ಪ್ರತಿ ತಿಂಗಳು ನಾನು ಮತ್ತು ಸಿಎಂ ಸೇರಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡುತ್ತೇವೆ: ಡಿ ಕೆ ಶಿವಕುಮಾರ್

Date:

Advertisements

ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಬಲವರ್ಧನೆಗೆ “ಕಾಂಗ್ರೆಸ್ ಕುಟುಂಬ” ಕಾರ್ಯಕ್ರಮ ರೂಪಿಸಲಾಗುವುದು. ನಾನು ಹಾಗೂ ಮುಖ್ಯಮಂತ್ರಿಗಳು ಚರ್ಚೆ ಮಾಡಿದ್ದು, ಪ್ರತಿ ತಿಂಗಳು ಒಂದು ದಿನ ಕಾಂಗ್ರೆಸ್ ಕಚೇರಿಯಲ್ಲಿ ಕೂತು ಕಾರ್ಯಕರ್ತರನ್ನು ಭೇಟಿ ಮಾಡುವ ಕೆಲಸ ಮಾಡಲಿದ್ದೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ತಿಳಿಸಿದರು.

ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಸೋಮವಾರ ನಡೆದ ನೆಹರೂ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಜೂನ್ 1ರಂದು ಪಕ್ಷದ ಪದಾಧಿಕಾರಿಗಳ ಸಭೆ ಕರೆದಿದ್ದೇವೆ. ಪ್ರತಿ ಬೂತ್ ನಲ್ಲಿ 50 ಸದಸ್ಯರನ್ನು ಸೇರಿಸಬೇಕು. ಆ ಬೂತ್ ಹಾಗೂ ಹಳ್ಳಿಗಳಲ್ಲಿ ಏನೇ ಕಾರ್ಯಕ್ರಮ ಮಾಡಿದರೂ ಆ 50 ಮಂದಿಯನ್ನು ಸೇರಿಸಿ ತೀರ್ಮಾನ ಮಾಡಬೇಕು. ಆಮೂಲಕ ಕಾಂಗ್ರೆಸ್ ಪಕ್ಷವನ್ನು ಕಾರ್ಯಕರ್ತರ ಪಕ್ಷವಾಗಿ ಮಾಡಬೇಕು. ಯಾರು ಎಷ್ಟೇ ದೊಡ್ಡ ನಾಯಕರಾಗಿದ್ದರೂ ಅವರು ಈ ಜವಾಬ್ದಾರಿ ತೆಗೆದುಕೊಂಡು ಈ ಕಾಂಗ್ರೆಸ್ ಕುಟುಂಬವನ್ನು ಬೆಳೆಸಲೇಬೇಕು” ಎಂದರು.

“ಮಂತ್ರಿಗಳು ವಾರ ಮುಂಚಿತವಾಗಿ ದಿನಾಂಕ ನಿಗದಿ ಮಾಡಿ ಕಾರ್ಯಕರ್ತರನ್ನು ಭೇಟಿ ಮಾಡಬೇಕು. ಷ್ಟೋ ಬಾರಿ ಕಾರ್ಯಕರ್ತರು ನಮ್ಮನ್ನು ಭೇಟಿ ಮಾಡಲು ದೂರದ ಊರುಗಳಿಂದ ಬರುತ್ತಾರೆ. ಆದರೆ ನಾವು ಅವರನ್ನು ಭೇಟಿ ಮಾಡಲು ಆಗುವುದಿಲ್ಲ. ಪ್ರಮುಖರನ್ನೇ ಮೊದಲು ಕರೆದು ಮಾತನಾಡಿಸುತ್ತೇವೆ. ಇದರಿಂದ ನಮಗೂ ಮುಜುಗರವಾಗುತ್ತದೆ. ನಮ್ಮನ್ನು ವಿಧಾನಸೌಧದಲ್ಲಿ ಕೂರಿಸಿದವರ ಜತೆ ನಮಗೆ ಮಾತನಾಡಲು ಆಗುವುದಿಲ್ಲ. ಈ ಅನುಭವ ನನಗೂ ಆಗಿದೆ. ಹೀಗಾಗಿ ಈ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ”ಎಂದು ವಿವರಿಸಿದರು.

