ರಾಜ್ಯದಲ್ಲಿ ಬರಗಾಲವಿದ್ದರೂ, ಅನುದಾನ ಬಿಡುಗಡೆ ಮಾಡದೇ ದಿವಾಳಿತನ ತೋರುತ್ತಿರುವ ಕೇಂದ್ರ ಸರ್ಕಾರ: ಕೆಪಿಸಿಸಿ ವಕ್ತಾರ ರಮೇಶ್ ಬಾಬು

Date:

ರಾಜ್ಯದಲ್ಲಿ ಈ ವರ್ಷ ವಾಡಿಕೆಯಂತೆ ಮಳೆಯಾಗದೇ ಬರಗಾಲ ಎದುರಾಗಿದೆ. ರೈತರಿಗೆ ಬೆಳೆ ಸಿಗದೆ ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ರಾಜ್ಯದಲ್ಲಿ ಇಷ್ಟೆಲ್ಲಾ ಸಮಸ್ಯೆ ಇದ್ದರೂ ಕೂಡ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಬೇಕಾದ ಅನುದಾನವನ್ನು ನೀಡುತ್ತಿಲ್ಲ. ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿಯ ಅರಿವಿದ್ದರೂ, ಹಣ ಬಿಡುಗಡೆ ಮಾಡದೇ ಕೇಂದ್ರದಲ್ಲಿರುವ ಮೋದಿ ಸರ್ಕಾರ ದಿವಾಳಿತನ ತೋರುತ್ತಿದೆ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಆರೋಪಿಸಿದ್ದಾರೆ.

- Advertisement -

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯದ ಲೋಕಸಭಾ ಸದಸ್ಯರಿಗೆ ನೀಡಬೇಕಾದ ಲೋಕಸಭಾ ಸ್ಥಳೀಯ ಕ್ಷೇತ್ರಾಭಿವೃದ್ಧಿ ಯೋಜನೆಯ ವಾರ್ಷಿಕ ₹5 ಕೋಟಿ ಹಣವನ್ನು ಪ್ರಸಕ್ತ ಸಾಲಿನಲ್ಲಿ ಕರ್ನಾಟಕದ ಲೋಕಸಭಾ ಸದಸ್ಯರಿಗೆ ಮತ್ತು ರಾಜ್ಯಸಭಾ ಸದಸ್ಯರಿಗೆ ಬಿಡುಗಡೆ ಮಾಡಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಪ್ರಸಕ್ತ ಸಾಲಿನಲ್ಲಿ ಒಟ್ಟು ಕರ್ನಾಟಕದ ಸದಸ್ಯರಿಗೆ ₹205 ಕೋಟಿ ಹಣವನ್ನು ಬಿಡುಗಡೆ ಮಾಡಬೇಕಾಗಿತ್ತು. ಕರ್ನಾಟಕದ ಬಿಜೆಪಿ ಲೋಕಸಭಾ ಸದಸ್ಯರು ತಮ್ಮ ಪಾಲಿನ ಹಣವನ್ನು ಕೇಳದೆ ಕದ್ದುಮುಚ್ಚಿ ಓಡಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಲೋಕಸಭಾ ಸದಸ್ಯರ ಪ್ರದೇಶಾಭಿವೃದ್ದಿ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯದ ಲೋಕಸಭಾ ಸದಸ್ಯರಿಗೆ 2023 ಡಿಸೆಂಬರ್ 2ಕ್ಕೆ ಒಟ್ಟು ₹488.5 ಕೋಟಿ  ಹಣ ಬಿಡುಗಡೆ ಮಾಡಲು ಅವಕಾಶವಿದೆ. ಆದರೆ, ಇಲ್ಲಿಯವರೆಗೆ ₹225 ಕೋಟಿ ಮಾತ್ರ ಬಿಡುಗಡೆ ಮಾಡಲಾಗಿದೆ. ಒಟ್ಟಾರೆ ₹263.5 ಕೋಟಿ ಹಣ ಬಿಡುಗಡೆಗೆ ಬಾಕಿ ಇದೆ” ಎಂದು ವಿವರಿಸಿದ್ದಾರೆ.

“ಇನ್ನು ಬಿಡುಗಡೆಯಾಗಿರುವ ಹಣದಲ್ಲಿ ₹40.94 ಕೋಟಿ ಉಪಯೋಗಿಸದೆ ಕೇಂದ್ರ ಸರ್ಕಾರದ ಖಾತೆಯಲ್ಲಿ ಬಾಕಿ ಇದೆ. ಪ್ರಚಾರಕ್ಕಾಗಿ ಬೊಬ್ಬೆ ಹೊಡೆಯುವ ಬಿಜೆಪಿಯ ಲೋಕಸಭಾ ಸದಸ್ಯರು ಕೇಂದ್ರದ ಅನುದಾನದ ಬಗ್ಗೆ ಬಾಯಿ ಬಿಚ್ಚುತ್ತಿಲ್ಲ” ಎಂದಿದ್ದಾರೆ.

“ಕಾನೂನಿನ ಪ್ರಕಾರ ಅವಕಾಶವಿರುವ ಹಣವನ್ನೇ ಬಳಸದ ರಾಜ್ಯ ಬಿಜೆಪಿ ಸಂಸದರು ಮತ್ತು ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಹಣಕಾಸು ಸಚಿವರಾಗಿರುವ ಕೇಂದ್ರದ ನಿರ್ಮಲ ಸೀತಾರಾಮನ್ ಅವರು ಕರ್ನಾಟಕಕ್ಕೆ ಮೋಸ ಎಸಗಿದ್ದಾರೆ” ಎಂದು ಹೇಳಿದ್ದಾರೆ.

“ಮೋದಿಯ ಹೆಸರನ್ನೇ ನೆಚ್ಚಿಕೊಂಡಿರುವ ಕರ್ನಾಟಕದ ಬಿಜೆಪಿ ಲೋಕಸಭಾ ಸದಸ್ಯರು ನಮ್ಮ ರಾಜ್ಯಕ್ಕೆ ಅನುದಾನಗಳನ್ನು ತರುವಲ್ಲಿ, ತೆರಿಗೆಯ ಪಾಲನ್ನು ಕೇಳುವಲ್ಲಿ ಕರ್ನಾಟಕದ ಅಭಿವೃದ್ಧಿ ಯೋಜನೆಗಳಿಗೆ ಒಪ್ಪಿಗೆ ಪಡೆಯುವಲ್ಲಿ ಕರ್ನಾಟಕದ ಜನರಿಗೆ ಉದ್ಯೋಗ ಕೊಡಿಸುವಲ್ಲಿ ವಿಫಲರಾಗಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಕಾಲ ಮಿಷನ್ | ರಾಜ್ಯದಲ್ಲಿ ಪ್ರಥಮ ಬಾರಿಗೆ ಎಸ್‌ಎಂಎಸ್‌ ಮೂಲಕ ಮೇಲ್ಮನವಿ ಸಲ್ಲಿಸುವ ಅವಕಾಶ

“ಕರ್ನಾಟಕದ ಬರಗಾಲದ ಬಗ್ಗೆ ಒಣ ಭಾಷಣ ಮಾಡುವ ರಾಜ್ಯ ಬಿಜೆಪಿ ನಾಯಕರು ಬಿಜೆಪಿ ಸಂಸದರು ಕೇಂದ್ರದ ತಮ್ಮ ಪಾಲಿನ ಅನುದಾನಗಳನ್ನು ಪಡೆದು ಅದನ್ನು ಬರ ಪರಿಹಾರ ನಿಧಿಗೆ ನೀಡಲು ಪ್ರದೇಶ ಕಾಂಗ್ರೆಸ್ ಒತ್ತಾಯಿಸುತ್ತದೆ. ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾಗಿ ರಾಜ್ಯ ಬಿಜೆಪಿ ಸಂಸದರ ಮೌನ ಖಂಡಿಸುತ್ತದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದ | ಕೊಪ್ಪದಲ್ಲಿ 243 ಮತದಾರರ ಹೆಸರು ಡಿಲೀಟ್‌ಗೆ ನೀಡಿದ್ದ ಅರ್ಜಿ ಹಿಂಪಡೆದ ಬಿಜೆಪಿ ಮುಖಂಡ

ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಮತ್ತು...

ಗ್ಯಾನೇಶ್ ಕುಮಾರ್ ಪರ ಬಿಜೆಪಿ ಬ್ಯಾಟಿಂಗ್: ಬೋಗಸ್ ಮತಗಳನ್ನು ತಡೆಯುವುದೇ SIR ಉದ್ದೇಶ ಎಂದ ಫಡ್ನವೀಸ್

ಚುನಾವಣಾ ಆಯೋಗದ (ಇಸಿಐ) ಸ್ವಾಯತ್ತತೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ...

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...