ನೂರು ಎಫ್​ಐಆರ್​ ಹಾಕಿದರೂ ನನಗೆ ಕ್ಲೀನ್​ಚಿಟ್ ಸಿಗಲಿದೆ: ಕೆ ಎಸ್‌ ಈಶ್ವರಪ್ಪ

Date:

ದೇಶದ್ರೋಹಿ ಹೇಳಿಕೆ ನೀಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸುವೆ. ನನ್ನ ವಿರುದ್ಧ ಇಂತಹ ನೂರು ಎಫ್​ಐಆರ್​ ಹಾಕಿದರು ನಾನು ಹೆದರಲ್ಲ ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಹೇಳಿದರು.

ಶಿವಮೊಗ್ಗದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ” ದೇಶದ್ರೋಹಿ ಹೇಳಿಕೆ ಕೊಡುವವರ ಮೇಲೆ ಕೇಸ್ ಹಾಕಿಲ್ಲ. ಆದರೆ ನನ್ನ ಮೇಲೆ ಕೇಸ್ ಹಾಕಿದ್ದಾರೆ. ರಾಷ್ಟ್ರದ್ರೋಹಿಗಳನ್ನ ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ತರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದೇನೆ” ಎಂದರು.

“ನನ್ನ ಹೇಳಿಕೆ ಇಟ್ಟುಕೊಂಡು ಕಾಂಗ್ರೆಸ್​​ ಗೊಂದಲ ಸೃಷ್ಟಿಸುತ್ತಿದೆ. ಸಂಸದ ಡಿ ಕೆ ಸುರೇಶ್‌ ಅವರಿಗೆ ಮೊದಲು ನೋಟಿಸ್ ಕೊಡಲಿ. ನಾನು ಎಲ್ಲೂ ಸಂಸದ ಡಿಕೆ ಸುರೇಶ್ ಅವರಿ​ಗೆ ಗುಂಡಿಕ್ಕಿ ಕೊಲ್ಲಿ ಅಂತ ಹೇಳಿಲ್ಲ. ನನಗೆ ನೋಟಿಸ್ ಬಂದಿದೆ, ನಾನು ಉತ್ತರ ಕೊಡುತ್ತೇನೆ. ಪ್ರಕರಣದಲ್ಲಿ ನನಗೆ ಕ್ಲೀನ್​ಚಿಟ್ ಸಿಗಲಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಆರ್​​ಎಸ್ಎಸ್ ಬಗ್ಗೆ ನೀಡಿದ ಹೇಳಿಕೆ ಸಿಎಂ ವಾಪಸ್​ ಪಡೆಯಲಿ. ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮರು “ಎಂದರು.

ಪ್ರಿಯಾಂಕ್​ ಎಂಬ ಕೆಟ್ಟ ಹುಳು ಹುಟ್ಟಿದ್ದು ವಿಪರ್ಯಾಸ

“ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ​ ಖರ್ಗೆ ಹೊಟ್ಟೆಯಲ್ಲಿ ಪ್ರಿಯಾಂಕ್​ ಎಂಬ ಕೆಟ್ಟ ಹುಳು ಹುಟ್ಟಿದ್ದು ವಿಪರ್ಯಾಸ” ಎಂದು ಇದೇ ವೇಳೆ ನಾಲಿಗೆ ಹರಿಬಿಟ್ಟರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇಸಿಗೆಯಲ್ಲಿ ಉದ್ಯಾನವನಗಳನ್ನು ಹಸಿರಾಗಿಡಲು ಸಂಸ್ಕರಿಸಿದ ನೀರುಣಿಸಲು ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯಲು ನೀರಿಲ್ಲದೇ ಜನ ಪರಡಾಡುವಂತಾಗಿದೆ. ಜತೆಗೆ, ಮರಗಿಡಗಳು...

ರಾಜಕೀಯ ಲಾಭಕ್ಕಾಗಿ ಬಿಜೆಪಿಯವರು ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಿಜೆಪಿಯವರು ತಮ್ಮ ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ" ಎಂದು...

ʼಈದಿನ.ಕಾಮ್ʼ ನ್ಯೂಸ್ ಬೀದರ್ ಸಹಾಯವಾಣಿ ಬಿಡುಗಡೆಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಕಲುಷಿತವಾದ ವಾತಾವರಣದಲ್ಲಿ ಸಮಾಜದ ಉನ್ನತಿಗಾಗಿ ವಸ್ತುನಿಷ್ಠ, ಪ್ರಾಮಾಣಿಕತೆ, ದಕ್ಷತೆ ಹಾಗೂ ನಿರ್ಭಡೆಯಿಂದ...

ಸಿಎಎ ರದ್ದಾಗದಿದ್ದರೆ ಬೃಹತ್ ಹೋರಾಟ; ಅಸ್ಸಾಂ ವಿಪಕ್ಷಗಳ ಎಚ್ಚರಿಕೆ

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಅನುಷ್ಠಾನಗೊಳಿಸದಂತೆ ಅಸ್ಸಾಂನ 16 ಪಕ್ಷಗಳ...