ಪಕ್ಷಕ್ಕಾಗಿ ದುಡಿದ ಎಲ್ಲರಿಗೂ ಅವಕಾಶ ಸಿಗಬೇಕು: ಡಿಸಿಎಂ ಡಿ ಕೆ ಶಿವಕುಮಾರ್

Date:

ನಿಗಮ ಮಂಡಳಿ ಅಧಿಕಾರವಧಿ ಎರಡು ವರ್ಷಕ್ಕೆ ಮೀಸಲಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ, “ಪಕ್ಷಕ್ಕೆ ದುಡಿದ ಎಲ್ಲ ಶಾಸಕರು, ಕಾರ್ಯಕರ್ತರಿಗೆ ಅಧಿಕಾರ ಸಿಗಲಿ. ಹಾಗಾಗಿ, ನಿಗಮ ಮಂಡಳಿಗಳಿಗೆ ಎರಡು ವರ್ಷ ಅವಧಿಯ ಸೂತ್ರವನ್ನು ಹೈಕಮಾಂಡ್ ಮಾಡಿದೆ” ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು.

- Advertisement -

ಈ ಬಗ್ಗೆ ಭಾನುವಾರ ಸದಾಶಿವನಗರದ ಅವರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪಕ್ಷದ ಎಲ್ಲರಿಗೂ ಅವಕಾಶ ದೊರೆಯಬೇಕು. ಇತರರಿಗೂ ಅಧಿಕಾರ ಹಂಚಬೇಕು. ಆದ ಕಾರಣ 2 ವರ್ಷ ಮಾತ್ರ ಅಧಿಕಾರವಧಿ ಎಂದು ಹೇಳಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಹೈಕಮಾಂಡ್ ಕೊಟ್ಟಿರುವ ಸೂತ್ರವನ್ನು ನಾವು ಜಾರಿಗೆ ತಂದಿದ್ದೇವೆ. ಇಲ್ಲಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಅವರದ್ದೂ ಏನೂ ಇಲ್ಲ. ಪಕ್ಷ ಅಧಿಕಾರಕ್ಕೆ ಬರಲು ಸಾಕಷ್ಟು ಕಾರ್ಯಕರ್ತರು ದುಡಿದಿದ್ದಾರೆ. ಆದ ಕಾರಣ ಎಲ್ಲರಿಗೂ ಅವಕಾಶ ನೀಡಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಂಚಾರ ದಟ್ಟಣೆ ನಿವಾರಣೆಗೆ ಡ್ರೋನ್‌ಗಳ ಹಾರಾಟ

ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎನ್ನುವ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, “ಕರ್ನಾಟಕದಲ್ಲಿ 224 ಸ್ಥಾನ ಗೆಲ್ಲುತ್ತೇವೆ ಎಂದು ಬಿಜೆಪಿ ಹೇಳುತ್ತಿತ್ತು. ಆದರೆ, ಈಗ ಏನಾಯಿತು?” ಎಂದು ಪ್ರಶ್ನಿಸಿದರು.

“ಬಿಜೆಪಿಯವರು ಲೋಕಸಭೆಯ 543 ಸ್ಥಾನಗಳನ್ನೂ ಗೆಲ್ಲಲಿ. ಬೇಡ ಎಂದವರು ಯಾರು? ವಿಧಾನಸಭಾ ಚುನಾವಣೆಯಲ್ಲಿ ನಾವು 136 – 140 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ದೆವು. ಅವರು 224 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರು. ಆನಂತರ ಏನಾಯಿತು”?” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು....

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...