ಕಾಂಗ್ರೆಸ್ ಸರ್ಕಾರ ಹನಿಮೂನ್‌ ಅವಧಿ ಮುಗಿಸಿದ್ದರೂ ಅಭಿವೃದ್ಧಿ ಕೆಲಸ ಮಾತ್ರ ಶೂನ್ಯ: ವಿಜಯೇಂದ್ರ ಟೀಕೆ

Date:

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು‌ ಒಂದು ವರ್ಷ ಪೂರೈಸಿದೆ. ಒಂದು ಅರ್ಥದಲ್ಲಿ ರಾಜ್ಯ ಸರ್ಕಾರದ ಹನಿಮೂನ್‌ ಅವಧಿ ಮುಗಿಸಿದೆ. ಆದರೆ, ಅಭಿವೃದ್ಧಿ ಕೆಲಸ ಮಾತ್ರ ಶೂನ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದರು.

- Advertisement -

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಕಳೆದ ಒಂದು ವರ್ಷದಲ್ಲಿ ಯಾವ ಸಚಿವ, ಶಾಸಕರು ಸಹ ಗುದ್ದಲಿ ಪೂಜೆ ಮಾಡಲಿಲ್ಲ. ಹೊಸ ಅಭಿವೃದ್ಧಿ ಕೆಲಸ‌ ಮಾಡಲಿಲ್ಲ” ಎಂದು ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಬರ ಪರಿಹಾರ ವಿತರಣೆ ಸಮರ್ಪಕವಾಗಿ ಆಗಿಲ್ಲ. ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಂದ್ರು ರೈತರಿಗೆ ಹಣ ನೀಡುತ್ತಿಲ್ಲ. ಟೆಕ್ನಿಕಲ್ ಕಾರಣ ಹೇಳಿ ಎಲ್ಲ ರೈತರಿಗೆ ಪರಿಹಾರ ನೀಡಿಲ್ಲ. ಕಣ್ಣು, ಕಿವಿ, ಹೃದಯ ಮೂರೂ ಇಲ್ಲದ `ಕೈ’ ಸರ್ಕಾರ ಇದು. ಇಲ್ಲಿ ಸಿಎಂ ಮಾತಿಗೂ ಕಿಮ್ಮತ್ತಿಲ್ಲ” ಎಂದು ಟೀಕಿಸಿದರು.

ಕಾಂಗ್ರೆಸ್ ಭ್ರಷ್ಟಾಚಾರ ಪಿತಾಮಹ

“ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ‌ನಿಗಮದಲ್ಲಿ ರೂ. 85 ಕೋಟಿ ರೂಪಾಯಿ ಹಗರಣ ನಡೆದಿದೆ. ಒಬ್ಬ ಎಂಜಿನಿಯರ್ ಸುಸೈಡ್ ಮಾಡಿಕೊಂಡಿದ್ದಾನೆ. ಎಲ್ಲಿ ಹೋಯಿತು ಕಾಂಗ್ರೆಸ್‌ ಭ್ರಷ್ಟಾಚಾರ ತಡೆ ನಿಲುವು. ಭ್ರಷ್ಟಾಚಾರದ ಪಿತಾಮಹ ಯಾರೆಂದ್ರೆ ಅದು ಕಾಂಗ್ರೆಸ್. ಡೆತ್‌ನೋಟ್‌ನಲ್ಲಿ ಕೆಲ ಉನ್ನತ ಅಧಿಕಾರಿಗಳ ಹೆಸರು ಹೇಳಲಾಗಿದೆ. ಸರ್ಕಾರ ನ್ಯಾಯಾಧೀಶರ ನೇತೃತ್ವದಲ್ಲಿ ಈ ಪ್ರಕರಣ ತನಿಖೆಗೆ ಕೊಡಲಿ” ಎಂದು ಆಗ್ರಹಿಸಿದರು.

ಚನ್ನಗಿರಿ ಘಟನೆಗೆ ಸಂಬಂಧಿಸಿ ಹರಿಹಾಯ್ದ ಅವರು, “ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಇಡೀ ದೇಶದಲ್ಲಿ ಚರ್ಚೆ ಆಗುತ್ತಿದೆ. ಚನ್ನಗಿರಿಯಲ್ಲಿ ನಡೆದ ಘಟನೆ ಪೊಲೀಸರಿಗೆ ಪೊಲೀಸರೇ ರಕ್ಷಣೆ ಕೊಡೋ ಪರಿಸ್ಥಿತಿ ಬಂದಿದೆ. ಚನ್ನಗಿರಿಯಲ್ಲಿ ನಡೆದ ಘಟನೆ ಮಟ್ಕಾಗೆ ಸಂಬಂಧಪಟ್ಟಿದ್ದು. ಅರೆಸ್ಟ್ ಆದ ವ್ಯಕ್ತಿ ಮೃತನಾಗಿದ್ದಾನೆ. ಇದರ ಬೆನ್ನಲ್ಲೇ ಸಾವಿರಾರು ಜನ ಠಾಣೆಗೆ ನುಗ್ಗಿ ಪೊಲೀಸರ ಮೇಲೆ ಹಲ್ಲೆ ಮಾಡಲಾಗಿದೆ. ಇದೆಲ್ಲ ನೋಡಿದ್ರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಿಗೆ ಬಂದು ಮುಟ್ಟಿದೆ ಅನ್ನೊದು ತಿಳಿಯುತ್ತದೆ. ಈ ರಾಜ್ಯದಲ್ಲಿ ಗೃಹ ಸಚಿವರು ಇದ್ದಾರೆ ಅನ್ನುವ ಅನುಮಾನ ಮೂಡುತ್ತಿದೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...