ಕನ್ನಡ ಆಡಳಿತ ಭಾಷೆಯಾಗಿದ್ದರೂ ಇದು ಪಾಲನೆಯಾಗಿಲ್ಲ: ಸಿದ್ದರಾಮಯ್ಯ ಬೇಸರ

Date:

Advertisements
  • ‘ಆಡಳಿತದಲ್ಲಿ ಕನ್ನಡ ಪಾಲನೆಯಾಗದಿರಲು ನಿರ್ಲಕ್ಷ್ಯವೇ ಕಾರಣ’
  • ‘ಕನ್ನಡ ಮಾತನಾಡುವ ವಾತಾವರಣ ಸೃಷ್ಟಿಸುವ ಅಗತ್ಯವಿದೆ’ 

ಕರ್ನಾಟಕದಲ್ಲಿ ಕನ್ನಡವನ್ನು ಮಾತನಾಡುವಂತಹ ವಾತಾವರಣ, ಕನ್ನಡದ ಅನಿವಾರ್ಯತೆಯನ್ನು ಸೃಷ್ಟಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ ಕರ್ನಾಟಕ ಸಂಭ್ರಮ 50-ರ ಲಾಂಛನ ಬಿಡುಗಡೆ ಮಾಡಿ ಮಾತನಾಡಿದರು.

“ನಾವೆಲ್ಲರೂ ಕನ್ನಡಿಗರು, ಕರ್ನಾಟಕದ ಏಕೀಕರಣವಾದಾಗಿನಿಂದ ವಿವಿಧ ಭಾಷೆಗಳನ್ನು ಮಾತನಾಡುವ ಜನರು ಕನ್ನಡ ನಾಡಿನಲ್ಲಿ ನೆಲೆಸಿದ್ದಾರೆ. ಈ ನಾಡಿನಲ್ಲಿ ವಾಸಿಸುವ ಪ್ರತಿಯೊಬ್ಬರೂ ಕೂಡ ಕನ್ನಡ ಭಾಷೆ ಮಾತನಾಡುವುದನ್ನು ಕಲಿಯಬೇಕು. ತಮಿಳುನಾಡು, ಕೇರಳ, ತೆಲಂಗಾಣ, ಉತ್ತರಪ್ರದೇಶ ರಾಜ್ಯಗಳಲ್ಲಿ ಅಲ್ಲಿನ ಭಾಷೆ ಕಲಿಯದೇ ಕನ್ನಡ ಮಾತನಾಡಿಕೊಂಡು ಬದುಕಲು ಸಾಧ್ಯವಿಲ್ಲ. ಆದರೆ ಕರ್ನಾಟಕದಲ್ಲಿ ಕನ್ನಡ ಬಾರದೇ ಇದ್ದರೂ ಬದುಕಬಹುದು. ಇದೇ ನಮ್ಮ ರಾಜ್ಯಕ್ಕೂ ಹಾಗೂ ಪಕ್ಕದ ರಾಜ್ಯಗಳಿಗೂ ಇರುವ ವ್ಯತ್ಯಾಸ” ಎಂದರು.

Advertisements

ಕನ್ನಡದ ವಾತಾವರಣ ನಿರ್ಮಿಸಲು ಸಾಧ್ಯವಾಗಿಲ್ಲ

“ಕರ್ನಾಟಕದ ಏಕೀಕರಣವಾಗಿ 68 ವರ್ಷ ಸಂದರೂ, ರಾಜ್ಯದಲ್ಲಿ ಕನ್ನಡದ ವಾತಾವರಣವನ್ನು ನಿರ್ಮಿಸಲು ಸಾಧ್ಯವಾಗಿಲ್ಲ. ಕನ್ನಡಿಗರು ನಮ್ಮ ಭಾಷೆಯನ್ನು ಬೇರೆಯವರಿಗೆ ಕಲಿಸುವ ಬದಲು, ಅವರ ಭಾಷೆಯನ್ನೇ ನಾವು ಮೊದಲು ಕಲಿಯುತ್ತಿದ್ದೇವೆ. ಕನ್ನಡಿಗರ ಈ ವರ್ತನೆ ಭಾಷಾ ಬೆಳವಣಿಗೆ ಹಾಗೂ ನಾಡು, ನುಡಿ, ಸಂಸ್ಕೃತಿ ಅಭಿವೃದ್ಧಿಯ ದೃಷ್ಟಿಯಿಂದ ಒಳ್ಳೆಯದಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎರಡು ದೇಶಗಳ ಸ್ಥಾಪನೆ- ಇಸ್ರೇಲ್ ಪ್ಯಾಲೆಸ್ತೀನಿ ಕದನಕ್ಕೆ ಕಾಯಂ ಪರಿಹಾರ

ಆಡಳಿತದಲ್ಲಿ ಕನ್ನಡ ಪಾಲನೆ 

“ನಮ್ಮಲ್ಲಿ ಇಂಗ್ಲಿಷ್‌ ವ್ಯಾಮೋಹವೂ ಹೆಚ್ಚಾಗಿದೆ. ನನ್ನ ಮಂತ್ರಿಮಂಡಲದ ಹಲವರು ಹಾಗೂ ವಿಶೇಷವಾಗಿ ಅಧಿಕಾರಿಗಳು ಕಡತಗಳಲ್ಲಿ ಇಂಗ್ಲಿಷ್ ನಲ್ಲಿಯೇ ಟಿಪ್ಪಣಿ ಬರೆಯುತ್ತಾರೆ. ಕೇಂದ್ರ ಸರ್ಕಾರಕ್ಕೆ ಹಾಗೂ ಇತರೆ ರಾಜ್ಯಗಳಿಗೆ ಬರೆಯುವ ಸಂದರ್ಭದಲ್ಲಿ ಇಂಗ್ಲಿಷ್‌ ಬಳಸಬಹುದೇ ಹೊರತು, ಇನ್ನುಳಿದಂತೆ ಕನ್ನಡದಲ್ಲಿಯೇ ವ್ಯವಹರಿಸಬೇಕು. ಬಹಳ ವರ್ಷಗಳಿಂದ ಕನ್ನಡವನ್ನು ಆಡಳಿತ ಭಾಷೆಯಾಗಿದ್ದರೂ ಕೂಡ, ಇದು ಪಾಲನೆಯಾಗದಿರುವುದಕ್ಕೆ ನಿರ್ಲಕ್ಷ್ಯವೂ ಕಾರಣವಿರಬಹುದು” ಎಂದು ಹೇಳಿದರು.

ಹಿಂದಿನ ಸರ್ಕಾರ ಆಚರಿಸಬೇಕಿತ್ತು

ನವೆಂಬರ್ 01, 2023 ಕ್ಕೆ 50 ವರ್ಷಗಳು ತುಂಬುತ್ತದೆ. ವಾಸ್ತವವಾಗಿ ಕಳೆದ ವರ್ಷವೇ ಇದನ್ನು ಆಚರಿಸಬೇಕಿತ್ತು. ಆದರೆ ಹಿಂದಿನ ಸರ್ಕಾರದವರು ಮಾಡಿಲ್ಲ. ಈ ಬಾರಿಯ ಬಜೆಟ್ ಮಂಡಿಸುವ ಸಂದರ್ಭದಲ್ಲಿ ಇದೊಂದು ಮಹತ್ವದ ಘಟನೆ. ಇದನ್ನು ವಿಶೇಷವಾಗಿ ಆಚರಿಸದೇ ಹೋದರೆ ಲೋಪವಾಗುತ್ತದೆ ಎಂದು ತೀರ್ಮಾನಿಸಿ, ಬಜೆಟ್ ನಲ್ಲಿ ಘೋಷಣೆ ಮಾಡಿ 2023 ನವೆಂಬರ್ 1 ರಿಂದ 2024 ನವೆಂಬರ್ 1 ರವರೆಗೆ ವರ್ಷವಿಡೀ ಕರ್ನಾಟಕ ಸಂಭ್ರಮವನ್ನು ಆಚರಿಸಲಾಗುತ್ತಿದೆ.

ಲಾಂಛನದ ವಿನ್ಯಾಸಕ್ಕೆ ಮೆಚ್ಚುಗೆ

ಕರ್ನಾಟಕ ಸಂಭ್ರಮ- 50 ಲಾಂಛನವನ್ನು ಬಿಡುಗಡೆ ಮಾಡಿದ್ದು, ಅದನ್ನು ವಿನ್ಯಾಸಗೊಳಿಸಿದ ರವಿರಾಜ್ ಜಿ.ಹುಲಗೂರು ಅವರನ್ನು ಅಭಿನಂದಿಸಿದರು. ಲಾಂಚನದ ವಿನ್ಯಾಸ ಉತ್ತಮವಾಗಿದೆ ಎಂದು ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X