ನೂರು ಎಫ್‌ಐಆರ್‌ ದಾಖಲಾದರೂ ಧೃತಿಗೆಡಲ್ಲ, ಇದೊಂದು ಷಡ್ಯಂತ್ರ: ಹೆಚ್‌ ಡಿ ಕುಮಾರಸ್ವಾಮಿ

Date:

ಐಪಿಎಸ್ ಅಧಿಕಾರಿಯೊಬ್ಬರ ದೂರಿನ ಮೇರೆಗೆ ನನ್ನ ವಿರುದ್ಧ ಪೊಲೀಸರು ದಾಖಲು ಮಾಡಿರುವ ಎಫ್ಐಆರ್ ಹಾಸ್ಯಾಸ್ಪದ, ದುರುದ್ದೇಶಪೂರಿತ. ಇಂತಹ ನೂರು ಎಫ್‌ಐಆರ್‌ಗಳು ದಾಖಲಾದರೂ ನಾವು ಧೃತಿಗೆಡಲ್ಲ ಎಂದು ಕೇಂದ್ರ ಸಚಿವರ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

- Advertisement -

ಚನ್ನಪಟ್ಟಣ ಉಪಚುನಾವಣೆಯ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರ ಪ್ರಚಾರದ ವೇಳೆ ಅಕ್ಕೂರು ಹೊಸಹಳ್ಳಿ ಗ್ರಾಮದಲ್ಲಿ ಲೋಕಾಯುಕ್ತ ಎಸ್‌ಐಟಿಯ ಎಡಿಜಿಪಿ ಚಂದ್ರಶೇಖರ್‌ ದೂರಿನ ಮೇಲೆ ಕುಮಾರಸ್ವಾಮಿ, ನಿಖಿಲ್‌ ಹಾಗೂ ಸುರೇಶ್‌ ಬಾಬು ವಿರುದ್ಧ ಎಫ್‌ಐಆರ್‌ ದಾಖಲಾಗಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಉಪ ಚುನಾವಣೆ ಸಮಯದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಭಾರೀ ಉಮೇದಿನಿಂದ ನಮ್ಮ ವಿರುದ್ಧ ದ್ವೇಷ ಸಾಧನೆ ಮಾಡುತ್ತಿದೆ. ಇದಕ್ಕೆ ನ್ಯಾಯಾಲಯದ ಮೂಲಕವೇ ಉತ್ತರ ಕೊಡುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಎಫ್‌ಐಆರ್ ಪ್ರತಿಯನ್ನು ಓದಿದೆ. ಅದರಲ್ಲಿರುವ ದೂರಿನ ಸಾರಾಂಶವನ್ನೂ ಓದಿದೆ. ಅದು ಸಂಪೂರ್ಣ ಹಾಸ್ಯಾಸ್ಪದ ಹಾಗೂ ದುರದ್ದೇಶಪೂರಿತ ಎನ್ನುವುದು ನನಗೆ ಅರ್ಥವಾಯಿತು. ಅಲ್ಲಿ ದೂರುದಾರರೇ ಹೇಳಿಕೊಂಡಿದ್ದಾರೆ, ಕುಮಾರಸ್ವಾಮಿ ಅವರು ಮಾಧ್ಯಮಗೋಷ್ಠಿ ಮಾಡಿ ನನ್ನ ವಿರುದ್ಧ ಆರೋಪ ಮಾಡಿದರು. ಅದಕ್ಕೆ ಕ್ರಮ ಕೈಗೊಳ್ಳಿ ಎಂದು ಕೇಳಿದ್ದಾರೆ. ನಾನು ಅವರ ಬಗ್ಗೆ ತಪ್ಪು ಮಾಹಿತಿ ನೀಡಿದ್ಧೇನೆ ಎಂದು ಹೇಳಿಕೊಂಡಿದ್ದಾರೆ? ಬೇಕಾದರೆ ನನ್ನ ಮಾಧ್ಯಮಗೋಷ್ಠಿಯ ವಿಡಿಯೋ ನೋಡಿಕೊಳ್ಳಲಿ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಎಡಿಜಿಪಿ ಚಂದ್ರಶೇಖರ್ ದೂರು ಆಧರಿಸಿ ಕುಮಾರಸ್ವಾಮಿ, ನಿಖಿಲ್, ಸುರೇಶ್ ಬಾಬು‌ ವಿರುದ್ಧ ಎಫ್‌ಐಆರ್‌

“ನಾನು ಪ್ರೆಸ್ ಮೀಟ್ ಮಾಡಿದೆ ಎಂದು ಎಫ್ಐಆರ್ ಮಾಡಿಸಿದ್ದಾರೆ. ಹೇಳಿಕೆ ನೀಡಿದರು ಎಂದು ಚನ್ನಪಟ್ಟಣದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಮೇಲೆಯೂ ಎಫ್ಐಆರ್ ಮಾಡಿಸಿದ್ದಾರೆ. ಮುಖ್ಯ ಕಾರ್ಯದರ್ಶಿಗೆ ದೂರು ಕೊಟ್ಟರು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ಮೇಲೆಯೂ ಎಫ್ಐಆರ್ ಮಾಡಿಸಿದ್ದಾರೆ. ಹಾಗಾದರೆ, ಯಾರೂ ಯಾರ ವಿರುದ್ಧವೂ ಮಾತನಾಡಬಾರದು, ದೂರು ನೀಡಬಾರದು ಎಂದು ಕಾನೂನಿನಲ್ಲಿ ಇದೆಯೇ? ನಮ್ಮ ಬಾಯಿ ಮುಚ್ಚಿಸಲು ಇವರಿಂದ ಸಾಧ್ಯವಿಲ್ಲ” ಎಂದು ಕಿಡಿ ಕಾರಿದರು.

“ಇದೊಂದು ಷಡ್ಯಂತ್ರ ಹಾಗೂ ಕುತಂತ್ರದ ಭಾಗ. ಯಾವಾಗ ಚನ್ನಪಟ್ಟಣದಲ್ಲಿ ಇವರ ಮೋಸ ಕುತಂತ್ರ ನಡೆಯಲ್ಲ ಎಂದು ಗೊತ್ತಾಯಿತೋ ಹೊಸ ಕುತಂತ್ರಕ್ಕೆ ಮುಂದಾಗಿದ್ದಾರೆ. ನಮಗೆ ಬಾಬಾ ಸಾಹೇಬ ಅಂಬೇಡ್ಕರ್ ಅವರ ಸಂವಿಧಾನ ಕಾನೂನಿನ ಮೇಲೆ ಗೌರವ ಇದೆ. ಚನ್ನಪಟ್ಟಣದ ಜನರ ಮೇಲೆ ವಿಶ್ವಾಸ ಇದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...