Advertisements

“ನಮ್ಮ ಸರ್ಕಾರ 10 ವರ್ಷದ ಸರ್ಕಾರ ಆಗಿರಬೇಕು. ಇದಕ್ಕಾಗಿ ನಾವು ಈಗೀನಿಂದಲೂ ತಯಾರಿ ನಡೆಸಬೇಕು. ನಾನು ಈಗಾಗಲೇ ನಮ್ಮ ಸಚಿವರಾದ ರಾಮಲಿಂಗಾ ರೆಡ್ಡಿ ಹಾಗೂ ಕೃಷ್ಣಬೈರೇಗೌಡ ಅವರ ಜತೆ ಚರ್ಚೆ ಮಾಡಿದ್ದೇನೆ. ನಾವು ನಮ್ಮ ದೇವಾಲಯವಾಗಿರುವ ಕಾಂಗ್ರೆಸ್ ಕಚೇರಿಗೆ ಮೊದಲ ಆದ್ಯತೆ ನೀಡಬೇಕು. ರಾಜ್ಯದ ಎಲ್ಲಾ ಜಿಲ್ಲಾ ಕಾಂಗ್ರೆಸ್ ಕಚೇರಿಗಳ ನಿರ್ಮಾಣಕ್ಕೆ ಮುಂದಿನ ಒಂದು ವರ್ಷದಲ್ಲಿ ಅಡಿಪಾಯ ಹಾಕುತ್ತೇವೆ. ಇನ್ನು ರೇಸ್ ಕೋರ್ಸ್ ರಸ್ತೆಯ ಕಚೇರಿಯ ಕಟ್ಟಡ ಒಡೆದು ಹಾಕಿ ಹೊಸದಾಗಿ ನಿರ್ಮಾಣ ಮಾಡುತ್ತೇವೆ. ಎಲ್ಲಾ ಜಿಲ್ಲೆಗಳಲ್ಲಿ ಸಚಿವರು, ಶಾಸಕರು, ಕಾರ್ಯಕರ್ತರು ಇದರ ಹೊಣೆ ಹೊರಬೇಕು. ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಈ ಕೆಲಸ ಆರಂಭವಾಗಿವೆ” ಎಂದು ಹೇಳಿದರು.

“ಎಲ್ಲರೂ ಒಟ್ಟಾಗಿ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಪರಿಷತ್ ಚುನಾವಣೆ ಎದುರಿಸಬೇಕು. ನಮ್ಮ ಪಕ್ಷ ಆರಕ್ಕೆ ಆರು ಕ್ಷೇತ್ರಗಳಲ್ಲಿ ಗೆಲ್ಲಬೇಕು. ಆಮೂಲಕ ಮೇಲ್ಮನೆಯಲ್ಲಿ ನಮಗೆ ಬಹುಮತ ಸಿಗಬೇಕು. ಆಗ ಮಾತ್ರ ಬಿಲ್ ಗಳು ಪಾಸಾಗುತ್ತವೆ” ಎಂದರು.

ನೆಹರೂ ಅವರು ಕಾಂಗ್ರೆಸ್ ಪಕ್ಷದ ಶಕ್ತಿ

“ನೆಹರೂ ಅವರ ಹೇಸರೇ ಕಾಂಗ್ರೆಸ್ ಪಕ್ಷ ಹಾಗೂ ಕಾರ್ಯಕರ್ತರಿಗೆ ಒಂದು ಸ್ಫೂರ್ತಿ. ಈ ದೇಶದಲ್ಲಿ ಸಂವಿಧಾನದ ಅಡಿಯಲ್ಲಿ ನಾವು ಕೆಲಸ ಮಾಡುತ್ತಿದ್ದು ಇದಕ್ಕೆ ಭದ್ರ ಅಡಿಪಾಯ ಹಾಕಿದ್ದು ನೆಹರೂ ಅವರು. ಈ ಇತಿಹಾಸ ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿ ನಾಯಕರು ಇತಿಹಾಸ ತಿರುಚಲು, ಅವರ ಹೆಸರನ್ನು ಇತಿಹಾಸ ಪುಟಗಳಿಂದ ತೆಗೆಯಲು ಬಹಳ ಪ್ರಯತ್ನ ಮಾಡುತ್ತಿದ್ದಾರೆ. ಅವರು ಇನ್ನು 2-3 ಜನ್ಮ ಎತ್ತಿ ಬಂದರೂ ನೆಹರೂ ಅವರ ಸಾಧನೆ ತೆಗೆದುಹಾಕಲು ಸಾಧ್ಯವಿಲ್ಲ” ಎಂದು ಹೇಳಿದರು.

“ಸ್ಥಳೀಯ ಸಂಸ್ಥೆಗಳ ವಿಚಾರವಾಗಿ ಇತ್ತೀಚೆಗೆ ನಾನು ಮಾತನಾಡಿದ್ದೆ. ನೆಹರೂ ಅವರು ಸ್ವಾತಂತ್ರ್ಯ ಸಂಗ್ರಾಮದಲ್ಲಿದ್ದರೂ ಅಲಹಬಾದ್ ಮುನ್ಸಿಪಲ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವರು ಸ್ವಾತಂತ್ರ್ಯ ಹೋರಾಟ ಮಾಡಿಕೊಂಡು ಜೈಲು ವಾಸ ಅನುಭವಿಸಿ ನಂತರ ಪ್ರಧಾನಮಂತ್ರಿಯಾದರು. ಪ್ರತಿ ರಾಜ್ಯದಲ್ಲೂ ಅವರದೇ ಆದ ಸಾಕ್ಷಿಗಳನ್ನು ಬಿಟ್ಟಿದ್ದಾರೆ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

ಅಲೆಮಾರಿಗಳ ಹಕ್ಕು ತಿರಸ್ಕರಿಸಿದ ಸಿಎಂ; ಹೋರಾಟ ತೀವ್ರಗೊಳಿಸಲು ನಿರ್ಧಾರ

"ಹೋರಾಟದ ಮಾದರಿ ಬದಲಿಸೋಣ. ನಮ್ಮ ಕಷ್ಟ ಜನರಿಗೆ ಗೊತ್ತಾಗಲಿ. ಅಲೆಮಾರಿಗಳು ವಾಪಸ್‌...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X