ, ನಮಗೂ ಕೂಡ ನಂಬಿಕೆ ಬಂದಿದೆ. ಪೆನ್‌ಡ್ರೈವ್ ರಿಲೀಸ್ ಮಾಡಿದವರ ಬಗ್ಗೆ ತನಿಖೆ ಪ್ರಾರಂಭ ಮಾಡಿದ್ದಾರೆ. ಎಲ್ಲರದೂ ಹೊರಗಡೆ ಬರುತ್ತೆ. ಸ್ವಲ್ಪ ದಿನ ಕಾಯಬೇಕು” ಎಂದು ಹೇಳಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಶಕ್ತಿ’ ಯೋಜನೆಯಿಂದ ಧರ್ಮಸ್ಥಳಕ್ಕೆ ಭಕ್ತರ ಸಂಖ್ಯೆ ಹೆಚ್ಚಳ; ಸಿಎಂ, ಡಿಸಿಎಂ ಸಂತಸ

ಸರ್ಕಾರದ 'ಶಕ್ತಿ' ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ...

ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ, ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ: ಸಚಿವ ಕೆ ಎನ್ ರಾಜಣ್ಣ

"ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ, ನಾನು ಮಂತ್ರಿ ಸ್ಥಾನಕ್ಕೆ ರಾಜೀನಾಮೆ...

‘ಈ ದಿನʼ ಗ್ರೌಂಡ್‌ ರಿಪೋರ್ಟ್‌ 3 | ವಿಡಿಯೊ ಪ್ರಕರಣ; ಹಲವು ಮಹಿಳೆಯರ ರಾಜಕೀಯ ಮಹತ್ವಾಕಾಂಕ್ಷೆ ಮಣ್ಣುಪಾಲು

ಹಾಸನದ ಸಂಸದನ ಕಾಮಕಾಂಡ ಬಯಲಾಗುತ್ತಿದ್ದಂತೆ ಆ ಪಕ್ಷದ ಹಲವು ನಾಯಕಿಯರ ರಾಜಕೀಯ...

ಬೆಂಗಳೂರು | ಐಸಿಯುನಲ್ಲಿದ್ದ ರೋಗಿಗೆ ರಕ್ತ ಬರುವ ಹಾಗೆ ಥಳಿಸಿದ ಕೆ.ಸಿ.ಜನರಲ್ ಆಸ್ಪತ್ರೆ ಸಿಬ್ಬಂದಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ...