‘ಪ್ರತಿಯೊಬ್ಬ ಭಾರತೀಯರೂ ನಮ್ಮ ಮತಬ್ಯಾಂಕ್’; ಪ್ರಧಾನಿ ಮೋದಿಗೆ ಖರ್ಗೆ ಮತ್ತೊಂದು ಪತ್ರ

Date:

Advertisements

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ. ‘ದ್ವೇಷದ ಭಾಷಣ ಮಾಡುವ ಬದಲು ಕಳೆದ ಹತ್ತು ವರ್ಷಗಳಲ್ಲಿ ನಿಮ್ಮ ಸರ್ಕಾರ ಮಾಡಿದ ಸಾಧನೆಯ ಬಗ್ಗೆ ಮತ ಕೇಳುವುದು ಉತ್ತಮ’ ಎಂದು ಮೋದಿಗೆ ತಾಕೀತು ಮಾಡಿದ್ದಾರೆ.

ಮೋದಿಗೆ  ಬರೆದ ಪತ್ರವನ್ನು ಟ್ವೀಟ್ ಮಾಡಿರುವ ಖರ್ಗೆ, “ಚುನಾವಣಾ ಪ್ರಚಾರದಲ್ಲಿ ಮೋದಿ ಪದೇ ಪದೇ ಸುಳ್ಳು ಹೇಳುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

“ನೀವು ಮತದಾರರಿಗೆ ಏನು ಹೇಳಲು ಹೊರಟಿದ್ದೀರಿ ಎಂಬುದರ ಬಗ್ಗೆ ಎನ್‌ಡಿಎ ಅಭ್ಯರ್ಥಿಗಳಿಗೆ ನೀವು ಬರೆದಿರುವ ಪತ್ರವನ್ನು ಮಗನಿಸಿದ್ದೇನೆ. ನಿಮ್ಮ ಪತ್ರವು ನಿಮ್ಮಲ್ಲಿ ಸಾಕಷ್ಟು ಹತಾಶೆ ಮತ್ತು ಚಿಂತೆ ಇದೆ ಎಂಬುದನ್ನು ಸೂಚಿಸುತ್ತದೆ” ಎಂದು ಖರ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Advertisements

“ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಯಿಂದ ಮೀಸಲಾತಿಯನ್ನು ಕಿತ್ತು ‘ನಮ್ಮ ಮತಬ್ಯಾಂಕ್’ಗೆ ನೀಡಲಾಗುತ್ತದೆ ಎಂದು ನೀವು ಆರೋಪಿಸುತ್ತಿದ್ದೀರಿ. ನಮ್ಮ ಮತಬ್ಯಾಂಕ್ ಪ್ರತಿಯೊಬ್ಬ ಭಾರತೀಯ – ಬಡವರು, ಅಂಚಿನಲ್ಲಿರುವವರು, ಮಹಿಳೆಯರು, ಉದ್ಯೋಗಾಕಾಂಕ್ಷಿ ಯುವಜನರು, ಕಾರ್ಮಿಕ ವರ್ಗ, ದಲಿತರು – ನಮ್ಮ ಮತಬ್ಯಾಂಕ್. ಅಲ್ಲದೆ, 1947ರಿಂದ ಪ್ರತಿ ಹಂತದಲ್ಲೂ ಮೀಸಲಾತಿಯನ್ನು ವಿರೋಧಿಸಿದವರು ಆರ್‌ಎಸ್‌ಎಸ್ ಮತ್ತು ಬಿಜೆಪಿ ಎಂಬುದು ಎಲ್ಲರಿಗೂ ತಿಳಿದಿದೆ” ಎಂದು ಖರ್ಗೆ ಕಿಡಿಕಾರಿದ್ದಾರೆ.

“ನಿಮ್ಮ ಅಭ್ಯರ್ಥಿಗಳು ಕೂಡ ನಿಮ್ಮ ಸುಳ್ಳನ್ನು ಪದೇ ಪದೇ ಪುನರುಚ್ಚಾರ ಮಾಡಬೇಕೆಂದು ನೀವು ಬಯಸುತ್ತೀರಿ. ಸುಳ್ಳನ್ನು ಸಾವಿರ ಬಾರಿ ಮತ್ತೆ ಮತ್ತೆ ಹೇಳುವುದರಿಂದ ಅದು ಸತ್ಯವಾಗುವುದಿಲ್ಲ” ಎಂದು ಖರ್ಗೆ ಹೇಳಿದ್ದಾರೆ.

“ಮತದಾರರು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಏನಿದೆ ಮತ್ತು ಯಾವ ಭರವಸೆಗಳಿವೆ ಎಂಬುದನ್ನು ಸ್ವತಃ ಓದುವ ಮತ್ತು ಅರ್ಥಮಾಡಿಕೊಳ್ಳುವಷ್ಟು ಬುದ್ಧಿವಂತರಿದ್ದಾರೆ. ನಮ್ಮ ಪ್ರಣಾಳಿಕೆಯು ನ್ಯಾಯ ಮತ್ತು ಸಮಾಜದ ಎಲ್ಲ ವರ್ಗದ ಬೆಳವಣಿಗೆಯನ್ನು ಖಾತ್ರಿಪಡಿಸುತ್ತದೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X